ಸುದೀಪ್ ಹುಟ್ಟುಹಬ್ಬಕ್ಕೆ ಭರ್ಜರಿ ಗಿಫ್ಟ್: 'ಬಿಲ್ಲ ರಂಗ ಬಾಷಾ' ಹೊಸ ಪೋಸ್ಟರ್ ರಿಲೀಸ್; ಕಿಚ್ಚನ ರಗಡ್ ಲುಕ್ಗೆ ಫ್ಯಾನ್ಸ್ ಫಿದಾ..!
ಪೋಸ್ಟರ್ನಲ್ಲಿ ಸುದೀಪ್ ಅವರು ಈ ಹಿಂದೆ ಕಾಣಿಸಿಕೊಳ್ಳದ ವಿಭಿನ್ನ ಹಾಗೂ ರಗಡ್ ಅವತಾರದಲ್ಲಿ ಮಿಂಚಿದ್ದಾರೆ.

ಹಿಮದಿಂದ ಆವೃತವಾದ ಪ್ರದೇಶ, ವೇಗವಾಗಿ ಸಾಗುತ್ತಿರುವ ಬೈಕ್, ಮೇಲ್ಭಾಗದಲ್ಲಿ ಹಾರುತ್ತಿರುವ ವಿಮಾನ... ಈ ಎಲ್ಲದರ ನಡುವೆ ಬೈಕ್ ಏರಿ ಸವಾರಿ ಮಾಡುತ್ತಿರುವುದು ಬೇರೆ ಯಾರೂ ಅಲ್ಲ, ಕಿಚ್ಚ ಸುದೀಪ್.
ನಟ ಸುದೀಪ್ ಅವರ 53ನೇ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ ಸಿನಿಮಾದ ಹೊಸ ಪೋಸ್ಟರ್ ಬಿಡುಗಡೆಯಾಗಿದ್ದು, ಅಭಿಮಾನಿಗಳ ಗಮನ ಸೆಳೆಯುತ್ತಿದೆ.
ಪೋಸ್ಟರ್ನಲ್ಲಿ ಸುದೀಪ್ ಅವರು ಈ ಹಿಂದೆ ಕಾಣಿಸಿಕೊಳ್ಳದ ವಿಭಿನ್ನ ಹಾಗೂ ರಗಡ್ ಅವತಾರದಲ್ಲಿ ಮಿಂಚಿದ್ದಾರೆ. ಹಿಮಾವೃತ ಪ್ರದೇಶದಲ್ಲಿ ಬೈಕ್ ರೈಡ್ ಮಾಡುತ್ತಿರುವ ಸುದೀಪ್, ಕಣ್ಣಿಗೆ ಗಾಗಲ್ಸ್ ಹಾಗೂ ವಿಶಿಷ್ಟ ವಿನ್ಯಾಸದ ಕೋಟ್ ಧರಿಸಿರುವುದು ಅವರ ಪಾತ್ರದ ಮೇಲಿನ ಕುತೂಹಲ ಹೆಚ್ಚಿಸಿದೆ.
ಪೋಸ್ಟರ್ನ ಹಿನ್ನಲೆಯಲ್ಲಿ ವಿಮಾನ ಹಾಗೂ ರೈಲು ಪಲ್ಟಿಯಾಗುತ್ತಿರುವ ದೃಶ್ಯಗಳೂ ಕಾಣಿಸಿಕೊಂಡಿದ್ದು, ಇದು ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರಲಿದೆ ಎಂಬ ಸುಳಿವನ್ನು ನೀಡುತ್ತಿದೆ.
‘ವಿಕ್ರಾಂತ್ ರೋಣ’ ಚಿತ್ರದ ಯಶಸ್ಸಿನ ಬಳಿಕ ಕಿಚ್ಚ ಸುದೀಪ್ ಹಾಗೂ ನಿರ್ದೇಶಕ ಅನೂಪ್ ಭಂಡಾರಿ ಮತ್ತೊಮ್ಮೆ ಒಂದಾಗಿರುವ ಸಿನಿಮಾ ‘ಬಿಲ್ಲ ರಂಗ ಬಾಷಾ’.
ಪ್ರೈಮ್ ಶೋ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕೆ. ನಿರಂಜನ್ ರೆಡ್ಡಿ ಹಾಗೂ ಚೈತನ್ಯ ರೆಡ್ಡಿ ಈ ಬಿಗ್ ಬಜೆಟ್ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಚಿತ್ರವನ್ನು ಸಿದ್ಧಪಡಿಸಲಾಗುತ್ತಿದೆ.
ವಿವಿಧ ಕಾರಣಗಳಿಂದ ‘ಬಿಲ್ಲ ರಂಗ ಬಾಷಾ’ ಸಿನಿಮಾ ನಿರ್ಮಾಣದಲ್ಲಿ ವಿಳಂಬವಾಗಿತ್ತು. ಇದೀಗ ಜೂನ್ನಲ್ಲಿ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ಬಿಗ್ ಬಜೆಟ್ ಆ್ಯಕ್ಷನ್ ಎಂಟರ್ಟೈನರ್ ಆಗಿರುವ ಈ ಸಿನಿಮಾ 2027ರಲ್ಲಿ ಅದ್ಧೂರಿಯಾಗಿ ಚಿತ್ರಮಂದಿರಗಳಿಗೆ ಬರಲು ಸಜ್ಜಾಗುತ್ತಿದೆ.
ಸುದೀಪ್ ಅವರ ಹುಟ್ಟುಹಬ್ಬದಂದೇ ಬಿಡುಗಡೆಯಾದ ಹೊಸ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ‘ಬಿಲ್ಲ ರಂಗ ಬಾಷಾ’ ಚಿತ್ರದ ಮೇಲಿನ ಅಭಿಮಾನಿಗಳ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



