ಸಿನಿಮಾ ಸುದ್ದಿ

AI ಬಳಸಿ ಸಾವಿನ ಸುಳ್ಳು ಸುದ್ದಿ ಸೃಷ್ಟಿ: ಕಿಡಿಗೇಡಿಗಳ ವಿರುದ್ಧ ನಟ ದೊಡ್ಡಣ್ಣ ಕಿಡಿ, ದೂರು ದಾಖಲು

ದೊಡ್ಡಣ್ಣ ಅವರ ಫೋಟೋ ಹಾಗೂ ಹೆಸರನ್ನು ಕೃತಕ ಬುದ್ಧಿಮತ್ತೆ (AI) ಬಳಸಿ ತಿರುಚಿ, "Public Friend News" ಎಂಬ ಫೇಸ್‌ಬುಕ್ ಖಾತೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಮಾಹಿತಿ ಪ್ರಕಟಿಸಲಾಗಿತ್ತು.

AI ಬಳಸಿ ಸಾವಿನ ಸುಳ್ಳು ಸುದ್ದಿ ಸೃಷ್ಟಿ: ಕಿಡಿಗೇಡಿಗಳ ವಿರುದ್ಧ ನಟ ದೊಡ್ಡಣ್ಣ ಕಿಡಿ, ದೂರು ದಾಖಲು
ದೊಡ್ಡಣ್ಣ
Published On :

ಬೆಂಗಳೂರು: ತಮ್ಮ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿದ ದುಷ್ಕರ್ಮಿಗಳ ವಿರುದ್ಧ ಕನ್ನಡ ಚಿತ್ರರಂಗದ ಹಿರಿಯ ನಟ ದೊಡ್ಡಣ್ಣ ಅವರು ತೀವ್ರವಾಗಿ ಕಿಡಿಕಾರಿದ್ದು, ಕಿಡಿಗೇಡಿಗಳ ವಿರುದ್ಧ ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರು ಬೆನ್ನಲ್ಲೇ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

77 ವರ್ಷದ ನಟ ದೊಡ್ಡಣ್ಣ ಅವರ ಫೋಟೋ ಹಾಗೂ ಹೆಸರನ್ನು ಕೃತಕ ಬುದ್ಧಿಮತ್ತೆ (AI) ಬಳಸಿ ತಿರುಚಿ, "Public Friend News" ಎಂಬ ಫೇಸ್‌ಬುಕ್ ಖಾತೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂಬ ಸುಳ್ಳು ಮಾಹಿತಿ ಪ್ರಕಟಿಸಲಾಗಿತ್ತು.

ಈ ಪೋಸ್ಟ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಇದು ದೊಡ್ಡಣ್ಣ ಹಾಗೂ ಅವರ ಕುಟುಂಬದವರಿಗೆ ತೀವ್ರ ಮಾನಸಿಕ ಆಘಾತ ಮತ್ತು ನೋವುಂಟು ಮಾಡಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಘಟನೆಯ ಸಂಬಂಧ ಪೊಲೀಸರು ಮಾಹಿತಿ ತಂತ್ರಜ್ಞಾನ (IT) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಸುಳ್ಳು ಸುದ್ದಿ ಹರಡಿದ ಫೇಸ್‌ಬುಕ್ ಖಾತೆಯ ಐಪಿ ವಿಳಾಸವನ್ನು ಪತ್ತೆಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.

ದೊಡ್ಡಣ್ಣ ಅವರ ಸಾವಿನ ಸುದ್ದಿ ವೈರಲ್ ಆದ ಬಳಿಕ, ಸ್ವತಃ ಅವರು ಮಾಧ್ಯಮಗಳ ಮುಂದೆ ಹಾಜರಾಗಿ ತಾವು ಆರೋಗ್ಯವಾಗಿದ್ದು ಜೀವಂತವಾಗಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು. ಇದೀಗ ಈ ಬಗ್ಗೆ ಕಾನೂನು ಕ್ರಮ ಕೈಗೊಳ್ಳಲು ಸೈಬರ್ ಪೊಲೀಸರ ಮೊರೆ ಹೋಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.