ಸಿನಿಮಾ ಸುದ್ದಿ

ನಟಿ ಜಯಮಾಲ, ಸಾ.ರಾ ಗೋವಿಂದುಗೆ ಡಾ.ರಾಜ್‌ಕುಮಾರ್‌ ಪ್ರಶಸ್ತಿ; ಎಂ.ಎಸ್ ಸತ್ಯುಗೆ ಪುಟ್ಟಣ್ಣ ಕಣಗಾಲ್ ಅವಾರ್ಡ್

2020ನೇ ಸಾಲಿನ ಡಾ.ರಾಜ್‌ಕುಮಾರ್‌ ಪ್ರಶಸ್ತಿಯನ್ನು ಹಿರಿಯ ನಟಿ ಡಾ. ಜಯಮಾಲಾ ಅವರಿಗೆ ಹಾಗೂ 2021ನೇ ಸಾಲಿನ ಡಾ.ರಾಜ್‌ಕುಮಾರ್‌ ಪ್ರಶಸ್ತಿಗೆ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದ್ ಅವರಿಗೆ ಘೋಷಿಸಿಸಲಾಗಿದೆ.

ನಟಿ ಜಯಮಾಲ, ಸಾ.ರಾ ಗೋವಿಂದುಗೆ ಡಾ.ರಾಜ್‌ಕುಮಾರ್‌ ಪ್ರಶಸ್ತಿ; ಎಂ.ಎಸ್ ಸತ್ಯುಗೆ ಪುಟ್ಟಣ್ಣ ಕಣಗಾಲ್ ಅವಾರ್ಡ್
ಸಾ.ರಾ.ಗೋವಿಂದ - ನಟಿ ಜಯಮಾಲ
Published On :

ಬೆಂಗಳೂರು: ರಾಜ್ಯ ಸರ್ಕಾರ 2020 ಮತ್ತು 2021ನೇ ಸಾಲಿನ ಡಾ. ರಾಜ್‌ಕುಮಾರ್‌, ಪುಟ್ಟಣ್ಣ ಕಣಗಾಲ್‌ ಹಾಗೂ ಡಾ. ವಿಷ್ಣುವರ್ಧನ್‌ ಪ್ರಶಸ್ತಿಗಳನ್ನು ಗುರುವಾರ ಪ್ರಕಟಿಸಿದೆ.

2020ನೇ ಸಾಲಿನ ಡಾ.ರಾಜ್‌ಕುಮಾರ್‌ ಪ್ರಶಸ್ತಿಯನ್ನು ಹಿರಿಯ ನಟಿ ಡಾ. ಜಯಮಾಲಾ ಅವರಿಗೆ ಹಾಗೂ 2021ನೇ ಸಾಲಿನ ಡಾ.ರಾಜ್‌ಕುಮಾರ್‌ ಪ್ರಶಸ್ತಿಗೆ ಹಿರಿಯ ನಿರ್ಮಾಪಕ ಸಾ.ರಾ. ಗೋವಿಂದ್ ಅವರಿಗೆ ಘೋಷಿಸಿಸಲಾಗಿದೆ.

2020ರ ಸಾಲಿನ ಪುಟ್ಟಣ್ಣ ಕಣಗಾಲ್‌ ಪ್ರಶಸ್ತಿಯನ್ನು ಹಿರಿಯ ನಿರ್ದೇಶಕ ಹಾಗೂ ರಂಗಭೂಮಿ ಕಲಾವಿದ ಎಂಎಸ್‌ ಸತ್ಯು ಅವರಿಗೆ ನೀಡಲಾಗಿದ್ದರೆ, 2021ರ ಸಾಲಿನ ಈ ಪ್ರಶಸ್ತಿಗೆ ನಿರ್ದೇಶಕ ಶಿವರುದ್ರಯ್ಯ ಅವರು ಭಾಜನರಾಗಿದ್ದಾರೆ.

ಪ್ರಶಸ್ತಿ ಘೋಷಣೆ
ಪ್ರಶಸ್ತಿ ಘೋಷಣೆ

ಇನ್ನು ಜೀವಮಾನದ ಸಾಧನೆಗಾಗಿ ರಾಜ್ಯ ಸರ್ಕಾರ ನೀಡುವ ಡಾ. ವಿಷ್ಣುವರ್ಧನ್‌ ಪ್ರಶಸ್ತಿಯನ್ನು 2020ನೇ ಸಾಲಿನಲ್ಲಿ ಪ್ರಗತಿ ಅಶ್ವಥ್‌ ನಾರಾಯಣ್‌ ಅವರಿಗೆ ನೀಡಲಾಗಿದ್ದರೆ, 2021ರ ಸಾಲಿನ ಈ ಪ್ರಶಸ್ತಿನ್ನು ಹಿರಿಯ ನಟ ಎಂಕೆ ಸುಂದರ್‌ ರಾಜ್‌ ಅವರಿಗೆ ನೀಡಲಾಗಿದೆ.

ಡಾ. ರಾಜ್ ಕುಮಾರ್ ಪ್ರಶಸ್ತಿ, ಡಾ. ವಿಷ್ಣುವರ್ದನ್ ಪ್ರಶಸ್ತಿ ಹಾಗೂ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ ವಿಜೇತರಿಗೆ ತಲಾ 5 ಲಕ್ಷ ರೂ. ನಗದು ಹಾಗೂ 50 ಗ್ರಾಂ. ಚಿನ್ನದ ಪದಕವನ್ನು ನೀಡಿ ಗೌರವಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.