ಸಿನಿಮಾ ಸುದ್ದಿ

ಸಾಯಿ ಪಲ್ಲವಿಗೆ ಕೊಕ್: ಎಂ.ಎಸ್ ಸುಬ್ಬುಲಕ್ಷ್ಮಿ ಬಯೋಪಿಕ್ ನಲ್ಲಿ ರಶ್ಮಿಕಾ ಮಂದಣ್ಣ!

ಸಾಯಿ ಪಲ್ಲವಿ ಅವರನ್ನು ಆರಂಭದಲ್ಲಿ ಈ ಪಾತ್ರಕ್ಕೆ ಪರಿಗಣಿಸಲಾಗಿತ್ತು ಮತ್ತು ಚಿತ್ರದ ಭಾಗವಾಗಲು ಉತ್ಸುಕರಾಗಿದ್ದರು ಎಂದು ವರದಿಯಾಗಿದೆ

ಸಾಯಿ ಪಲ್ಲವಿಗೆ ಕೊಕ್: ಎಂ.ಎಸ್ ಸುಬ್ಬುಲಕ್ಷ್ಮಿ ಬಯೋಪಿಕ್ ನಲ್ಲಿ ರಶ್ಮಿಕಾ ಮಂದಣ್ಣ!
ಎಂ.ಎಸ್ ಸುಬ್ಬುಲಕ್ಷ್ಮಿ ಮತ್ತು ರಶ್ಮಿಕಾ ಮಂದಣ್ಣ
Published On :

ಪ್ರಸಿದ್ಧ ಗಾಯಕಿ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನ ಚರಿತ್ರೆ ಆಧಾರಿತ ಚಿತ್ರವೊಂದು ರೂಪುಗೊಳ್ಳುತ್ತಿದ್ದು, ರಶ್ಮಿಕಾ ಮಂದಣ್ಣ ಅವರನ್ನು ಪ್ರತಿಷ್ಠಿತ ಪಾತ್ರಕ್ಕೆ ಪರಿಗಣಿಸಲಾಗುತ್ತಿದೆ ಎಂದು ವರದಿಯಾಗಿದೆ. ಮುಂದಿನ ತಿಂಗಳು ಅಧಿಕೃತ ಘೋಷಣೆ ಹೊರಬೀಳುವ ನಿರೀಕ್ಷೆಯಿದೆ.

ನಿರ್ಮಾಪಕರಾದ ಬನ್ನಿ ವಾಸ್, ಅಲ್ಲು ಅರವಿಂದ್ ಮತ್ತು ರಾಕ್‌ಲೈನ್ ವೆಂಕಟೇಶ್ ಅವರು ಖ್ಯಾತ ಗಾಯಕಿಯ ಜೀವನ ಚರಿತ್ರೆಯನ್ನು ಆಧರಿಸಿದ ಈ ಮಹತ್ವಾಕಾಂಕ್ಷೆಯ ಯೋಜನೆಯಲ್ಲಿ ಒಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸಾಯಿ ಪಲ್ಲವಿ ಅವರನ್ನು ಆರಂಭದಲ್ಲಿ ಈ ಪಾತ್ರಕ್ಕೆ ಪರಿಗಣಿಸಲಾಗಿತ್ತು ಮತ್ತು ಚಿತ್ರದ ಭಾಗವಾಗಲು ಉತ್ಸುಕರಾಗಿದ್ದರು ಎಂದು ವರದಿಯಾಗಿದೆ. ಭಾರತೀಯ ಶಾಸ್ತ್ರೀಯ ಸಂಗೀತ ಲೋಕದ ದಿಗ್ಗಜ ಗಾಯಕಿಯ ಪಾತ್ರವನ್ನು ತೆರೆಯ ಮೇಲೆ ತರಲು ಚಿತ್ರತಂಡ ಬಿರುಸಿನ ತಯಾರಿ ನಡೆಸಿದೆ. ಈ ಬಿಗ್ ಪ್ರಾಜೆಕ್ಟ್ ಕುರಿತು ಸೆಪ್ಟೆಂಬರ್ 16ರಂದು ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜನ್ಮದಿನದಂದು ಅಧಿಕೃತ ಘೋಷಣೆ ಹೊರಬೀಳಲಿದೆ.

ಆರಂಭದಲ್ಲಿ ಈ ಬಯೋಪಿಕ್ ಚಿತ್ರಕ್ಕಾಗಿ ನಟಿ ಸಾಯಿ ಪಲ್ಲವಿ ಅವರನ್ನು ಆಯ್ಕೆ ಮಾಡಲು ಉದ್ದೇಶಿಸಲಾಗಿತ್ತು. ಆದರೆ ರಾಮಾಯಣ"ದ ಎರಡೂ ಭಾಗಗಳಿಗೆ ಕಮಿಟ್ ಮೆಂಟ್ ಇರುವುದರಿಂದ ಮುಂದಿನ ವರ್ಷದವರೆಗೆ ಅವರ ಚಿತ್ರೀಕರಣದ ವೇಳಾಪಟ್ಟಿಯನ್ನು ಕಾರ್ಯನಿರತವಾಗಿಸಿದೆ.

ಇದರಿಂದಾಗಿ ಅವರಿಗೆ ಬಯೋಪಿಕ್ ಗಾಗಿ ಡೇಟ್ ಹೊಂದಿಸಿಕೊಳ್ಳಲು ಕಷ್ಟವಾಗುತ್ತಿದೆ. ನಿರ್ಮಾಪಕರು ಈಗ ಈ ಪಾತ್ರಕ್ಕಾಗಿ ರಶ್ಮಿಕಾ ಮಂದಣ್ಣ ಅವರನ್ನು ಸಂಪರ್ಕಿಸಿದ್ದಾರೆ ಎಂದು ವರದಿಯಾಗಿದೆ.

ಎಂ.ಎಸ್. ಸುಬ್ಬುಲಕ್ಷ್ಮಿ ಅವರಂತಹ ಮಹಾನ್ ಗಾಯಕಿಯ ಪಾತ್ರ ಮಾಡುವುದು ರಶ್ಮಿಕಾ ಅವರಿಗೆ ದೊಡ್ಡ ಸವಾಲಾಗಿದೆ. ಕೇವಲ ನಟನೆಯಷ್ಟೇ ಅಲ್ಲದೆ ಅವರ ವ್ಯಕ್ತಿತ್ವ ಮತ್ತು ಗೌರವವನ್ನು ಪರದೆಯ ಮೇಲೆ ತರುವುದು ಅತ್ಯಗತ್ಯ. ಈ ಪಾತ್ರವನ್ನು ರಶ್ಮಿಕಾ ಯಶಸ್ವಿಯಾಗಿ ನಿರ್ವಹಿಸಿದರೆ ಅವರ ಸಿನಿ ಜೀವನಕ್ಕೆ ದೊಡ್ಡ ಮೈಲಿಗಲ್ಲಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.