ಮಾಜಿ ಸಂಸದ ಮುದ್ದಹನುಮೇಗೌಡ ಪುತ್ರಿ ರಚನಾ ಜೊತೆ ನಟ ದುಷ್ಯಂತ್ ಶ್ರೀನಿವಾಸ್ ಅದ್ಧೂರಿ ವಿವಾಹ
ಇಂದು( ಫೆಬ್ರುವರಿ 26) ಬೆಂಗಳೂರಿನ ಚಾಮರ ವಜ್ರದಲ್ಲಿ ನಡೆದ ಅದ್ಧೂರಿ ಕಲ್ಯಾಣೋತ್ಸವದಲ್ಲಿ ರಚನಾ- ದುಷ್ಯಂತ್ ಸಪ್ತಪದಿ ತುಳಿದಿದ್ದಾರೆ.

'ಗತವೈಭವ' ಸಿನಿಮಾ ನಟ ದುಷ್ಯಂತ್ ಮಾಜಿ ಸಂಸದ ಮುದ್ದ ಹನುಮೇಗೌಡರ ಪುತ್ರಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇತ್ತೀಚೆಗೆ ಎಂಗೇಜ್‌ಮೆಂಟ್ ಕೂಡ ನಡೆದಿತ್ತು.
ಇಂದು( ಫೆಬ್ರುವರಿ 26) ಬೆಂಗಳೂರಿನ ಚಾಮರ ವಜ್ರದಲ್ಲಿ ನಡೆದ ಅದ್ಧೂರಿ ಕಲ್ಯಾಣೋತ್ಸವದಲ್ಲಿ ರಚನಾ- ದುಷ್ಯಂತ್ ಸಪ್ತಪದಿ ತುಳಿದಿದ್ದಾರೆ. ವಿವಾಹ ಸಮಾರಂಭಕ್ಕೆ ರಾಜಕೀಯ ಮತ್ತು ಸಿನಿಮಾ ರಂಗದ ಹಲವು ಗಣ್ಯರು ಭಾಗವಹಿಸಿದ್ದರು. ಮಾರ್ಚ್ 1 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆರತಕ್ಷತೆ ಮತ್ತು ಬೀಗರ ಊಟ ಆಯೋಜಿಸಿದ್ದಾರೆ.

ಸಿಂಪಲ್ ಸುನಿ ನಿರ್ದೇಶನದ ʻಗತವೈಭವʼ ಸಿನಿಮಾ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡಿದ ದುಷ್ಯಂತ್, ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್‌ಆರ್ ಶ್ರೀನಿವಾಸ್ ಅವರ ಪುತ್ರರಾಗಿದ್ದಾರೆ. ಇನ್ನೂ, ದುಷ್ಯಂತ್ ಭಾವಿ ಪತ್ನಿ ರಚನಾ ಅವರು ಮಾಜಿ ಸಂಸದ ಮುದ್ದಹನುಮೇಗೌಡ ಅವರ ಪುತ್ರಿಯಾಗಿದ್ದು, ಈ ಮದುವೆಯ ಮೂಲಕ ಎರಡು ಪ್ರಭಾವಿ ರಾಜಕೀಯ ಕುಟುಂಬಗಳು ಸಂಬಂಧ ಬೆಳೆಸುತ್ತಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



