ಸಿನಿಮಾ ಸುದ್ದಿ

54 ವರ್ಷದ ಮಾಜಿ ಸಿಎಂ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಟಗರು' ಸರೋಜ ಖ್ಯಾತಿಯ ಕನ್ನಡದ ನಟಿ!

ಸ್ಯಾಂಡಲ್ವುಡ್ ನಟ ಶಿವರಾಜಕುಮಾರ್ ನಟನೆಯ 'ಟಗರು' ಚಿತ್ರದಲ್ಲಿ ಸರೋಜಾ ಪಾತ್ರದ ಮೂಲಕ ಕನ್ನಡಿಗರಿಗೆ ಹತ್ತಿರವಾಗಿದ್ದ ನಟಿ ತ್ರಿವೇಣಿ ರಾವ್ ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

54 ವರ್ಷದ ಮಾಜಿ ಸಿಎಂ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ 'ಟಗರು' ಸರೋಜ ಖ್ಯಾತಿಯ ಕನ್ನಡದ ನಟಿ!
Published On :

ಸ್ಯಾಂಡಲ್ವುಡ್ ನಟ ಶಿವರಾಜಕುಮಾರ್ ನಟನೆಯ 'ಟಗರು' ಚಿತ್ರದಲ್ಲಿ ಸರೋಜಾ ಪಾತ್ರದ ಮೂಲಕ ಕನ್ನಡಿಗರಿಗೆ ಹತ್ತಿರವಾಗಿದ್ದ ನಟಿ ತ್ರಿವೇಣಿ ರಾವ್ ಈಗ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನ್ನಡ ಹಾಗೂ ತೆಲುಗು ಸಿನಿಮಾಗಳಲ್ಲಿ ಸಕ್ರಿಯರಾಗಿರುವ ನಟಿ, ತ್ರಿಪುರ ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಹಾಲಿ ಬಿಜೆಪಿ ಸಂಸದರಾಗಿರುವ 54 ವರ್ಷದ ಬಿಪ್ಲಬ್ ಕುಮಾರ್ ದೇವ್ ಜೊತೆ ಹೊಸ ಜೀವನಕ್ಕೆ ಹೆಜ್ಜೆ ಇಟ್ಟಿದ್ದಾರೆ.

ದೆಹಲಿಯಲ್ಲಿ ನಡೆದ ಆಪ್ತರ ಸಮ್ಮುಖದ ಖಾಸಗಿ ಸಮಾರಂಭದಲ್ಲಿ ಈ ಇಬ್ಬರು ಗಣ್ಯರು ಸಪ್ತಪದಿ ತುಳಿದಿದ್ದಾರೆ. ಸದ್ಯ ಇವರ ವಿವಾಹದ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ಚಿತ್ರರಂಗ ಹಾಗೂ ರಾಜಕೀಯ ವಲಯದ ಗಣ್ಯರು ಮತ್ತು ಅಭಿಮಾನಿಗಳು ಈ ಹೊಸ ಜೋಡಿಗೆ ಶುಭ ಹಾರೈಸುತ್ತಿದ್ದಾರೆ.

ಸ್ಟೇಟ್ ಬ್ಯಾಂಕ್ ಅಧಿಕಾರಿಯಾಗಿದ್ದ ನೀತಿ ದೇವ್ ಜೊತೆ ಬಿಪ್ಲಬ್ ದೇವ್ ಮದುವೆಯಾಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಕೆಲವೇ ತಿಂಗಳುಗಳ ಹಿಂದೆ ದಂಪತಿ ಡಿವೋರ್ಸ್‌ ಪಡೆದಿದ್ದರು. ಇದೀಗ ಕನ್ನಡದ ನಟಿಯನ್ನು ಬಿಪ್ಲಬ್ ದೇವ್ ವರಿಸಿದ್ದಾರೆ. ಜೂನ್ 24ರಂದು ಅಗರ್ತಲಾದ ಹೊಟೇಲ್ ಪೋಲೋ ಟವರ್ಸ್‌ನಲ್ಲಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದ್ದು ರಾಜಕೀಯ ಹಾಗೂ ಸಿನಿ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.