ನಟ ನಿರ್ದೇಶಕ ಓಂ ಪ್ರಕಾಶ್ ರಾವ್ ಏಕಾಏಕಿ ಆಸ್ಪತ್ರೆಗೆ ಸೇರೋದಕ್ಕೆ ಕಾರಣ ಏನು: ಮಾಹಿತಿ ಬಿಚ್ಚಿಟ್ಟ ಪ್ರಥಮ ಪ್ರಸಾದ್!
ಈ ಕಾರಣಕ್ಕೆ ಅವರ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎಂದು ಭಾವಿಸುತ್ತೇನೆ ಎಂದು ಪ್ರಥಮ ಪ್ರಸಾದ್ ಹೇಳಿದ್ದಾರೆ. ಹೀಗಾಗಿ ಅವರಿಗೆ ಶೋದಿಂದ ಹೊರಗುಳಿಯುವುದು ಅನಿವಾರ್ಯವಾಗಿರಬಹುದು ಎಂದು ಪ್ರಥಮ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು: ಕನ್ನಡ ಬಿಗ್ ಬಾಸ್ ಮನೆಯಿಂದ ಹೊರ ಬಂದು ಪ್ರಥಮಾ ಪ್ರಸಾದ್ ಸಹ ಸ್ಪರ್ಧಿ ಓಂ ಪ್ರಕಾಶ್ ರಾವ್ ಅನಾರೋಗ್ಯದ ಕಾರಣ ಬಿಚ್ಚಿಟ್ಟಿದ್ದಾರೆ.
ಖಾಸಗಿ ಚಾನೆಲ್ ವೊಂದರಲ್ಲಿ ಮಾತನಾಡಿರುವ ಅವರು, ಓಂ ಪ್ರಕಾಶ್ ರಾವ್ ದಿಢೀರ್ ಮನೆಯಿಂದ ಹೊರಬರಲು ಕಾರಣ ಏನಿರಬಹುದು ಎಂಬುದರ ಬಗ್ಗೆ ಅನಿಸಿಕೆ ಹಂಚಿಕೊಂಡಿದ್ದಾರೆ. ಓಂ ಪ್ರಕಾಶ್ ರಾವ್ ಅವರಿಗೆ ಮೊದಲೇ ಕಾಲಿಗೆ ಗಾಯವಾಗಿತ್ತು. ಬಳಿಕ ಫ್ಲೈಟ್‌ನಲ್ಲಿ ಕೂತೇ ಇರುವುದು, ಖಾರ ತಿನ್ನುವ ಟಾಸ್ಕ್‌ನಲ್ಲಿ ಭಾಗವಹಿಸಿದ್ದು, ವಿಶ್ರಾಂತಿ ಇಲ್ಲದೆ ಟಾಸ್ಕ್‌ಗಳಲ್ಲಿ ತೊಡಗಿಸಿಕೊಂಡಿದ್ದು ಹಾಗೂ ಸರಿಯಾಗಿ ಮಲಗಲು ಆಗದ ಜಾಗದಲ್ಲೂ ಅಡ್ಜಸ್ಟ್ ಮಾಡಿಕೊಂಡು ಹೋಗಬೇಕಾಗಿತ್ತು.
ಈ ಕಾರಣಕ್ಕೆ ಅವರ ಆರೋಗ್ಯದಲ್ಲಿ ಏರುಪೇರಾಗಿರಬಹುದು ಎಂದು ಭಾವಿಸುತ್ತೇನೆ ಎಂದು ಪ್ರಥಮ ಪ್ರಸಾದ್ ಹೇಳಿದ್ದಾರೆ. ಹೀಗಾಗಿ ಅವರಿಗೆ ಶೋದಿಂದ ಹೊರಗುಳಿಯುವುದು ಅನಿವಾರ್ಯವಾಗಿರಬಹುದು ಎಂದು ಪ್ರಥಮ ಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.
ಸದ್ಯ ಓಂ ಪ್ರಕಾಶ್ ರಾವ್ ಬಾಣಸವಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಗ್‌ಬಾಸ್ ಮನೆಯಿಂದ ನೇರವಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



