ಸಿನಿಮಾ ಸುದ್ದಿ

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!

ಕನ್ನಡ ಕಿರುತೆರೆ ನಟಿ ಐಶ್ವರ್ಯಾ ಪಿಸ್ಸೆ ತನ್ನ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ‘ಅನುರೂಪ’, ‘ಪುನರ್ ವಿವಾಹ’ ಸೇರಿದಂತೆ ಹಲವು ಯಶಸ್ವಿ ಧಾರಾವಾಹಿಗಳಲ್ಲಿ ನಟಿಸಿರುವ ಐಶ್ವರ್ಯ ಪಿಸ್ಸೆ ತಮ್ಮ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ಅಂತ್ಯ ಹಾಡಿದ್ದಾರೆ.

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!
ಐಶ್ವರ್ಯಾ ಪಿಸ್ಸೆ-ಹರಿ ವಿನಯ್‌
Published On :

ಬೆಂಗಳೂರು: ಕನ್ನಡ ಕಿರುತೆರೆ ನಟಿ ಐಶ್ವರ್ಯಾ ಪಿಸ್ಸೆ ತನ್ನ ಪತಿಯಿಂದ ವಿಚ್ಛೇದನ ಪಡೆದುಕೊಂಡಿದ್ದಾರೆ. ‘ಅನುರೂಪ’, ‘ಪುನರ್ ವಿವಾಹ’ ಸೇರಿದಂತೆ ಹಲವು ಯಶಸ್ವಿ ಧಾರಾವಾಹಿಗಳಲ್ಲಿ ನಟಿಸಿರುವ ಐಶ್ವರ್ಯ ಪಿಸ್ಸೆ ತಮ್ಮ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ಅಂತ್ಯ ಹಾಡಿರುವುದಾಗಿ ಸಾಮಾಜಿಕ ಜಾಲತಾಣದ ಮೂಲಕ ಬಹಿರಂಗಪಡಿಸಿದ್ದಾರೆ. 7 ವರ್ಷಗಳ ಹಿಂದೆ ನಟಿ ಹರಿ ವಿನಯ್‌ ಅವರನ್ನು ವಿವಾಹವಾಗಿದ್ದರು.

ನನ್ನ ವೈಯಕ್ತಿಕ ಜೀವನದ ಸುತ್ತ ಹರಡುತ್ತಿರುವ ವದಂತಿಗಳಿಗೆ ಅಂತ್ಯ ಹಾಡುವ ಉದ್ದೇಶದಿಂದ ಈ ವಿಷಯದ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ನಾನು ಮತ್ತು ನನ್ನ ಪತಿ ಕಳೆದ ಒಂದೂವರೆ ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದೇವೆ. ಸಾಕಷ್ಟು ಯೋಚನೆ ಮತ್ತು ಪರಸ್ಪರ ಒಪ್ಪಿಗೆಯೊಂದಿಗೆ, ನಾವು ಪರಸ್ಪರ ಒಪ್ಪಿಗೆಯ ವಿಚ್ಛೇದನ ಪಡೆದಿದ್ದೇವೆ. ಇದು ನಮ್ಮಿಬ್ಬರ ವೈಯಕ್ತಿಕ ನಿರ್ಧಾರವಾಗಿದ್ದು, ಈ ಹಂತದಲ್ಲಿ ನಮಗೆ ಅಗತ್ಯವಿರುವ ಖಾಸಗಿತನ ಮತ್ತು ನೆಮ್ಮದಿಯನ್ನು ಗೌರವಿಸಿ, ನಮ್ಮ ಆಯ್ಕೆಯನ್ನು ಎಲ್ಲರೂ ಮಾನ್ಯ ಮಾಡಬೇಕೆಂದು ವಿನಂತಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಅಲ್ಲದೆ, ವೀಕ್ಷಣೆ ಹಾಗೂ ಲೈಕ್ಸ್‌ಗಳಿಗಾಗಿ ಆಧಾರರಹಿತ ಸುಳ್ಳು ಸುದ್ದಿಗಳನ್ನು ಅಥವಾ ಹಳೆಯ ದೃಶ್ಯಗಳನ್ನು ಬಳಸಿ ತಪ್ಪು ಸಂದೇಶಗಳನ್ನು ಹಬ್ಬಿಸಬಾರದು ಎಂದು ಎಚ್ಚರಿಸಿದ್ದು, ಇಂತಹ ಕೃತ್ಯಗಳು ಮುಂದುವರಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ನಟಿಯ ಈ ಅಚ್ಚರಿಯ ನಿರ್ಧಾರಕ್ಕೆ ಅವರ ಅಭಿಮಾನಿಗಳು ಕಾಮೆಂಟ್‌ಗಳ ಮೂಲಕ ಧೈರ್ಯ ತುಂಬುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.