ನಾಳೆ 'ಟಾಕ್ಸಿಕ್' ತೆರೆಗೆ: ಧರ್ಮಸ್ಥಳ ಸನ್ನಿಧಿಗೆ ಯಶ್ ಭೇಟಿ; Video
ನಂತರ ಯಶ್ ಮತ್ತು ಚಿತ್ರದ ನಿರ್ಮಾಪಕ ವೆಂಕಟೇಶ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನಿಗೆ ನಾಳೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸುತ್ತಿದ್ದಾರೆ.

ಮಂಗಳೂರು: ರಾಕಿಂಗ್ ಸ್ಟಾರ್ ಯಶ್ ತಮ್ಮ ಮುಂಬರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಇಂದು ಚೆನ್ನೈನಿಂದ ವಿಶೇಷ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿದರು. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ನಟ ಯಶ್ ಅವರಿಗೆ ಅದ್ದೂರಿ ಸ್ವಾಗತ ದೊರೆಯಿತು.
ನಂತರ ಯಶ್ ಮತ್ತು ಚಿತ್ರದ ನಿರ್ಮಾಪಕ ವೆಂಕಟ್ ಕೆ ನಾರಾಯಣ ಅವರು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನಿಗೆ ನಾಳೆ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗಲಿರುವ ಹಿನ್ನೆಲೆಯಲ್ಲಿ ವಿಶೇಷ ಪೂಜೆ ನೆರವೇರಿಸುತ್ತಿದ್ದಾರೆ.
ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಯಾಗುವ ಮುನ್ನ ಯಶ್ ಅವರ ಧರ್ಮಸ್ಥಳ ಭೇಟಿ ನಡೆಯುತ್ತಿದೆ. ಸಾಮಾನ್ಯವಾಗಿ ಈ ಹಿಂದೆಯೂ ಅವರು ತಮ್ಮ ಚಿತ್ರಗಳ ಬಿಡುಗಡೆ ಸಂದರ್ಭದಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡುತ್ತಿದ್ದರು. ಅದೇ ಸಂಪ್ರದಾಯವನ್ನು ಈ ಬಾರಿ ಮುಂದುವರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



