ಸಿನಿಮಾ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರೂಪಿಕಾ; 'ಚೆಲುವಿನ ಚಿಲಿಪಿಲಿ' ಮನಗೆದ್ದ ಹುಡುಗ ಯಾರು?

ಇಂದು ಬೆಂಗಳೂರಿನಲ್ಲಿ ರೂಪಿಕಾ ಹಾಗೂ ಅಂಕಿತ್ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದ್ದು, ಮದುವೆಗೆ ಹಲವು ಗಣ್ಯರು ಮತ್ತು ಕಿರುತೆರೆ ಕಲಾವಿದರು ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರೂಪಿಕಾ; 'ಚೆಲುವಿನ ಚಿಲಿಪಿಲಿ' ಮನಗೆದ್ದ ಹುಡುಗ ಯಾರು?
ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರೂಪಿಕಾ
Published On :

ಕನ್ನಡ ಸಿನಿಮಾ ಹಾಗೂ ಕಿರುತೆರೆಯಲ್ಲಿ ತಮ್ಮದೇ ಛಾಪು ಮೂಡಿಸಿರುವ ನಟಿ ರೂಪಿಕಾ ಅವರು ಅಂಕಿತ್ ಜೆ. ಜಹಗೀರ್ದಾರ್ ಅವರೊಂದಿಗೆ ಸೋಮವಾರ ದಾಂಪತ್ಯ ಜೀವನಕ್ಕೆ ಕಾಲಿಟ್ಚಿದ್ದಾರೆ.

ಇಂದು ಬೆಂಗಳೂರಿನಲ್ಲಿ ರೂಪಿಕಾ ಹಾಗೂ ಅಂಕಿತ್ ಅವರ ವಿವಾಹ ಮಹೋತ್ಸವ ಅದ್ಧೂರಿಯಾಗಿ ನೆರವೇರಿದ್ದು, ಮದುವೆಗೆ ಹಲವು ಗಣ್ಯರು ಮತ್ತು ಕಿರುತೆರೆ ಕಲಾವಿದರು ಆಗಮಿಸಿ ನವ ಜೋಡಿಗೆ ಶುಭ ಹಾರೈಸಿದ್ದಾರೆ.

ಎಸ್. ನಾರಾಯಣ ನಿರ್ದೇಶನದ 'ಚೆಲುವಿನ ಚಿಲಿಪಿಲಿ' ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ ರೂಪಿಕಾ, ಬಳಿಕ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ದೊರೆಸಾನಿ ಧಾರವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ನಂತರ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಲಕ್ಷ್ಮೀ ನಿವಾಸ’ ಧಾರಾವಾಹಿಯಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ರೂಪಿಕಾ, ಇದೀಗ ವೈವಾಹಿಕ ಜೀವನ ಆರಂಭಿಸಿದ್ದಾರೆ.

ಯಾರು ಈ ಅಂಕಿತ್?

ರೂಪಿಕಾ ಹಾಗೂ ಅಂಕಿತ್ ಅವರದ್ದು ಲವ್ ಮ್ಯಾರೇಜ್ ಅಲ್ಲ. ಇದು ಅರೇಂಜ್ಡ್ ಮ್ಯಾರೇಜ್ ಎನ್ನಲಾಗಿದೆ. ಕುಟುಂಬದ ಹಿರಿಯರ ಒಪ್ಪಿಗೆಯೊಂದಿಗೆ ಈ ಜೋಡಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದೆ.

ರೂಪಿಕಾ ಅವರ ಪತಿ ಅಂಕಿತ್ ಜಹಗೀರ್ದಾರ್ ಮೂಲತಃ ಬೆಂಗಳೂರಿನವರು. ಕಳೆದ ಕೆಲವು ವರ್ಷಗಳಿಂದ ಅವರು ಕೆನಡಾದಲ್ಲಿ ನೆಲೆಸಿದ್ದಾರೆ. ಕೆನಡಾದ ‘ಇನ್ವೆಸ್ಕೋ’ ಸಂಸ್ಥೆಯಲ್ಲಿ ಟ್ಯಾಕ್ಸ್ ಸ್ಪೆಷಲಿಸ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಂಕಿತ್ ಅವರಿಗೆ ಸಂಗೀತದಲ್ಲಿಯೂ ವಿಶೇಷ ಆಸಕ್ತಿ ಇದೆ. ಮ್ಯೂಸಿಕಲ್ ಕಂಪೋಸರ್ ಆಗಿಯೂ ಅವರು ಕೆಲಸ ಮಾಡುತ್ತಾರೆ ಎನ್ನಲಾಗಿದ್ದು, ಚಿತ್ರರಂಗದ ಬಗ್ಗೆಯೂ ಆಸಕ್ತಿ ಹೊಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.