ಸಿನಿಮಾ ಸುದ್ದಿ

'ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ: ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ

ಸಾರ್ವಜನಿಕರ ಭಾವನೆಗಳಿಗೆ ಗೌರವ ನೀಡಿ ಈ ಹಾಡನ್ನು ಎಲ್ಲಾ ಡಿಜಿಟಲ್ ವೇದಿಕೆಗಳಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

'ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ: ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚನೆ
ಮಂಗ್ಲಿ
Published On :

ನಟ ಧ್ರುವ ಸರ್ಜಾ ಅಭಿನಯದ 'ಕೆಡಿ: ದಿ ಡೆವಿಲ್' ಚಿತ್ರದ 'ಸರ್ಸೆ ಸರ್ಸೆ' ಹಾಡಿನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಅದರ ಹಿಂದಿ ಆವೃತ್ತಿಯನ್ನು ಹಾಡಿದ್ದ ಗಾಯಕಿ ಮಂಗ್ಲಿ ಬೇಷರತ್ ಕ್ಷಮೆಯಾಚಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಟೀಕೆಗಳು ವ್ಯಕ್ತವಾದ ನಂತರ ಗಾಯಕಿ ಮಂಗ್ಲಿ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸುದೀರ್ಘ ಸ್ಪಷ್ಟನೆ ನೀಡಿದ್ದಾರೆ.

ಸಾರ್ವಜನಿಕರ ಭಾವನೆಗಳಿಗೆ ಗೌರವ ನೀಡಿ ಈ ಹಾಡನ್ನು ಎಲ್ಲಾ ಡಿಜಿಟಲ್ ವೇದಿಕೆಗಳಿಂದ ಸಂಪೂರ್ಣವಾಗಿ ತೆಗೆದುಹಾಕಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಅರಿಯದೆ ನಡೆದುಹೋದ ಈ ತಪ್ಪಿಗೆ ತಾವು ಪ್ರತಿಯೊಬ್ಬರಲ್ಲೂ ಕ್ಷಮೆ ಕೇಳುವುದಾಗಿ ತಿಳಿಸಿರುವ ಅವರು, ಯಾರಿಗೂ ನೋವು ಮಾಡುವ ಉದ್ದೇಶ ತಮಗಿರಲಿಲ್ಲ ಎಂದಿದ್ದಾರೆ. ಹಾಡಿನ ಸಾಹಿತ್ಯವನ್ನು ತಿದ್ದಲಾಗಿದ್ದು, ಶೀಘ್ರದಲ್ಲೇ ಪರಿಷ್ಕೃತ ಆವೃತ್ತಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಇದೇ ವೇಳೆ ತಮ್ಮ ಬೆಂಬಲಕ್ಕೆ ನಿಂತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಚಿತ್ರತಂಡಕ್ಕೆ ಅವರು ಧನ್ಯವಾದ ಅರ್ಪಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.