ಅನಂತ್ ನಾಗ್ಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ; ಸ್ಟ್ಯಾಂಡಿಂಗ್ ಒವೇಶನ್; ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ! Video
ಇಂದು ಗುಜರಾತ್‌ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳು, ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು.

ಏಕ್ತಾ ನಗರ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಂಗಳವಾರ ಕನ್ನಡದ ಖ್ಯಾತ ನಟ ಅನಂತ್ ನಾಗ್ ಅವರಿಗೆ ಭಾರತೀಯ ಚಲನಚಿತ್ರ ರಂಗದ ಅತ್ಯುನ್ನತ ಗೌರವವಾದ 'ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ'ಯನ್ನು ನೀಡಿ ಗೌರವಿಸಿದರು. ಇದಕ್ಕು ಮುನ್ನ ಪ್ರಶಸ್ತಿ ಸಮಾರಂಭಕ್ಕೆ ಆಗಮಿಸಿದ ಅನಂತ್ ನಾಗ್ ಅವರಿಗೆ ಸ್ಟ್ಯಾಂಡಿಂಗ್ ಒವೇಶನ್ ನೀಡಲಾಯಿತು.
ಇಂದು ಗುಜರಾತ್‌ನ ನರ್ಮದಾ ಜಿಲ್ಲೆಯ ಏಕ್ತಾ ನಗರದಲ್ಲಿ ನಡೆದ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿಗಳು, ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರದಾನ ಮಾಡಿದರು. ಐದು ದಶಕಗಳಿಗೂ ಹೆಚ್ಚು ಕಾಲ ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿ ನೀಡಲಾಗಿದೆ.
ಏಕ್ತಾ ನಗರದಲ್ಲಿರುವ 'ಸ್ಟ್ಯಾಚ್ಯೂ ಆಫ್ ಯೂನಿಟಿ'ಯಲ್ಲಿ ನಡೆಯುತ್ತಿರುವ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, 2024ನೇ ಸಾಲಿನ ಸಿನಿಮಾ ಸಾಧಕರಿಗೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದರು. ವಿವಿಧ ವಿಭಾಗಗಳಲ್ಲಿ ಒಟ್ಟು 92 ಮಂದಿ ಪ್ರಶಸ್ತಿಗಳನ್ನು ಸ್ವೀಕರಿಸಿದ್ದಾರೆ.
ದೇಶದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರಾದ ಅನಂತ್ ನಾಗ್, ಐದು ದಶಕಗಳ ಸುದೀರ್ಘ ಹಾಗೂ ಗಮನಾರ್ಹ ವೃತ್ತಿಜೀವನದಲ್ಲಿ 300ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದು, ಕನ್ನಡ ಹಾಗೂ ಭಾರತೀಯ ಚಲನಚಿತ್ರ ರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ.
ಅನಂತ್ ನಾಗ್ ಅವರು ಜನಪ್ರಿಯ ಟೆಲಿವಿಷನ್ ಸರಣಿ 'ಮಾಲ್ಗುಡಿ ಡೇಸ್'ನಲ್ಲಿನ ತಮ್ಮ ಅಭಿನಯಕ್ಕೂ ಹೆಸರುವಾಸಿಯಾಗಿದ್ದಾರೆ. ಈ ಜನಪ್ರಿಯ ನಟನಿಗೆ 2025ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು.
ರಕ್ಷಿತ್ ಶೆಟ್ಟಿ ನಿರ್ಮಾಣದ 'ಮಿಥ್ಯ'ಗೆ 3 ರಾಷ್ಟ್ರ ಪ್ರಶಸ್ತಿ!
ಇನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ಕನ್ನಡದ 'ಮಿಥ್ಯ' 3 ಪ್ರಶಸ್ತಿಗಳನ್ನು, ತುಳುವಿನ 'ಇಂಬು' 1 ಪ್ರಶಸ್ತಿಯನ್ನು ಪಡೆದುಕೊಂಡಿದ್ದು, ಇಂದು ಚಿತ್ರತಂಡದವರು ರಾಷ್ಟ್ರಪತಿಗಳಿಂದ ಪ್ರಶಸ್ತಿಯನ್ನು ಸ್ವೀಕರಿಸಿದರು.
ಕನ್ನಡ ಚಿತ್ರರಂಗದ ಅತ್ಯಂತ ಜನಪ್ರಿಯ ನಟ ರಕ್ಷಿತ್ ಶೆಟ್ಟಿ ಮಾಲೀಕತ್ವದ ಪರಂವಃ ಸ್ಟುಡಿಯೋಸ್ ಮತ್ತು ಪ್ರಸಿದ್ಧ ಕೆಆರ್ಜಿ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಾಣ ಮಾಡಿರುವ ಮಿಥ್ಯ ಸಿನಿಮಾ 3 ಪ್ರಶಸ್ತಿಗೆ ಪಾತ್ರವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



