I Love you ಎಂದ ನಟಿ ರಚಿತಾ ರಾಮ್, ಯಾರಿಗೆ...?
ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “I love you” ಎಂದು ಹೇಳುವ ವಿಡಿಯೋವೊಂದನ್ನು ರಚಿತ ರಾಮ್ ಅವರು ಪೋಸ್ಟ್ ಮಾಡಿದ್ದು, ಈ ಪೋಸ್ಟ್ ವೈರಲ್ ಆಗುತ್ತಿದೆ.

ಬೆಂಗಳೂರು: ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಪ್ರೇಮಿಗಳ ದಿನದಂದೇ ಐ ಲವ್ ಯೂ ಎಂದು ಪ್ರಪೋಸ್ ಮಾಡಿದ್ದು, ಈ ಕುರಿತ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ “I love you” ಎಂದು ಹೇಳುವ ವಿಡಿಯೋವೊಂದನ್ನು ರಚಿತ ರಾಮ್ ಅವರು ಪೋಸ್ಟ್ ಮಾಡಿದ್ದು, ಈ ಪೋಸ್ಟ್ ವೈರಲ್ ಆಗುತ್ತಿದೆ.
ಅದರಲ್ಲೂ ಪ್ರೇಮಿಗಳ ದಿನದಂದೇ ರಚಿತಾ ರಾಮ್ ಶೇರ್ ಮಾಡಿದ ಈ ವಿಡಿಯೋ ಸಖತ್ ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಕುತೂಹಲವನ್ನು ಸೃಷ್ಟಿಸಿದೆ. ಈ ಐ ಲವ್ ಯೂ ಯಾರಿಗೆ ಎಂದು ಪ್ರಶ್ನೆಗಳ ಸುರಿಮಳೆಯನ್ನೇ ಸುರಿಸುತ್ತಿದ್ದಾರೆ.
ಸ್ಯಾಂಡಲ್‌ವುಡ್ ಡಿಂಪಲ್ ಕ್ವೀನ್ ರಚಿತಾ ರಾಮ್ ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲಿಯೂ ಮಿಂಚುತ್ತಿದ್ದಾರೆ. ಸೋಷಿಯಲ್ ಮಿಡಿಯಾದಲ್ಲಿಯೂ ಸಖತ್ ಆಕ್ಟೀವ್ ಆಗಿದ್ದಾರೆ.. ಆಗ್ಗಾಗೆ ಪೋಟೋ, ವಿಡಿಯೋಗಳನ್ನು ಶೇರ್ ಮಾಡುತ್ತಾ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿರುತ್ತಾರೆ.

ಇದು ನನ್ನ ದೇಹ, ನನ್ನ ಜೀವನ- ಅದಕ್ಕೆಲ್ಲಾ ತಲೆ ಕೆಡಿಸಿಕೊಳ್ಳಲ್ಲ: Body Shaming ಬಗ್ಗೆ ರಚಿತಾ ರಾಮ್ ಬೋಲ್ಡ್ ಟಾಕ್
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


