ರೀಲ್ಸ್ ಮಾಡಲು ನವಿಲುಗರಿ ಬಳಕೆ: ಕ್ಷಮೆ ಕೇಳಿದ ನಿವೇದಿತಾ ಗೌಡ, ಕಿಶನ್; ತನಿಖೆಗೂ ಸಹಕಾರ ಎಂದ ನಟಿ
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ನಟಿ ನಿವೇದಿತಾ ಗೌಡ ಹಾಗೂ ಕಿಶನ್ ಇಬ್ಬರೂ ವಿಡಿಯೋ ಮೂಲಕ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.

ಬೆಂಗಳೂರು: ನವಿಲು ಗರಿಗಳಿರುವ ಉಡುಪು ಧರಿಸಿ ರೀಲ್ಸ್ ಮಾಡಿದ ಬಿಗ್‌ಬಾಸ್ ಮಾಜಿ ಸ್ಪರ್ಧಿಗಳಾದ ಕಿಶನ್ ಹಾಗೂ ನಿವೇದಿತಾ ಗೌಡ ಅವರ ವಿರುದ್ಧ ಅರಣ್ಯ ಇಲಾಖೆಗೆ ದೂರು ನೀಡಲಾಗಿದೆ.
ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ಎಚ್ಚೆತ್ತುಕೊಂಡ ನಟಿ ನಿವೇದಿತಾ ಗೌಡ ಹಾಗೂ ಕಿಶನ್ ಇಬ್ಬರೂ ವಿಡಿಯೋ ಮೂಲಕ ಸಾರ್ವಜನಿಕವಾಗಿ ಕ್ಷಮೆ ಕೇಳಿದ್ದಾರೆ.
ರೀಲ್ಸ್ ಮಾಡಲು ನವಿಲುಗರಿ ಬಳಕೆ ಮಾಡುವ ಮೂಲಕ ವನ್ಯಜೀವಿ ಸಂರಕ್ಷಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ, ಇಬ್ಬರೂ ರೀಲ್ಸ್ ಡಿಲೀಟ್ ಮಾಡಿ, ವಿಡಿಯೋ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ನಿವೇದಿತಾ ಗೌಡ ಅವರು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಂಚಿಕೊಂಡಿದ್ದು, ವನ್ಯಜೀವಿ ವಸ್ತುಗಳನ್ನು ಅಥವಾ ಗರಿಗಳನ್ನು ಮನೆಯಲ್ಲಿ ಇಟ್ಟುಕೊಳ್ಳುವುದು ಮತ್ತು ಅದರಿಂದ ವಿಡಿಯೋ ಮಾಡುವುದು ಕಾನೂನು ಬಾಹಿರ. ಇದು ತಪ್ಪು ತಿಳುವಳಿಕೆಯಿಂದ ಮಾಡಿದ ವಿಡಿಯೋ. ಬೇರೆ ಯಾರೂ ಕೂಡ ಈ ರೀತಿಯ ವನ್ಯಜೀವಿ ವಸ್ತುಗಳನ್ನು ಬಳಸಿ ವಿಡಿಯೋ ಮಾಡಬೇಡಿ ಎಂದು ವಿನಂತಿಸಿದ್ದಾರೆ. ಅಲ್ಲದೆ ತಮ್ಮ ವಿರುದ್ಧ ಸದ್ಯ ನಡೆಯುತ್ತಿರುವ ಅರಣ್ಯ ಇಲಾಖೆಯ ತನಿಖೆಗೆ ಸಂಪೂರ್ಣವಾಗಿ ಸಹಕರಿಸುವುದಾಗಿ ತಿಳಿಸಿದ್ದಾರೆ.
ಈ ಸಂಬಂಧ ಅರಣ್ಯ ಇಲಾಖೆ ನೋಟಿಸ್ ನೀಡಿದ ಬಳಿಕ ಕಿಶನ್ ವಿಡಿಯೋ ಬಿಡುಗಡೆ ಮಾಡಿ ತಪ್ಪೊಪ್ಪಿಕೊಂಡಿದ್ದಾರೆ. ವಿಡಿಯೋ ಮಾಡುವ ವೇಳೆ ಇದು ಕಾನೂನುಬಾಹಿರ ಎಂಬ ಮಾಹಿತಿ ನಮಗೆ ಇರಲಿಲ್ಲ. ಹಲವು ತಂಡಗಳು ಸೇರಿ ಈ ಕೊಲಾಬರೇಷನ್ ವಿಡಿಯೋ ಮಾಡಿದ್ದೆವು. ಬಳಸಿದ ನವಿಲು ಗರಿಗಳನ್ನು ಬಾಡಿಗೆಗೆ ಪಡೆದಿದ್ದೆವು ಎಂದು ಹೇಳಿದ್ದಾರೆ.
ಇನ್ನು, ನಾನು ಒಬ್ಬ ಇನ್‌ಫ್ಲುಯೆನ್ಸರ್ ಆಗಿರುವುದರಿಂದ ಜನರಿಗೆ ತಪ್ಪು ಸಂದೇಶ ಹೋಗಬಾರದು. ಅದಕ್ಕಾಗಿ ವಿಡಿಯೋವನ್ನು ಅಳಿಸಿದ್ದೇನೆ. ಯಾರೂ ಕೂಡ ನವಿಲು ಗರಿಗಳನ್ನು ಬಳಸಬೇಡಿ ಎಂದು ಮನವಿ ಮಾಡಿದ್ದಾರೆ.
ಸದಾ ರೀಲ್ಸ್‌ನಲ್ಲಿ ಮಿಂಚುವ ನಿವೇದಿತಾ ಗೌಡ ಅವರು ಡ್ಯಾನ್ಸರ್ ಕಿಶನ್ ಅವರ ಜೊತೆ ನೈಜ ನವಿಲು ಗರಿಗಳನ್ನು ಬಳಸಿ ತಯಾರಿಸಿದ ಉಡುಪು ಧರಿಸಿ, ಹೇ ನವಿಲೇ ನವಿಲೇ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅಲ್ಲದೆ ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



