ನಟ ಚಿಕ್ಕಣ್ಣ ಮದುವೆಗೆ ಮೂಹೂರ್ತ ಫಿಕ್ಸ್: ಮೈಸೂರಿನಲ್ಲಿ ಪಾವನ ಜೊತೆ ಅದ್ಧೂರಿ ವಿವಾಹ!
ಪಾವನಾ ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದವರು. 2025ರಲ್ಲಿ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥವನ್ನು ಸರಳವಾಗಿ ನೆರವೇರಿತ್ತು.

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ಹಾಸ್ಯ ನಟ ಚಿಕ್ಕಣ್ಣ ಅವರ ಅಭಿಮಾನಿಗಳಿಗೆ ಕೊನೆಗೂ ಗುಡ್‌ನ್ಯೂಸ್ ಸಿಕ್ಕಿದೆ.
ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಚಿಕ್ಕಣ್ಣ ಅವರ ವಿವಾಹ ದಿನಾಂಕ ಇದೀಗ ಅಂತಿಮವಾಗಿದೆ. ಆಗಸ್ಟ್ 29 ಮತ್ತು 30ರಂದು ಮೈಸೂರಿನಲ್ಲಿ ಅದ್ಧೂರಿ ವಿವಾಹ ಸಂಭ್ರಮ ನಡೆಯಲಿದೆ. ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಹಾಸ್ಯ ಶೈಲಿ, ವಿಭಿನ್ನ ಬಾಡಿ ಲಾಂಗ್ವೇಜ್ ಮತ್ತು ಪಂಚಿಂಗ್ ಡೈಲಾಗ್‌ಗಳ ಮೂಲಕ ಅಪಾರ ಅಭಿಮಾನಿಗಳನ್ನು ಗಳಿಸಿರುವ ಚಿಕ್ಕಣ್ಣ, ಇದೀಗ ವೈಯಕ್ತಿಕ ಜೀವನದ ಹೊಸ ಅಧ್ಯಾಯಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಮಂಡ್ಯ ಮೂಲದ ಪಾವನಾ ಜೊತೆ ಚಿಕ್ಕಣ್ಣ ಅವರು ಹಸೆಮಣೆ ಏರಲಿದ್ದಾರೆ. ಕಳೆದ ವರ್ಷ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥ ನಡೆದಿತ್ತು. ಈಗ ಮದುವೆಗೆ ದಿನಾಂಕ ನಿಗದಿ ಆಗಿದೆ. ಚಿಕ್ಕಣ್ಣ ಅವರು ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಹಲವಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ. ಚಿತ್ರರಂಗದ ಸ್ನೇಹಿತರೆಲ್ಲರೂ ಮದುವೆಗೆ ಆಗಮಿಸಲಿದ್ದಾರೆ.
ಪಾವನಾ ಮೂಲತಃ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದವರು. 2025ರಲ್ಲಿ ಚಿಕ್ಕಣ್ಣ ಮತ್ತು ಪಾವನಾ ಅವರ ನಿಶ್ಚಿತಾರ್ಥವನ್ನು ಸರಳವಾಗಿ ನೆರವೇರಿಸಲಾಗಿತ್ತು. ಇಂಜಿನಿಯರಿಂಗ್ ಪದವಿ ಪಡೆದಿರುವ ಪಾವನಾ ಅವರೊಂದಿಗೆ ಚಿಕ್ಕಣ್ಣ ಹೊಸ ಜೀವನ ಆರಂಭಿಸಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


