ತೆಲುಗಿನ ಪೆದ್ದಿಯಲ್ಲಿ ಶಿವಣ್ಣನ ಗೆಟಪ್ ರಿಲೀಸ್..; ಗೌರ್‌ನಾಯ್ಡು ಅವತಾರದಲ್ಲಿ ಕರುನಾಡ ಕಿಂಗ್! Video
ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಒಂದಷ್ಟು ಗ್ಲಿಂಪ್ಸ್ ನಲ್ಲಿ ರಾಮ್ ಚರಣ್ ಅವತಾರ ನೋಡಿ ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ. ಪೆದ್ದಿಯಲ್ಲಿ ಶಿವರಾಜ್ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಶಿವಣ್ಣ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ.

ಗ್ಲೋಬಲ್ ಸ್ಟಾರ್ ರಾಮ್ ಚರಣ್ ನಟನೆಯ ಬಹುನಿರೀಕ್ಷಿತ 'ಪೆದ್ದಿ' ಸಿನಿಮಾ ಜೂನ್ 4ರಂದು ಅದ್ದೂರಿಯಾಗಿ ಬಿಡುಗಡೆಯಾಗ್ತಿದೆ.
ಈಗಾಗಲೇ ರಿಲೀಸ್ ಆಗಿರುವ ಚಿತ್ರದ ಒಂದಷ್ಟು ಗ್ಲಿಂಪ್ಸ್ ನಲ್ಲಿ ರಾಮ್ ಚರಣ್ ಅವತಾರ ನೋಡಿ ಫ್ಯಾನ್ಸ್ ಎಕ್ಸೈಟ್ ಆಗಿದ್ದಾರೆ. ಪೆದ್ದಿಯಲ್ಲಿ ಶಿವರಾಜ್ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದು, ಶಿವಣ್ಣ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೀಗ ತೆರೆಬಿದ್ದಿದೆ.
ಗೌರ್‌ನಾಯ್ಡು ಎಂಬ ಪಾತ್ರದಲ್ಲಿ ಶಿವಣ್ಣ ಅಭಿನಯಿಸಿದ್ದಾರೆ. ಕುಸ್ತಿ ಅಖಾಡದಲ್ಲಿ ಅವರು ಕಾಣಿಸಿಕೊಂಡಿರುವುದು ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚು ಮಾಡಿದೆ. ಮೇಕಿಂಗ್ ವಿಡಿಯೋದಲ್ಲಿ ಶಿವಣ್ಣ-ರಾಮ್ ಚರಣ್ ಒಟ್ಟಿಗೆ ಕಾಣಿಸಿಕೊಂಡಿದ್ದು, ಅಭಿಮಾನಿಗಳು ಇವರಿಬ್ಬರನ್ನು ನೋಡಿ ಥ್ರಿಲ್ ಆಗಿದ್ದಾರೆ.
ಉಪ್ಪೆನ ಸಿನಿಮಾವನ್ನು ನಿರ್ದೇಶಿಸಿದ್ದ ಬುಚ್ಚಿ ಬಾಬು ಸನಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದಾರೆ. ಪೆದ್ದಿ ಸಿನಿಮಾದಲ್ಲಿ ರಾಮ್ ಚರಣ್‌ಗೆ ಬಾಲಿವುಡ್ ನಟಿ ಜಾನ್ವಿ ಕಪೂರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಸ್ಪೆಷಲ್ ರೋಲ್ ಪ್ಲೇ ಮಾಡಿದ್ದಾರೆ. ಇನ್ನುಳಿದಂತೆ, ಜಗಪತಿ ಬಾಬು, ದಿವೇಂದು ಶರ್ಮಾ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ.

ನಟ ಶಿವರಾಜ್ ಕುಮಾರ್ ಮದುವೆ ಆಗುವ ಆಸೆ... ಗಾಸಿಪ್ ಗೆ ತಮ್ಮದೇ ಸ್ಟೈಲ್ ನಲ್ಲಿ ಉತ್ತರ ಕೊಟ್ಟ ಸುಧಾರಾಣಿ; Video
ಸಿನಿಮಾಗೆ ಎ.ಆರ್ ರೆಹಮಾನ್ ಸಂಗೀತ ನಿರ್ದೇಶನ ಮಾಡುತ್ತಿದ್ದು, ʻವೃದ್ಧಿ ಸಿನಿಮಾಸ್ʼ ಬ್ಯಾನರ್ ಅಡಿಯಲ್ಲಿ ವೆಂಕಟ ಸತೀಶ್ ಕಿಲಾರು ನಿರ್ಮಾಣ ಮಾಡುತ್ತಿದ್ದಾರೆ. ʻಮೈತ್ರಿ ಮೂವೀ ಮೇಕರ್ಸ್ʼ ಮತ್ತು ಸುಕುಮಾರ್ ರೈಟಿಂಗ್ಸ್ ಬ್ಯಾನರ್‌ಗಳು ಚಿತ್ರಕ್ಕೆ ಬೆಂಬಲವಾಗಿ ನಿಂತಿವೆ. ಆರ್ ರತ್ನವೇಲು ಛಾಯಾಗ್ರಹಣ, ನವೀಲ್ ನೂಲಿ ಸಂಕಲನ ಚಿತ್ರಕ್ಕಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


