'ನಮ್ಮ ಅಜ್ಜಿ ಆರೋಗ್ಯವಾಗಿದ್ದಾರೆ, ಸುಳ್ಳು ಸುದ್ದಿ ಹಬ್ಬಿಸಬೇಡಿ': ಹಿರಿಯ ನಟಿ ಲಕ್ಷ್ಮೀದೇವಿ ಮೊಮ್ಮಗಳು ಸ್ಪಷ್ಟನೆ
ಎಂ.ಎನ್. ಲಕ್ಷ್ಮೀದೇವಿ ಅವರು ಆರಾಮವಾಗಿ ನಡೆದುಕೊಂಡು ಓಡಾಡುತ್ತಿರುವ ವಿಡಿಯೋ ಬಿಡುಗಡೆ ಮಾಡಿರುವ ಅವರು, ನಮ್ಮ ಅಜ್ಜಿ ಆರೋಗ್ಯವಾಗಿದ್ದಾರೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ, ಹಾಸ್ಯ ನಟಿ ಎಂ.ಎನ್. ಲಕ್ಷ್ಮೀದೇವಿ ಅವರು ನಿಧನರಾಗಿದ್ದಾರೆ ಎಂಬ ಸುದ್ದಿ ಇಂದು ಮಧ್ಯಾಹ್ನ ಹರಿದಾಡಿತ್ತು. ಆದರೆ ಅದು ಸುಳ್ಳುಸುದ್ದಿ ಎಂದು ಅವರ ಮೊಮ್ಮಗಳು ನಟಿ ದೀಪಿಕಾ ಶರಣ್ ಸ್ಪಷ್ಟನೆ ನೀಡಿದ್ದಾರೆ.
ಎಂ.ಎನ್. ಲಕ್ಷ್ಮೀದೇವಿ ಅವರು ಆರಾಮವಾಗಿ ನಡೆದುಕೊಂಡು ಓಡಾಡುತ್ತಿರುವ ವಿಡಿಯೋ ಬಿಡುಗಡೆ ಮಾಡಿರುವ ಅವರು, ನಮ್ಮ ಅಜ್ಜಿ ಆರೋಗ್ಯವಾಗಿದ್ದಾರೆ. ದಯವಿಟ್ಟು ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಕಳೆದ 7 ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ, ಸಾವಿರಕ್ಕೂ ಅಧಿಕ ಚಲನಚಿತ್ರಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಕಲಾಲೋಕಕ್ಕೆ ಅಪಾರ ಕೊಡುಗೆ ನೀಡಿರುವ ಲಕ್ಷ್ಮಿ ಅವರಿಗೆ. ಇತ್ತೀಚೆಗಷ್ಟೇ ಪ್ರತಿಷ್ಠಿತ ‘ಸಾ.ರಾ.ಗೋವಿಂದು ಕನ್ನಡಶ್ರೀ ಪ್ರಶಸ್ತಿ’ ಬಂದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


