ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!
ಬಿಗ್ ಬಾಸ್ 12ರ ನಿರೂಪಣೆ ವೇಳೆ ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಟ ಕಿಚ್ಚ ಸುದೀಪ್ ಹಾಗೂ ಬಿಗ್ ಬಾಸ್ ವಿರುದ್ಧ ಪರಿಸರ ಪ್ರಿಯರು ದೂರು ನೀಡಿದ್ದಾರೆ. ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ರಾಮನಗರದ ಅರಣ್ಯಾಧಿಕಾರಿಗಳಿಗೆ ದೂರು ನೀಡಿದೆ.

ರಾಮನಗರ: ಬಿಗ್ ಬಾಸ್ 12ರ ನಿರೂಪಣೆ ವೇಳೆ ರಣಹದ್ದು ಬಗ್ಗೆ ತಪ್ಪಾದ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ನಟ ಕಿಚ್ಚ ಸುದೀಪ್ ಹಾಗೂ ಬಿಗ್ ಬಾಸ್ ವಿರುದ್ಧ ಪರಿಸರ ಪ್ರಿಯರು ದೂರು ನೀಡಿದ್ದಾರೆ. ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ರಾಮನಗರದ ಅರಣ್ಯಾಧಿಕಾರಿಗಳಿಗೆ ದೂರು ನೀಡಿದೆ. ವಾರದ ಕಥೆ ಕಿಚ್ಚನ ಜೊತೆ ಕಾರ್ಯಕ್ರಮದಲ್ಲಿ ರಣಹದ್ದು ಬಗ್ಗೆ ಕಿಚ್ಚ ಸುದೀಪ್ ತಪ್ಪಾದ ಮಾಹಿತಿ ಹರಡಿದ್ದಾರೆ ಎಂದು ಆರೋಪಿಸಲಾಗಿದೆ.
ಶೋ ವೇಳೆ ವಿವಿಧ ಪ್ರಾಣಿಗಳ ಫೋಟೋವನ್ನು ನೀಡಿ ಸ್ಪರ್ಧಿಗಳು ಸಹ ಸ್ಪರ್ಧಿಗಳ ಮನಸ್ಥಿತಿಯನ್ನು ಬಿಂಬಿಸಿ ಫೋಟೋ ಹಾಕಬೇಕು ಎಂದು ಹೇಳಲಾಗುತ್ತದೆ. ಆಗ ಸ್ಪರ್ಧಿಯೊಬ್ಬರ ಕುತ್ತಿಗೆಗೆ ರಣಹದ್ದು ಫೋಟೋವೊಂದನ್ನ ಹಾಕಿಸಿ ಹೊಂಚುಹಾಕಿ ಸಂಚು ಮಾಡಿ ಕರೆಕ್ಟ್ ಟೈಂ ಲಬಕ್ ಅಂತ ಹಿಡಿಯುವವರು ಯಾರು? ಎಂದು ಕೇಳಿದ್ದರು. ಈ ಪ್ರಶ್ನೆ ಇದೀಗ ವಿವಾದಕ್ಕೆ ಕಾರಣವಾಗಿದೆ.
ರಣಹದ್ದು ಯಾವುದೇ ಜೀವಿಗೆ ಹಾನಿ ಮಾಡುವ ಪಕ್ಷಿ ಅಲ್ಲ. ಅದು ಸತ್ತ ಪ್ರಾಣಿಗಳನ್ನ ಮಾತ್ರ ತಿಂದು ಪರಿಸರದ ಸಮತೋಲನ ಕಾಪಾಡುವ ಪಕ್ಷಿ. ಇದು ಯಾವುದೇ ಪ್ರಾಣಿಗಳಿಗೆ ಹಾನಿ ಮಾಡುವುದಿಲ್ಲ. ಇಂತಹ ಪಕ್ಷಿ ಬಗ್ಗೆ ಜನಪ್ರಿಯ ನಟ ಸುದೀಪ್ ಅವರು ತಪ್ಪು ಮಾಹಿತಿ ನೀಡಿರುವುದು ಸರಿಯಲ್ಲ ಎಂದು ಪರಿಸರ ಪ್ರಿಯರು ವಾದವಾಗಿದೆ.
ಅಳಿವಿನಂಚಿನಲ್ಲಿರೋ ರಣಹದ್ದು ಬಗ್ಗೆ ತಪ್ಪಾದ ಮಾಹಿತಿ ಹರಡಿರುವ ಬಿಗ್ ಬಾಸ್ ಸಂಸ್ಥೆ ಹಾಗೂ ನಟ ಸುದೀಪ್ ಅವರಿಗೆ ಸೂಕ್ತ ರೀತಿಯಲ್ಲಿ ತಿಳುವಳಿಕೆ ನೀಡುವಂತೆ ರಾಮನಗರ ಡಿಸಿಎಫ್ ಹಾಗೂ ಆರ್‌ಎಫ್‌ಓ ಮನ್ಸೂರ್ ಅವರಿಗೆ ಕರ್ನಾಟಕ ರಣಹದ್ದು ಸಂರಕ್ಷಣಾ ಟ್ರಸ್ಟ್ ದೂರು ನೀಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



