ಸಿನಿಮಾ ಸುದ್ದಿ

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ: ತಿರುಪತಿಗೆ ತ್ರಿಷಾ ಭೇಟಿ; ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡ ನಟಿ

ದಳಪತಿ ವಿಜಯ್​​ಗೆ ಇಂದು (ಮೇ 4) ಪ್ರಮುಖ ದಿನ. ಏಕೆಂದರೆ, ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಚುನಾವಣೆ ಸ್ಪರ್ಧಿಸಿದ್ದಾರೆ.

ತಮಿಳುನಾಡು ವಿಧಾನಸಭೆ ಚುನಾವಣೆ ಫಲಿತಾಂಶ: ತಿರುಪತಿಗೆ ತ್ರಿಷಾ ಭೇಟಿ; ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡ ನಟಿ
ತಿರುಪತಿಗೆ ನಟಿ ತ್ರಿಷಾ ಭೇಟಿ
Published On :

ದಕ್ಷಿಣ ಭಾರತದ ಚಿತ್ರರಂಗದ ಪ್ರಸಿದ್ಧ ನಟಿ ತ್ರಿಷಾ ಕೃಷ್ಣನ್ ಇಂದು ಬೆಳ್ಳಂಬೆಳಿಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ವಿಶೇಷವೆಂದರೆ, ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬೀಳುತ್ತಿರುವ ಹೊತ್ತಲ್ಲೇ ತ್ರಿಷಾ ತಿರುಪತಿಗೆ ಭೇಟಿ ನೀಡಿರುವುದು ಈಗ ಎಲ್ಲರ ಗಮನ ಸೆಳೆದಿದೆ.

ಮೇ 4ರಂದು ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ತ್ರಿಷಾ, ನಿನ್ನೆ ರಾತ್ರಿಯೇ ಕಾರಿನ ಮೂಲಕ ತಿರುಪತಿಗೆ ತೆರಳಿದ್ದರು. ಇಂದು ಮುಂಜಾನೆ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನಡೆದ ಸುಪ್ರಭಾತ ಸೇವೆಯಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆದರು. 4

ದಳಪತಿ ವಿಜಯ್​​ಗೆ ಇಂದು (ಮೇ 4) ಪ್ರಮುಖ ದಿನ. ಏಕೆಂದರೆ, ಇಂದು ತಮಿಳುನಾಡು ಚುನಾವಣೆಯ ಫಲಿತಾಂಶ ಹೊರಬೀಳುತ್ತಿದೆ. ವಿಜಯ್ ಅವರು ಟಿವಿಕೆ ಪಕ್ಷದ ಮೂಲಕ ಚುನಾವಣೆ ಸ್ಪರ್ಧಿಸಿದ್ದಾರೆ. ಮತ ಎಣಿಕೆ ಆರಂಭಕ್ಕೂ ಮೊದಲು ತ್ರಿಷಾ ಅವರು ತಿರುಪತಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ. ಈ ವಿಶೇಷ ಪೂಜೆ ದಳಪತಿ ವಿಜಯ್​​ಗೋಸ್ಕರವೇ ಎನ್ನುವ ಪ್ರಶ್ನೆ ಮೂಡಿದೆ.

ತ್ರಿಶಾ ಅವರು ತಮ್ಮ 43 ನೇ ಜನ್ಮದಿನದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ ಎನ್ನಲಾಗಿದ್ದು, ಆದರೆ, ಅಭಿಮಾನಿಗಳು ಟಿವಿಕೆ ಗೆಲುವಿಗಾಗಿ ತ್ರಿಶಾ ಅವರು ಪ್ರಾರ್ಥಿಸಿದ್ದಾರೆ ಎಂದು ಚರ್ಚಿಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.