ಹಿಂದಿ ಚಿತ್ರರಂಗಕ್ಕೆ ಕಾಲಿಟ್ಟ ಶಿವಣ್ಣ: ಬಾಲಿವುಡ್ ನಲ್ಲಿ ಸೆಂಚ್ಯುರಿ ಸ್ಟಾರ್ ಹವಾ!
2023ರಲ್ಲಿ ತೆರೆಗೆ ಬಂದ ‘ಜೈಲರ್’ ಸಿನಿಮಾದಲ್ಲಿ ನರಸಿಂಹನ ಪಾತ್ರದಲ್ಲಿ ಶಿವಣ್ಣ ನಟಿಸಿದ್ದರು. ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲೂ ಶಿವಣ್ಣ ಅಭಿನಯಿಸಿದ್ದರು. ಇತ್ತೀಚೆಗಷ್ಟೇ ತೆರೆಗೆ ಬಂದ ತೆಲುಗಿನ ‘ಪೆದ್ದಿ’ ಚಿತ್ರದಲ್ಲೂ ಶಿವಣ್ಣನ ಖದರ್ ಜೋರಾಗಿತ್ತು.

ತೆಲುಗು, ತಮಿಳು ಸಿನಿಮಾ ನಂತರ ಹಿರಿಯ ನಟ ಶಿವರಾಜ್ ಕುಮಾರ್ ಆರ್. ಚಂದ್ರು ನಿರ್ದೇಶನದ ಇನ್ನೂ ಹೆಸರಿಡದ ಹೊಸ ಸಿನಿಮಾ ಮೂಲಕ ಬಾಲಿವುಡ್ ಪ್ರವೇಶಿಸಿದ್ದಾರೆ.
ಕನ್ನಡ - ಹಿಂದಿಯಲ್ಲಿ ಏಕಕಾಲಕ್ಕೆ ತಯಾರಾಗಲಿದೆ ಸಿನಿಮಾ ನಿರ್ಮಾಣವಾಗಲಿದೆ. ಆನಂದ್ ಪಂಡಿತ್ ಮೋಷನ್ ಪಿಕ್ಚರ್ಸ್ ಮತ್ತು ಆರ್‌ಸಿ ಸ್ಟುಡಿಯೋಸ್ ಅಡಿಯಲ್ಲಿ ನಿರ್ಮಿಸಲಾಗುವ ಈ ಯೋಜನೆಯನ್ನು ದೊಡ್ಡ ಪ್ರಮಾಣದ ಬಹುಭಾಷಾ ಸಿನಿಮಾವಾಗಿ ತಯಾರಿಸಲು ಪ್ಲಾನ್ ಮಾಡಲಾಗಿದೆ. ಈ ಚಿತ್ರವನ್ನು ಕನ್ನಡ ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಚಿತ್ರೀಕರಿಸಲಾಗುವುದು ಮತ್ತು ಬಹು ಭಾಷೆಗಳಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
2023ರಲ್ಲಿ ತೆರೆಗೆ ಬಂದ ‘ಜೈಲರ್’ ಸಿನಿಮಾದಲ್ಲಿ ನರಸಿಂಹನ ಪಾತ್ರದಲ್ಲಿ ಶಿವಣ್ಣ ನಟಿಸಿದ್ದರು. ‘ಕ್ಯಾಪ್ಟನ್ ಮಿಲ್ಲರ್’ ಚಿತ್ರದಲ್ಲೂ ಶಿವಣ್ಣ ಅಭಿನಯಿಸಿದ್ದರು. ಇತ್ತೀಚೆಗಷ್ಟೇ ತೆರೆಗೆ ಬಂದ ತೆಲುಗಿನ ‘ಪೆದ್ದಿ’ ಚಿತ್ರದಲ್ಲೂ ಶಿವಣ್ಣನ ಖದರ್ ಜೋರಾಗಿತ್ತು. ಇದೀಗ ಶಿವಣ್ಣನ ಅಬ್ಬರ ಉತ್ತರ ಭಾರತಕ್ಕೂ ತಲುಪಲಿದೆ.
