ಸಿನಿಮಾ ಸುದ್ದಿ

24 ವರ್ಷಗಳ ಬಳಿಕ ಒಂದಾದ ರಿಯಲ್ ಸ್ಟಾರ್-ಡಾನ್ಸ್ ಕಿಂಗ್: ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ ಬಿಗ್ ಮಲ್ಟಿಸ್ಟಾರರ್ ಚಿತ್ರಕ್ಕೆ ನೆಟ್‌ಫ್ಲಿಕ್ಸ್ ಸಾಥ್

ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಖ್ಯಾತ ನೃತ್ಯ ನಿರ್ದೇಶಕ, ನಟ ಪ್ರಭುದೇವ ಬರೋಬ್ಬರಿ 24 ವರ್ಷಗಳ ಸುದೀರ್ಘ ಬಿಡುವಿನ ನಂತರ ಮತ್ತೆ ಒಂದೇ ಸಿನಿಮಾದಲ್ಲಿ ಒಟ್ಟಿಗೆ ನಟಿಸಲು ಸಜ್ಜಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

24 ವರ್ಷಗಳ ಬಳಿಕ ಒಂದಾದ ರಿಯಲ್ ಸ್ಟಾರ್-ಡಾನ್ಸ್ ಕಿಂಗ್: ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ ಬಿಗ್ ಮಲ್ಟಿಸ್ಟಾರರ್ ಚಿತ್ರಕ್ಕೆ ನೆಟ್‌ಫ್ಲಿಕ್ಸ್ ಸಾಥ್
24 ವರ್ಷಗಳ ಬಳಿಕ ಒಂದಾದ ರಿಯಲ್ ಸ್ಟಾರ್-ಡಾನ್ಸ್ ಕಿಂಗ್ — Online Desk
Published On :

ಕನ್ನಡ ಚಿತ್ರರಂಗದ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಖ್ಯಾತ ನೃತ್ಯ ನಿರ್ದೇಶಕ, ನಟ ಪ್ರಭುದೇವ ಬರೋಬ್ಬರಿ 24 ವರ್ಷಗಳ ಸುದೀರ್ಘ ಬಿಡುವಿನ ನಂತರ ಮತ್ತೆ ಒಂದೇ ಸಿನಿಮಾದಲ್ಲಿ ಒಟ್ಟಿಗೆ ನಟಿಸಲು ಸಜ್ಜಾಗಿದ್ದಾರೆ. ಜನಪ್ರಿಯ ಓಟಿಟಿ ಸಂಸ್ಥೆ ನೆಟ್‌ಫ್ಲಿಕ್ಸ್ ಈ ಬೃಹತ್ ಮಲ್ಟಿಸ್ಟಾರರ್ ಸಿನಿಮಾವನ್ನು ಜಾಗತಿಕ ಮಟ್ಟದಲ್ಲಿ ನಿರ್ಮಿಸುತ್ತಿದ್ದು, ಕಾಲಿವುಡ್‌ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರು ಈ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಹಿಂದೆ 2002 ರಲ್ಲಿ ತೆರೆಕಂಡಿದ್ದ ಸೂಪರ್ ಹಿಟ್ H2O ಸಿನಿಮಾದಲ್ಲಿ ಉಪೇಂದ್ರ ಮತ್ತು ಪ್ರಭುದೇವ ಒಟ್ಟಿಗೆ ನಟಿಸಿ ಪ್ರೇಕ್ಷಕರನ್ನು ರಂಜಿಸಿದ್ದರು. ಅದಾದ ಬಳಿಕ ಅಂದರೆ 24 ವರ್ಷಗಳ ನಂತರ ಈ ಜೋಡಿ ಮತ್ತೆ ಒಂದಾಗುತ್ತಿರುವುದು ಸಿನಿರಸಿಕರಲ್ಲಿ ಭಾರಿ ಕುತೂಹಲ ಮೂಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಡೈರೆಕ್ಟ್ ಓಟಿಟಿ ರಿಲೀಸ್

