ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ಶಿವಣ್ಣ, ರಜನಿಕಾಂತ್: ಜೈಲರ್-2 ಗೆ ಶುರುವಾಯ್ತು ಹೊಸ ಕ್ರೇಜ್
ಬೇರೆ ಬೇರೆ ಭಾಷೆಯ ಸ್ಟಾರ್ ಕಲಾವಿದರು ಒಟ್ಟಿಗೆ ನಟಿಸುತ್ತಿದ್ದಾರೆ. ಅಚ್ಚರಿ ಎಂದರೆ ಈಗ ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ರಜನಿಕಾಂತ್, ಶಿವರಾಜ್ಕುಮಾರ್ ಮುಂತಾದವರು ನಟಿಸುತ್ತಿದ್ದಾರೆ.

ಮಲ್ಟಿಸ್ಟಾರರ್ ಸಿನಿಮಾಗಳ ಬಗ್ಗೆ ಪ್ರೇಕ್ಷಕರು ಯಾವಾಗಲೂ ಒಲವು ತೋರಿಸುತ್ತಾರೆ. ಪ್ಯಾನ್ ಇಂಡಿಯಾ ಸಿನಿಮಾಗಳ ಸಂಖ್ಯೆ ಹೆಚ್ಚಿದ ಬಳಿಕ ಈ ಟ್ರೆಂಡ್ ಜಾಸ್ತಿ ಆಗಿದೆ.
ಬೇರೆ ಬೇರೆ ಭಾಷೆಯ ಸ್ಟಾರ್ ಕಲಾವಿದರು ಒಟ್ಟಿಗೆ ನಟಿಸುತ್ತಿದ್ದಾರೆ. ಅಚ್ಚರಿ ಎಂದರೆ ಈಗ ಒಂದೇ ಸಿನಿಮಾದಲ್ಲಿ ಶಾರುಖ್ ಖಾನ್, ರಜನಿಕಾಂತ್, ಶಿವರಾಜ್ಕುಮಾರ್ ಮುಂತಾದವರು ನಟಿಸುತ್ತಿದ್ದಾರೆ. ದಕ್ಷಿಣ ಭಾರತದ ಸಿನಿಪ್ರಿಯರು ಕಾತುರದಿಂದ ಕಾಯುತ್ತಿರುವ ಸಿನಿಮಾ ಅಂದ್ರೆ ಅದು ರಜನಿಕಾಂತ್-ನೆಲ್ಸನ್ ಕಾಂಬಿನೇಷನ್‌ನ 'ಜೈಲರ್ 2'. ಮೊದಲ ಭಾಗದ ಬ್ಲಾಕ್‌ಬಸ್ಟರ್ ಯಶಸ್ಸಿನ ನಂತರ, ಮುತ್ತುವೇಲ್ ಪಾಂಡಿಯನ್ ಆಗಿ ರಜನಿಕಾಂತ್ ಮತ್ತೆ ತೆರೆ ಮೇಲೆ ಬರಲಿದ್ದಾರೆ.
ಹೀಗಾಗಿ ಪ್ರೇಕ್ಷಕರಲ್ಲಿ ನಿರೀಕ್ಷೆ ಮುಗಿಲುಮುಟ್ಟಿದೆ. 'ಜೈಲರ್ 2' ನಲ್ಲಿ ರಜನಿ ಜೊತೆ ಭಾರತೀಯ ಚಿತ್ರರಂಗದ ಘಟಾನುಘಟಿ ನಟರು ಸೇರಲಿದ್ದಾರೆ ಎಂಬ ಸುದ್ದಿ ಮೊದಲಿನಿಂದಲೂ ಇತ್ತು. ಇದೀಗ, 'ಜೈಲರ್' ಮೊದಲ ಭಾಗದಲ್ಲಿ ಮೋಹನ್‌ಲಾಲ್‌ಗೆ ಕಾಸ್ಟ್ಯೂಮ್ ಡಿಸೈನರ್ ಆಗಿದ್ದ ಜಿಶಾದ್ ಶಂಸುದ್ದೀನ್ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ ಪೋಸ್ಟ್ ಒಂದು ಹೊಸ ಚರ್ಚೆಗೆ ಕಾರಣವಾಗಿದೆ.
ಜೈಲರ್ 2 ಚಿತ್ರ ತಂಡವು ಇನ್ನೂ ಬಿಡುಗಡೆ ದಿನಾಂಕವನ್ನು ಘೋಷಿಸಿಲ್ಲ, ಆಗಸ್ಟ್ ಆಸುಪಾಸಿನಲ್ಲಿ ಬಿಡುಗಡೆಯಾಗುವ ನಿರೀಕ್ಷೆಯಿದೆ. ರಜನಿಕಾಂತ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಆಕ್ಷನ್ ಥ್ರಿಲ್ಲರ್ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ನೀಡಲಿದ್ದಾರೆ. ವಿಜಯ್ ಸೇತುಪತಿ, ಸೂರಜ್ ವೆಂಜರಮೂಡು ಮತ್ತು ಇತರ ನಟರು ಸಹ ಈ ಚಿತ್ರಕ್ಕೆ ಸೇರಲಿದ್ದು, ರಜನಿಕಾಂತ್ ಅವರ ಅತ್ಯಂತ ನಿರೀಕ್ಷಿತ ಚಿತ್ರಗಳಲ್ಲಿ ಜೈಲರ್ 2 ಒಂದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