ಕಬ್ಜ ಚಿತ್ರದ ಬಳಿಕ ಹೊಸ ಪ್ರಾಜೆಕ್ಟ್‌ಗೆ ಆರ್ ಚಂದ್ರು ಕೈಹಾಕಿದ್ದಾರೆ. ‘ಕಬ್ಜ’ಗಿಂತಲೂ ದೊಡ್ಡ ಮಟ್ಟದಲ್ಲಿ ಸಿನಿಮಾ ಮಾಡಲು ಆರ್ ಚಂದ್ರು ಹೊರಟಿದ್ದಾರೆ.
ಕನ್ನಡ ಹಾಗೂ ಹಿಂದಿಯಲ್ಲಿ ಆರ್ ಚಂದ್ರು ನಿರ್ದೇಶಿಸುವ ಚಿತ್ರದಲ್ಲಿ ಶಿವರಾಜ್‌ಕುಮಾರ್ ಹೀರೋ ಆಗಿ ನಟಿಸಲಿದ್ದಾರಂತೆ. ಆ ಮೂಲಕ ಇದೇ ಮೊದಲ ಬಾರಿಗೆ ಬಾಲಿವುಡ್‌ಗೆ ಹಾರಲಿದ್ದಾರೆ ಶಿವರಾಜ್‌ಕುಮಾರ್. ಆಗಸ್ಟ್ 28 ರಂದು ಮುಂಬೈನಲ್ಲಿ ನಡೆಯುವ ಅದ್ಧೂರಿ ಕಾರ್ಯಕ್ರಮದಲ್ಲಿ ಶೀರ್ಷಿಕೆ ಮತ್ತು ಮೋಷನ್ ಪೋಸ್ಟರ್ ಅನ್ನು ಅನಾವರಣಗೊಳಿಸಲಾಗುವುದು.
ಪ್ಯಾನ್ ಇಂಡಿಯಾ ಮಟ್ಟದಲ್ಲಿ.. ಗ್ಲೋಬಲ್ ಲೆವೆಲ್‌ನಲ್ಲಿ ಈ ಪ್ರಾಜೆಕ್ಟ್ ತಯಾರಾಗಲಿದ್ದು, ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಏಕಕಾಲಕ್ಕೆ ಸಿದ್ಧವಾಗಲಿದೆ. ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲೂ ಈ ಚಿತ್ರ ರಿಲೀಸ್ ಆಗಲಿದೆ.
ಶಿವಣ್ಣ ಹೀರೋ ಆಗಿ ಅಭಿನಯಿಸಲಿರುವ ಈ ಚಿತ್ರದಲ್ಲಿ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿಯ ಟಾಪ್ ಸ್ಟಾರ್ಸ್ ಸಹ ನಟಿಸಲಿದ್ದಾರಂತೆ. ನಿರ್ಮಾಪಕ ಆನಂದ್ ಪಂಡಿತ್ ಈ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್ ಗೆ ಉತ್ತಮವಾದ ಬೆಂಬಲವನ್ನು ನೀಡುತ್ತಿದ್ದಾರೆ.
ಶಿವಣ್ಣ ಸದ್ಯ ತಮಿಳಿನಲ್ಲಿ ರಜನಿಕಾಂತ್ ಅವರೊಂದಿಗೆ ಜೈಲರ್ 2 ಮತ್ತು ತೆಲುಗು ಚಿತ್ರ ಗುಮ್ಮಡಿ ನರಸಯ್ಯ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಪವನ್ ಒಡೆಯರ್ ನಿರ್ದೇಶನದ ಬೇಲ್ ಕೂಡ ಬಿಡುಗಡೆಗೆ ಸಜ್ಜಾಗುತ್ತಿದೆ. ಅವರು ಶ್ರೀನಿ ಅವರೊಂದಿಗೆ. ಎ ಫಾರ್ ಆನಂದ್ ಮತ್ತು ಹೇಮಂತ್ ಎಂ ರಾವ್ ಅವರ 666 ಆಪರೇಷನ್ ಡ್ರೀಮ್ ಥಿಯೇಟರ್‌ನಲ್ಲಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



