ಸಿನಿಮಾ ಸುದ್ದಿ

ಮಗಳು ಆರಾಧ್ಯ ಜೊತೆಗೆ ಪಾಪರಾಜಿಗಳ ಕಣ್ಣಿಗೆ ಬಿದ್ದ ಐಶ್ವರ್ಯಾ ರೈ ಬಚ್ಚನ್! Video

ಐಶ್ವರ್ಯಾ ರೈ ಕೇನ್ಸ್‌ನಲ್ಲಿ ನಿಯಮಿತವಾಗಿ ಭಾಗವಹಿಸುತ್ತಿದ್ದು, ರೆಡ್ ಕಾರ್ಪೆಟ್‌ನಲ್ಲಿ ತಮ್ಮ ಐಕಾನಿಕ್ ನೋಟಕ್ಕೆ ಹೆಸರುವಾಸಿಯಾಗಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮಗಳಿಂದಲೂ ಭಾರಿ ಪ್ರತಿಕ್ರಿಯೆ ಗಳಿಸುತ್ತಾ ಬಂದಿದ್ದಾರೆ.

ಮಗಳು ಆರಾಧ್ಯ ಜೊತೆಗೆ ಪಾಪರಾಜಿಗಳ ಕಣ್ಣಿಗೆ ಬಿದ್ದ ಐಶ್ವರ್ಯಾ ರೈ ಬಚ್ಚನ್! Video
ಮಗಳು ಆರಾಧ್ಯ ಜೊತೆಗೆ ಐಶ್ವರ್ಯಾ ರೈ ಬಚ್ಚನ್
Published On :

ಮುಂಬೈ: ಬಹಳ ದಿನಗಳಿಂದ ಬೆಳ್ಳಿ ಚಿತ್ರರಂಗದಿಂದ ದೂರವಿರುವ ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್, ಮಗಳು ಆರಾಧ್ಯ ಜೊತೆಗೆ ಕಾಣಿಸಿಕೊಂಡಿದ್ದಾರೆ.

ಫ್ರಾನ್ಸ್‌ನ ಕ್ಯಾನೆಸ್‌ನಲ್ಲಿ ನಡೆಯುವ ಕೇನ್ ಚಲನಚಿತ್ರೋತ್ಸವಕ್ಕೆ ತೆರಳುವಾಗ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ತಾಯಿ-ಮಗಳು ಪಾಪರಾಜಿಗಳ ಕಣ್ಣಿಗೆ ಬಿದ್ದಿದ್ದಾರೆ.

ಐಶ್ವರ್ಯಾ ರೈ ಕೇನ್ಸ್‌ನಲ್ಲಿ ನಿಯಮಿತವಾಗಿ ಭಾಗವಹಿಸುತ್ತಿದ್ದು, ರೆಡ್ ಕಾರ್ಪೆಟ್‌ನಲ್ಲಿ ತಮ್ಮ ಐಕಾನಿಕ್ ನೋಟಕ್ಕೆ ಹೆಸರುವಾಸಿಯಾಗಿದ್ದಾರೆ. ಅಂತಾರಾಷ್ಟ್ರೀಯ ಮಾಧ್ಯಮಗಳಿಂದಲೂ ಭಾರಿ ಪ್ರತಿಕ್ರಿಯೆ ಗಳಿಸುತ್ತಾ ಬಂದಿದ್ದಾರೆ.

ಈ ಹಿಂದೆ ಕುಟುಂಬದೊಂದಿಗೆ ಸಂತಸದಿಂದ ಇರುವ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುವ ಮೂಲಕ ಪತಿ ಅಭಿಷೇಕ್ ಜೊತೆಗಿನ 19 ವರ್ಷಗಳ ದಾಂಪತ್ಯ ಜೀವನದ ಬಗ್ಗೆ ಎದ್ದಿದ್ದ ವದಂತಿಗಳಿಗೆ ಬ್ರೇಕ್ ಹಾಕಿದ್ದರು.

ಮಾರ್ಚ್ 5 ರಂದು ಸಚಿನ್ ತೆಂಡೊಲ್ಕರ್ ಅವರ ಪುತ್ರ ಅರ್ಜುನ್ ತೆಂಡೊಲ್ಕರ್ ಅವರ ವಿವಾಹ ಮಹೋತ್ಸವ ಸಂದರ್ಭದಲ್ಲಿ ಅಪರೂಪಕ್ಕೆ ಎಂಬಂತೆ ಐಶ್ವರ್ಯ ಹಾಗೂ ಅಭಿಷೇಕ್ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ಸುದ್ದಿಯಾಗಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.