ತಮಿಳುನಾಡು ಸಿಎಂ ವಿಜಯ್ ನಟನೆಯ 'ಜನ ನಾಯಗನ್' ಚಿತ್ರಕ್ಕೆ 'A' ಪ್ರಮಾಣಪತ್ರ; ಈ ತಿಂಗಳ ಅಂತ್ಯಕ್ಕೆ ಬಿಡುಗಡೆ?
ಜನ ನಾಯಗನ್ ಮುಂದಿನ ವಾರ ಸಿಬಿಎಫ್‌ಸಿ ಪ್ರಮಾಣಪತ್ರ ಪಡೆಯುವ ಸಾಧ್ಯತೆ ಇದ್ದು, ಜುಲೈ 24 ಅಥವಾ ಜುಲೈ 31ರಂದು ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ.

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರ ಬಹುನಿರೀಕ್ಷಿತ ಚಿತ್ರ 'ಜನ ನಾಯಗನ್'ಗೆ ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (CBFC) ಬುಧವಾರ 'ಎ' ಪ್ರಮಾಣಪತ್ರವನ್ನು ನೀಡಿದೆ ಎಂದು ಮೂಲಗಳು ಎನ್‌ಡಿಟಿವಿಗೆ ತಿಳಿಸಿವೆ.
ಸಂಪಾದನಾ ಪಟ್ಟಿಯನ್ನು ಇಂದು ಅಥವಾ ಸೋಮವಾರ ಸಿಬಿಎಫ್‌ಸಿ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡುವ ನಿರೀಕ್ಷೆಯಿದ್ದು, ಮುಂದಿನ ವಾರ ಅಂತಿಮ ಪ್ರಮಾಣಪತ್ರ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಜನ ನಾಯಗನ್ ಮುಂದಿನ ವಾರ ಸಿಬಿಎಫ್‌ಸಿ ಪ್ರಮಾಣಪತ್ರ ಪಡೆಯುವ ಸಾಧ್ಯತೆ ಇದ್ದು, ಜುಲೈ 24 ಅಥವಾ ಜುಲೈ 31ರಂದು ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ.
'ಜನ ನಾಯಗನ್ ಮುಂದಿನ ವಾರ ಸೆನ್ಸಾರ್ ಪ್ರಮಾಣಪತ್ರ ಪಡೆಯುವ ಸಾಧ್ಯತೆಯಿದೆ. ಈ ತಿಂಗಳ ಕೊನೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ' ಎಂದು ಈ ಬೆಳವಣಿಗೆ ಬಗ್ಗೆ ತಿಳಿದಿರುವ ಮೂಲಗಳು ತಿಳಿಸಿವೆ.
ಈ ಚಿತ್ರವು ಕಳೆದ ವರ್ಷದ ಕೊನೆಯ ಭಾಗದಲ್ಲಿಯೇ ಸೆನ್ಸಾರ್ ಪರಿಶೀಲನಾ ಪ್ರಕ್ರಿಯೆಯನ್ನು ಪೂರ್ಣಗೊಳಿಸಿತ್ತು. ಪರಿಶೀಲನಾ ಸಮಿತಿಯು ಡಿಸೆಂಬರ್ 2025ರಲ್ಲಿ ಚಿತ್ರವನ್ನು ಪರಿಶೀಲಿಸಿ ಕೆಲವು ದೃಶ್ಯಗಳಿಗೆ ಕತ್ತರಿ ಹಾಕುವಂತೆ ಸೂಚಿಸಿತ್ತು; ಚಿತ್ರತಂಡವು ಆ ಸೂಚನೆಗಳನ್ನು ಅಳವಡಿಸಿಕೊಂಡಿರುವುದಾಗಿ ತಿಳಿಸಿತ್ತು. ಇದರ ಬೆನ್ನಲ್ಲೇ, ಚಿತ್ರವನ್ನು 2026ರ ಜನವರಿ 9ರಂದು ಬಿಡುಗಡೆ ಮಾಡಲು ನಿಗದಿಪಡಿಸಲಾಗಿತ್ತು.
ಆದಾಗ್ಯೂ, ಸಮಿತಿಯ ಸದಸ್ಯರೊಬ್ಬರು ಚಿತ್ರದ ಕೆಲವು ದೃಶ್ಯಗಳಿಗೆ ಆಕ್ಷೇಪ ವ್ಯಕ್ತಪಡಿಸಿ ಸಿಬಿಎಫ್‌ಸಿ ಅಧ್ಯಕ್ಷ ಪ್ರಸೂನ್ ಜೋಶಿ ಅವರಿಗೆ ಪತ್ರ ಬರೆದ ನಂತರ ಪ್ರಮಾಣೀಕರಣ ಪ್ರಕ್ರಿಯೆಯು ಹೊಸ ತಿರುವು ಪಡೆದುಕೊಂಡಿತು. ಆಕ್ಷೇಪಣೆಗಳು ವ್ಯಕ್ತವಾದ ನಂತರ, ಸಿಬಿಎಫ್‌ಸಿ ಮುಖ್ಯಸ್ಥರು ಈ ವಿಷಯವನ್ನು ಹೊಸ ಪರಿಶೀಲನೆಗಾಗಿ ಪರಿಷ್ಕರಣಾ ಸಮಿತಿಗೆ ಉಲ್ಲೇಖಿಸಿದರು.
ಈ ಮಧ್ಯೆ, ಪ್ರಮಾಣಪತ್ರ ನೀಡಿಕೆಯಲ್ಲಿನ ವಿಳಂಬದ ಕುರಿತು 'ಜನ ನಾಯಗನ್' ಚಿತ್ರದ ನಿರ್ದೇಶಕರು ಮದ್ರಾಸ್ ಹೈಕೋರ್ಟ್ ಹಾಗೂ ಭಾರತದ ಸುಪ್ರೀಂ ಕೋರ್ಟ್‌ನ ಮೊರೆ ಹೋದರು.
ಮಾದರಿ ನೀತಿ ಸಂಹಿತೆಯಿಂದಾಗಿ ಪ್ರಮಾಣಪತ್ರವನ್ನು ನೀಡಲು ಸಾಧ್ಯವಿಲ್ಲ ಎಂದು ಮೂಲಗಳು ಮೊದಲೇ ಹೇಳಿದ್ದವು. ಚಿತ್ರದ ಅಧಿಕೃತ ಬಿಡುಗಡೆ ದಿನಾಂಕ ಘೋಷಿಸುವ ಮೊದಲು ಅಂತಿಮ ಸೆನ್ಸಾರ್ ಪ್ರಮಾಣಪತ್ರಕ್ಕಾಗಿ ಚಿತ್ರತಂಡ ಕಾಯುತ್ತಿದೆ.
ಇದು ಮುಖ್ಯಮಂತ್ರಿ ವಿಜಯ್ ನಟನೆಯ ಕೊನೆಯ ಚಿತ್ರವಾಗಿರುವುದರಿಂದ ವ್ಯಾಪಕ ಗಮನ ಸೆಳೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


