ಸಂಗೀತ ದಿಗ್ಗಜೆ MS ಸುಬ್ಬುಲಕ್ಷ್ಮಿ ಜೀವನ ಚರಿತ್ರೆಯಲ್ಲಿ ರಶ್ಮಿಕಾ ಮಂದಣ್ಣ: ಅಧಿಕೃತ ಘೋಷಣೆ
ಈ ಮಹತ್ವದ ಪಾತ್ರಕ್ಕಾಗಿ ಹಲವು ಸ್ಟಾರ್ ನಟಿಯರ ಹೆಸರುಗಳು ಕೇಳಿಬಂದಿದ್ದರೂ, ಅಂತಿಮವಾಗಿ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಈ ಐತಿಹಾಸಿಕ ಪಾತ್ರವನ್ನು ನಿರ್ವಹಿಸುವುದು ಖಚಿತವಾಗಿದೆ.

ಶಾಸ್ತ್ರೀಯ ಸಂಗೀತದ ದಂತಕಥೆ, ‘ಭಾರತರತ್ನ’ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಜೀವನಾಧಾರಿತ ಪ್ಯಾನ್ ಇಂಡಿಯಾ ಬಯೋಪಿಕ್ ಚಿತ್ರಕ್ಕೆ ಕೊನೆಗೂ ನಾಯಕಿ ಅಂತಿಮಗೊಂಡಿದ್ದಾರೆ.
ಈ ಮಹತ್ವದ ಪಾತ್ರಕ್ಕಾಗಿ ಹಲವು ಸ್ಟಾರ್ ನಟಿಯರ ಹೆಸರುಗಳು ಕೇಳಿಬಂದಿದ್ದರೂ, ಅಂತಿಮವಾಗಿ ‘ನ್ಯಾಷನಲ್ ಕ್ರಶ್’ ರಶ್ಮಿಕಾ ಮಂದಣ್ಣ ಅವರೇ ಈ ಐತಿಹಾಸಿಕ ಪಾತ್ರವನ್ನು ನಿರ್ವಹಿಸುವುದು ಖಚಿತವಾಗಿದೆ.
ರಶ್ಮಿಕಾ ಮಂದಣ್ಣ, ತಾವೇ ಈ ಪಾತ್ರವನ್ನು ಮಾಡುತ್ತಿರುವುದಾಗಿ ಅಧಿಕೃತವಾಗಿ ಪೋಸ್ಟ್ ಮಾಡುವ ಮೂಲಕ ಖಚಿತಪಡಿಸಿದ್ದಾರೆ. ಎಂ.ಎಸ್. ಸುಬ್ಬುಲಕ್ಷ್ಮಿ ಅವರ 110ನೇ ಜನ್ಮದಿನೋತ್ಸವದ ವಿಶೇಷ ಸಂದರ್ಭದಲ್ಲಿ ಈ ಚಿತ್ರವನ್ನು ಅಧಿಕೃತವಾಗಿ ಘೋಷಿಸಲಾಗಿದೆ.
ಜೆರ್ಸಿ’ ಖ್ಯಾತಿಯ ಪ್ರತಿಭಾವಂತ ನಿರ್ದೇಶಕ ಗೌತಮ್ ತಿನ್ನನೂರಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಅಧಿಕೃತ ಪ್ರಕಟಣೆಯ ಬೆನ್ನಲ್ಲೇ ರಶ್ಮಿಕಾ ಮಂದಣ್ಣ ಅವರು ಸುಬ್ಬುಲಕ್ಷ್ಮಿ ರೂಪದಲ್ಲಿರುವ ತಮ್ಮ ಲುಕ್ ಪೋಸ್ಟರ್ ಅನ್ನು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದಾರೆ. ಸಂಗೀತ ದಿಗ್ಗಜೆ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ವ್ಯಕ್ತಿತ್ವ ಹಾಗೂ ಸಂಗೀತ ಸಾಧನೆಯನ್ನು ತೆರೆಯ ಮೇಲೆ ಹೇಗೆ ಕಟ್ಟಿಕೊಡಲಿದ್ದಾರೆ ಎಂಬ ತೀವ್ರ ಕುತೂಹಲ ಅಭಿಮಾನಿಗಳಲ್ಲಿ ಮೂಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



