ಸಿನಿಮಾ ಸುದ್ದಿ

ಮೊದಲ ಬಾರಿಗೆ ಕಿರುತೆರೆಗೆ ಬಿ.ಸಿ ಪಾಟೀಲ್ ಎಂಟ್ರಿ: ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಮಾಜಿ ಸಚಿವರ ಹೊಸ ಇನ್ನಿಂಗ್ಸ್!

ಸದಾ ವಿಭಿನ್ನ ಸಿನಿಮಾಗಳ ಮೂಲಕ ಅಬ್ಬರಿಸುತ್ತಿದ್ದ ‘ಕೌರವ’ ಬಿ.ಸಿ. ಪಾಟೀಲ್ ಅವರನ್ನು ಈಗ ರಾಯರ ಮಹಿಮೆಯ ಕಥಾಹಂದರದಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.

ಮೊದಲ ಬಾರಿಗೆ ಕಿರುತೆರೆಗೆ ಬಿ.ಸಿ ಪಾಟೀಲ್ ಎಂಟ್ರಿ: ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಮಾಜಿ ಸಚಿವರ ಹೊಸ ಇನ್ನಿಂಗ್ಸ್!
ಧಾರಾವಾಹಿಯಲ್ಲಿ ಬಿ.ಸಿ ಪಾಟೀಲ್
Published On :

ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ಬಿ.ಸಿ. ಪಾಟೀಲ್ ಅವರು ಇದೇ ಮೊದಲ ಬಾರಿಗೆ ಕಿರುತೆರೆಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಜೀ ಕನ್ನಡ ವಾಹಿನಿಯ ಜನಪ್ರಿಯ ಭಕ್ತಿ ಪ್ರಧಾನ ಧಾರಾವಾಹಿ ‘ಶ್ರೀ ರಾಘವೇಂದ್ರ ಮಹಾತ್ಮೆ’ ಮೂಲಕ ಅವರು ಹೊಚ್ಚಹೊಸ ಇನಿಂಗ್ಸ್ ಆರಂಭಿಸುತ್ತಿದ್ದಾರೆ.

ವೀಕ್ಷಕರ ಮನಗೆದ್ದಿರುವ ಈ ಸರಣಿಯಲ್ಲಿ ಬಿ.ಸಿ. ಪಾಟೀಲ್ ಅವರು ಅತ್ಯಂತ ಪ್ರಮುಖವಾದ ‘ಕರಟಗಿರಿಯ ದೇಸಾಯಿ’ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸದಾ ವಿಭಿನ್ನ ಸಿನಿಮಾಗಳ ಮೂಲಕ ಅಬ್ಬರಿಸುತ್ತಿದ್ದ ‘ಕೌರವ’ ಬಿ.ಸಿ. ಪಾಟೀಲ್ ಅವರನ್ನು ಈಗ ರಾಯರ ಮಹಿಮೆಯ ಕಥಾಹಂದರದಲ್ಲಿ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಿನಲ್ಲಿ ಕಾಯುತ್ತಿದ್ದಾರೆ.

ಅವರ ಪತ್ನಿಯಾಗಿ ಅರುಣಾ ಬಾಲರಾಜ್ ಕೂಡ ಇದ್ದಾರೆ. ಈ ಭಕ್ತಿ ಪ್ರಧಾನ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಶನಿವಾರ ಹಾಗೂ ಭಾನುವಾರ ಸಂಜೆ 6 ಗಂಟೆಗೆ ಪ್ರಸಾರವಾಗುತ್ತಿದೆ.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಶ್ರೀ ರಾಘವೇಂದ್ರ ಮಹಾತ್ಮೆ’ ಧಾರಾವಾಹಿಗೆ ಪ್ರೇಕ್ಷಕರಿಂದ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ರಾಯರ ಜೀವನದ ಪವಿತ್ರ ಪಯಣವನ್ನು ಭಕ್ತರು ಕಣ್ತುಂಬಿ ಕೊಳ್ಳುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.