'ಇದು ನಮ್ಮ ದೌರ್ಭಾಗ್ಯ'; ನಟಿಯರನ್ನು ಅಸಭ್ಯ ಕೋನಗಳಲ್ಲಿ ತೋರಿಸಿದ ಪಾಪರಾಜಿಗಳ ಬಗ್ಗೆ ಶಿವಣ್ಣ ಬೇಸರ
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ.

ಬೆಂಗಳೂರು: ಸಿನಿಮಾ ಕಾರ್ಯಕ್ರಮಗಳಿಗೆ ಬರುವ ಕೆಲವು ಪಾಪರಾಜಿಗಳು ನಟಿಯರನ್ನು ಅಸಭ್ಯ ಕೋನದಿಂದ ಚಿತ್ರೀಕರಿಸಿ ಅದನ್ನು ಪೋಸ್ಟ್ ಮಾಡುತ್ತಿರುವ ಬಗ್ಗೆ ವಿರೋಧಗಳು ವ್ಯಕ್ತವಾಗುತ್ತಿದ್ದು, ನಟ ಶಿವರಾಜ್ ಕುಮಾರ್ ಅವರು ಕೂಡ ಈ ಬಗ್ಗೆ ಇದೀಗ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದು ಮನವಿ ಮಾಡಿದ್ದಾರೆ.
ಈ ಕಾಲದಲ್ಲೂ ಹೆಣ್ಣು ಮಕ್ಕಳನ್ನು ಗೌರವಿಸಿ ಎಂದು ಹೇಳಬೇಕೆಂದರೆ ಅದು ನಮ್ಮ ದೌರ್ಭಾಗ್ಯ. ದಯವಿಟ್ಟು ಆತ್ಮಸಾಕ್ಷಿ ಇಟ್ಟುಕೊಂಡು ಕೆಲಸ ಮಾಡಿ. ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದು ಬರೆದಿದ್ದಾರೆ.
ಚಿತ್ರರಂಗದಲ್ಲಿರುವ ಮಹಿಳೆಯರಾಗಿ, ನಿರಂತರವಾಗಿ ನಡೆಯುತ್ತಿರುವ ಒಂದು ಗಂಭೀರ ಸಮಸ್ಯೆಯನ್ನು ಎದುರಿಸಲು ಒಟ್ಟಾಗಿ ನಿಂತಿದ್ದೇವೆ. ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಮಹಿಳಾ ಕಲಾವಿದರ ವಿಡಿಯೋಗಳು ಮತ್ತು ಫೋಟೋಗಳನ್ನು ಅಸಭ್ಯ ಕೋನಗಳಿಂದ ಚಿತ್ರೀಕರಿಸಿ, ನಮ್ಮ ಕಲೆಯಿಗಿಂತ ನಮ್ಮ ದೇಹದ ಮೇಲೆ ಅನಾವಶ್ಯಕವಾಗಿ ಜೂಮ್ ಮಾಡಿ ಪ್ರಸಾರ ಮಾಡುವ ಘಟನೆಗಳು ಪುನಃ ಪುನಃ ನಡೆಯುತ್ತಿವೆ.
ಇಂತಹ ವರ್ತನೆ, ಕೆಲವರಿಂದ ನಡೆಯುತ್ತಿರುವುದಾದರೂ, ಅದು ಅಸಭ್ಯ,ಅವಮಾನಕಾರಿ ಮತ್ತು ಸೆಂಪೂರ್ಣವಾಗಿ ಅಸ್ವೀಕಾರಾರ್ಹವಾಗಿದೆ. ನಾವು ಇಲ್ಲಿ ನಮ್ಮ ಕಲೆಗಾಗಿ ಬಂದಿದ್ದೇವೆ. ನಾವು ಇಲ್ಲಿ ನಮ್ಮ ಸಿನಿಮಾಕ್ಕಾಗಿ ಬಂದಿದ್ದೇವೆ. ಉದ್ದೇಶಪೂರ್ವಕವಾಗಿ ಜೂಮ್ ಮಾಡುವುದು ಮತ್ತು ಅಸಭ್ಯಕೋನಗಳಿಂದ ಬಳಸುವುದು ನಮ್ಮಗೌರವಕ್ಕೆ ಸ್ಪಷ್ಟ ಧಕ್ಕೆ. ಇದನ್ನು ಸಾಮಾನ್ಯವೆಂದು ಸ್ವೀಕರಿಸುವುದಿಲ್ಲ, ಸಹಿಸುವುದಿಲ್ಲ ಎಂದು ನಟಿ ಸಪ್ತಮಿ ಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದರು.
ಕಾರ್ಯಕ್ರಮಗಳನ್ನು ವರದಿ ಮಾಡುವವರು ವೃತ್ತಿಪರತೆ, ಮೂಲಭೂತ ಗೌರವ ಮತ್ತು ಶಿಸ್ತನ್ನು ಕಾಪಾಡಬೇಕು ಎಂದು ನಾವು ನಿರೀಕ್ಷಿಸುತ್ತೇವೆ. ಈ ಗಡಿ ರೇಖೆಯನ್ನು ಸ್ಪಷ್ಟವಾಗಿ ಎಳೆದು, ನಾವು ಒಟ್ಟಾಗಿ ನಿಂತಿದ್ದೇವೆ. ಇಂತಹ ಅನುಭವವನ್ನು ಎದುರಿಸಿದ ಪ್ರತಿಯೊಬ್ಬ ಮಹಿಳೆಯೊಂದಿಗೂ ನಾವು ಐಕ್ಯತೆಯಲ್ಲಿ ನಿಂತಿದ್ದೇವೆ. ಗೌರವವನ್ನು ಬೇಡುವ ನಮ್ಮ ಧ್ವನಿ ಮುಂದುವರೆಯುತ್ತದೆ ಎಂದು ತಿಳಿಸಿದ್ದರು.
ಇದರ ಬೆನ್ನಲ್ಲೇ ಬೃಂದಾ ಆಚಾರ್ಯ, ಆಶಿಕಾ ರಂಗನಾಥ್, ರಿತನ್ಯಾ ವಿಜಯ್, ರಮ್ಯಾ, ರಕ್ಷಿತಾ ಪ್ರೇಮ್, ಸಂಜನಾ ಆನಂದ್, ಚೈತ್ರಾ ಜೆ ಆಚಾರ್, ವಾಸುಕಿ ವೈಭವ್, ನಟಿ ಅನುಪಮಾ ಗೌಡ, ನಟ ಯುವರಾಜ್ ಕುಮಾರ್ ಸೇರಿದಂತೆ ಸಾಕಷ್ಟು ಕಲಾವಿದರು ಬೆಂಬಲ ವ್ಯಕ್ತಪಡಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



