Toxic: ಟಾಕ್ಸಿಕ್ ಬಿಡುಗಡೆಗೂ ಮುನ್ನವೇ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ನಯನತಾರಾ? ಫೋಟೋ ವೈರಲ್!
ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಮುನ್ನವೇ ಆ ಸಿನಿಮಾದಲ್ಲಿ ಅಭಿನಯಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಅವರ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದೆ.

ಭಾರತೀಯ ಚಿತ್ರರಂಗದಲ್ಲಿ ಭಾರೀ ನಿರೀಕ್ಷೆ ಮೂಡಿಸಿರುವ ರಾಕಿಂಗ್ ಸ್ಟಾರ್ ಯಶ್, ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಮತ್ತು ನಯನತಾರಾ ಅಭಿನಯದ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಇದೇ ಆಗಸ್ಟ್ 26ರಂದು ವಿಶ್ವದಾದ್ಯಂತ ತೆರೆ ಕಾಣಲಿದೆ.
ಬಹುನಿರೀಕ್ಷಿತ 'ಟಾಕ್ಸಿಕ್' ಸಿನಿಮಾ ಬಿಡುಗಡೆಗೆ ಮುನ್ನವೇ ಆ ಸಿನಿಮಾದಲ್ಲಿ ಅಭಿನಯಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ನಯನತಾರಾ ಅವರ ಫೋಟೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಭಾರೀ ವೈರಲ್ ಆಗಿದ್ದು, ಸ್ಟಾರ್ ನಟಿ ತಿರುಪತಿ ತಿಮ್ಮಪ್ಪನಿಗೆ ಮುಡಿ ಕೊಟ್ರಾ ಎಂಬ ಪ್ರಶ್ನೆ ಅಭಿಮಾನಿಗಳನ್ನು ಕಾಡುತ್ತಿದೆ.
ವೈರಲ್ ಆಗಿರುವ ಫೋಟೋದಲ್ಲಿ ನಯನತಾರಾ ಅವರು ದೇವಸ್ಥಾನದ ಹೊರಗೆ ಬೋಳು ತಲೆಯಲ್ಲಿ ಕಾಣಿಸಿಕೊಂಡಿದ್ದಾರೆ. ಟಾಕ್ಸಿಕ್ ಸಿನಿಮಾದ ಬಿಡುಗಡೆಗೂ ಮುನ್ನವೇ ನಟಿ ಮುಡಿ ಕೊಟ್ಟಿದ್ದಾರೆ ಎಂಬ ಅಡಿಬರಹದೊಂದಿಗೆ ಈ ಫೋಟೋಗಳನ್ನು ವೈರಲ್ ಮಾಡಲಾಗಿದೆ. ಆದರೆ, ಈ ಫೋಟೋಗಳ ಹಿಂದಿನ ಅಸಲಿಯತ್ತೇ ಬೇರೆಯೇ ಇದೆ.
ವಾಸ್ತವ ಏನೆಂದರೆ, ವೈರಲ್ ಆಗಿರುವ ಫೋಟೋಗಳು ಅಸಲಿಯಲ್ಲ, ಬದಲಿಗೆ ಕೃತಕ ಬುದ್ಧಿಮತ್ತೆ ಸಹಾಯದಿಂದ ಕ್ರಿಯೇಟ್ ಮಾಡಿರುವ ನಕಲಿ ಚಿತ್ರಗಳಾಗಿವೆ. ಕೆಲ ಕಿಡಿಗೇಡಿಗಳು ಎಐ ಮೂಲಕ ಎಡಿಟ್ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.
ಇನ್ನೂ ನಯನತಾರಾ ಅವರ ಬೋಳು ತಲೆಯ ಚಿತ್ರಗಳ ಬಗ್ಗೆ ನೆಟ್ಟಿಗರು ತರಹೇವಾರಿ ಕಾಮೆಂಟ್ಗಳನ್ನು ಮಾಡಿದ್ದಾರೆ. ಫೋಟೋ ಏನೋ ಚೆನ್ನಾಗಿದೆ ಆದರೆ, ಮುಂದಿನ ಬಾರಿ ದಯವಿಟ್ಟು AI ವಾಟರ್‌ಮಾರ್ಕ್ ತೆಗೆದುಹಾಕಿ ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದರ, "ಖಂಡಿತವಾಗಿಯೂ ಇದು AI ನಿಂದ ಸೃಷ್ಟಿಸಲ್ಪಟ್ಟಿದ್ದು, ನಾಯಕಿಯರು ಯಾವುದಕ್ಕೂ ತಲೆ ಬೋಳಿಸಿಕೊಳ್ಳುವುದಿಲ್ಲ ಎಂದು ಮತ್ತೊಬ್ಬರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ವೈರಲ್ ಫೋಟೋ ಕಳೆದ ಏಪ್ರಿಲ್‌ನಲ್ಲಿ ನಯನತಾರಾ ಅವರು ತಮ್ಮ ಪತಿ ವಿಘ್ನೇಶ್ ಶಿವನ್ ಅವರೊಂದಿಗೆ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಸಂದರ್ಭದ ತೆಗೆದ ಫೋಟೋಗಳಾಗಿದ್ದು, ಅದನ್ನು AI ಮೂಲಕ ನಕಲು ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



