ಸಿನಿಮಾ ಸುದ್ದಿ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ-ವಿಜಯ್ ವಿವಾಹ; ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಉದಯಪುರದ ಐಷಾರಾಮಿ ಹೋಟೆಲೊಂದರಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ-ವಿಜಯ್ ವಿವಾಹ; ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ
ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ
Published On :

ಬೆಂಗಳೂರು/ಉದಯಪುರ: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ್ ದೇವರಕೊಂಡ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಉದಯಪುರದ ಐಷಾರಾಮಿ ಹೋಟೆಲೊಂದರಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಎರಡು ಪ್ರತ್ಯೇಕ ವಿವಾಹ ಸಮಾರಂಭಗಳನ್ನು ಈ ಜೋಡಿ ಆಯೋಜಿಸಿತ್ತು ಎನ್ನಲಾಗಿದ್ದು, ತೆಲುಗು ಕುಟುಂಬದ ಸಂಪ್ರದಾಯದಂತೆ ಬೆಳಿಗ್ಗೆ ಮಂಗಳ ಮುಹೂರ್ತದಲ್ಲಿ ವಿವಾಹ ಕಾರ್ಯಕ್ರಮ ನಡೆದಿದೆ. ಅದೇ ರೀತಿ ಸಂಜೆ ಕೊಡಗಿನ ಸಂಪ್ರದಾಯದಂತೆ ರಶ್ಮಿಕಾ ಕುಟುಂಬಸ್ಥರಿಂದ ಕಾರ್ಯಕ್ರಮಗಳು ನಡೆಯಲಿವೆ ಎಂದು ಹೇಳಲಾಗುತ್ತಿದೆ.

ವಿಜಯ್ ತೆಲುಕು ಕುಟುಂಬಕ್ಕೆ ಸೇರಿದವರಾಗಿದ್ದು, ರಶ್ಮಿಕಾ ಕೊಡವ ಸಮುದಾಯದ ಹಿನ್ನೆಲೆಯವರಾಗಿರುವುದರಿಂದ ವಿವಾಹ ಸಮಾರಂಭದಲ್ಲಿ ಎರಡೂ ಸಂಪ್ರದಾಯಗಳಿಗೆ ಆದ್ಯತೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಇಬ್ಬರೂ ‘ಗೀತಾ ಗೋವಿಂದಮ್’ ಮತ್ತು ‘ಡಿಯರ್ ಕಾಮ್ರೇಡ್’ ಚಿತ್ರಗಳಲ್ಲಿ ಜೋಡಿಯಾಗಿ ನಟಿಸಿ ಅಭಿಮಾನಿಗಳ ಮೆಚ್ಚುಗೆ ಗಳಿಸಿದ್ದರು. ಈಗ ರೀಲ್ ಜೋಡಿ ರಿಯಲ್ ಲೈಫ್‌ನಲ್ಲೂ ಒಂದಾಗಿದ್ದು, ಅವರ ಅಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.