ಧರ್ಮಸ್ಥಳ: ಸಂಧ್ಯಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಉಗ್ರಂ ಮಂಜು
ಕುಟುಂಬಸ್ಥರ ಸಮ್ಮುಖದಲ್ಲಿ ಉಗ್ರಂ ಮಂಜು ಹಾಗೂ ಸಂಧ್ಯಾ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಸ್ಪರ್ಶ್ ಆಸ್ಪತ್ರೆಯಲ್ಲಿ ಸಂಧ್ಯಾ ಅವರು ಅಡ್ಮಿನ್ ಡಿಪಾರ್ಟ್ಮೆಂಟ್‌ನಲ್ಲಿದ್ದಾರೆ.

ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಉಗ್ರಂ ಮಂಜು ಎಂದೇ ಖ್ಯಾತಿ ಪಡೆದಿರುವ ಮಂಜುನಾಥ್ ಗೌಡ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕೋಲಾರದ ಉಗ್ರಂ ಮಂಜು ಅವರು ಪ್ರಶಾಂತ್ ನೀಲ್ ಅವರು ನಿರ್ದೇಶನ ಮಾಡಿದ ಉಗ್ರಂ ಮೂವಿಯಲ್ಲಿ ಖಳ ನಟನಾಗಿ ಅಮೋಘವಾಗಿ ಅಭಿನಯ ಮಾಡಿದ್ದರು.
ಈ ಸಿನಿಮಾದಿಂದಲೇ ಇವರಿಗೆ ಉಗ್ರಂ ಎನ್ನುವುದು ಹೆಸರಿನೊಂದಿಗೆ ತಳುಕು ಹಾಕಿಕೊಂಡಿದೆ. ಬಿಗ್‌ಬಾಸ್ ಮಾಜಿ ಸ್ಪರ್ಧಿ ಉಗ್ರಂ ಮಂಜು ಅವರು ಸಂಧ್ಯಾ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಇಂದು (ಜ.23) ಕುಟುಂಬಸ್ಥರ ಸಮ್ಮುಖದಲ್ಲಿ ಉಗ್ರಂ ಮಂಜು ಹಾಗೂ ಸಂಧ್ಯಾ ಧರ್ಮಸ್ಥಳದಲ್ಲಿ ಸರಳವಾಗಿ ಮದುವೆಯಾಗಿದ್ದಾರೆ. ಸಂಧ್ಯಾ ಅವರು ಸ್ಪರ್ಶ್ ಆಸ್ಪತ್ರೆಯಲ್ಲಿ ಅಡ್ಮಿನ್ ಡಿಪಾರ್ಟ್ಮೆಂಟ್‌ನಲ್ಲಿದ್ದಾರೆ. ಇನ್ಸ್ಟಾದಲ್ಲಿ Transplant Coordinator ಎಂದು ಬರೆದುಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