ಇನ್ನು ಹೆಸರಿಡದ ಈ ಸಿನಿಮಾ ಯಾವುದೇ ಥಿಯೇಟರ್ ಬಿಡುಗಡೆ ಇಲ್ಲದೆ, ನೇರವಾಗಿ ನೆಟ್‌ಫ್ಲಿಕ್ಸ್ ಓಟಿಟಿ ವೇದಿಕೆಯಲ್ಲಿ ಪ್ರಸಾರವಾಗಲಿದ್ದು, ತಮಿಳುನಾಡಿನ ಸಾಂಪ್ರದಾಯಿಕ ಜಾನಪದ ಕಲೆಯಾದ ಪುಲಿಯಾಟ್ಟಂ - ಹುಲಿ ವೇಷದ ನೃತ್ಯ ಹಿನ್ನೆಲೆಯನ್ನು ಒಳಗೊಂಡ ಕಾದಂಬರಿಯೊಂದರ ಆಧಾರದ ಮೇಲೆ ಕಾರ್ತಿಕ್ ಸುಬ್ಬರಾಜ್ ಈ ಗ್ರಾಮೀಣ ಆ್ಯಕ್ಷನ್-ಡ್ರಾಮಾ ಚಿತ್ರದ ಕಥೆಯನ್ನು ಸಿದ್ಧಪಡಿಸಿದ್ದಾರೆ.

ಮುಂದುವರೆದು, ಈ ಚಿತ್ರದಲ್ಲಿ ಉಪೇಂದ್ರ ಮತ್ತು ಪ್ರಭುದೇವ ಅವರೊಂದಿಗೆ ತಮಿಳಿನ ಮತ್ತೊಬ್ಬ ಜನಪ್ರಿಯ ಯುವ ನಟ ಅಥರ್ವ ಮುರಳಿ ಕೂಡ ಪ್ರಮುಖ ಹಾಗೂ ಪ್ರಭಾವಶಾಲಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದ್ದು, ಇತ್ತೀಚೆಗೆ ಬಿಡುಗಡೆಯಾದ ತಮ್ಮ ಡೊರೊತಿ ಸಿನಿಮಾದ ಪ್ರಮೋಷನ್ ಸಂದರ್ಶನದಲ್ಲಿ ಸ್ವತಃ ನಿರ್ದೇಶಕ ಕಾರ್ತಿಕ್ ಸುಬ್ಬರಾಜ್ ಅವರು ಈ ಹೊಸ ಚಿತ್ರದ ಮೊದಲ ಹಂತದ ಶೂಟಿಂಗ್ ಅನ್ನು ಅತ್ಯಂತ ರಹಸ್ಯವಾಗಿ ಈಗಾಗಲೇ ಮುಗಿಸಿರುವುದಾಗಿ ಬಹಿರಂಗಪಡಿಸಿದ್ದಾರೆ. ಚಿತ್ರದ ಮುಂದಿನ ಹಂತದ ಚಿತ್ರೀಕರಣವು ಅಕ್ಟೋಬರ್ ಮಧ್ಯಭಾಗದಿಂದ ಆರಂಭವಾಗಲಿದೆ.

ಏತನ್ಮಧ್ಯೆ, ಈ ಸಿನಿಮಾವನ್ನು ತಮಿಳು ಭಾಷೆಯಲ್ಲಿ ನಿರ್ಮಿಸಲಾಗುತ್ತಿದ್ದು, ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಪ್ರಮುಖ ಭಾಷೆಗಳಿಗೆ ಡಬ್ ಆಗಿ ಬಿಡುಗಡೆಯಾಗುವ ನಿರೀಕ್ಷೆಯಿದೆ.

ಕಾರ್ತಿಕ್ ಸುಬ್ಬರಾಜ್, ಉಪೇಂದ್ರ, ಅಥರ್ವ, ಪ್ರಭುದೇವ
ಕಾರ್ತಿಕ್ ಸುಬ್ಬರಾಜ್, ಉಪೇಂದ್ರ, ಅಥರ್ವ, ಪ್ರಭುದೇವ — Express

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.