ಸಿನಿಮಾ ಸುದ್ದಿ

ಬೆಳ್ಳಿತೆರೆಗೆ ಕಾಲಿಟ್ಟ ಮಾಜಿ ಸಿಎಂ: ನಿರ್ದೇಶಕ ರಾಜೇಶ್ ಸಿನಿಮಾದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಟನೆ; ವರ್ಲ್ಡ್ ರೆಕಾರ್ಡ್ ಮಾಡಲು 'ಟಗರು' ರೆಡಿ!

ರಿಯಲ್ ಲೈಫ್‌ನಲ್ಲಿ ಕರ್ನಾಟಕದ ಅತ್ಯಂತ ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ನಿರ್ಮಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈಗ ರೀಲ್ ಲೈಫ್‌ನಲ್ಲೂ ಮುಖ್ಯಮಂತ್ರಿಯ ಪಾತ್ರದಲ್ಲೇ ಕಾಣಿಸಿಕೊಳ್ಳುತ್ತಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೆಳ್ಳಿತೆರೆಗೆ ಕಾಲಿಟ್ಟ ಮಾಜಿ ಸಿಎಂ: ನಿರ್ದೇಶಕ ರಾಜೇಶ್ ಸಿನಿಮಾದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಟನೆ; ವರ್ಲ್ಡ್ ರೆಕಾರ್ಡ್ ಮಾಡಲು 'ಟಗರು' ರೆಡಿ!
ನಿರ್ದೇಶಕ ರಾಜೇಶ್ ಸಿನಿಮಾದಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ನಟನೆ — Online Desk
Published On :

ಬೆಂಗಳೂರು: ಕರ್ನಾಟಕದ ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿಗೆ ಪೂರ್ಣ ಪ್ರಮಾಣದ ಸಿನಿಮಾವೊಂದರಲ್ಲಿ ನಟಿಸುವ ಮೂಲಕ ಬೆಳ್ಳಿತೆರೆಗೆ ಕಾಲಿಡುತ್ತಿದ್ದಾರೆ. ಅದರಲ್ಲೂ, ರಿಯಲ್ ಲೈಫ್‌ನಲ್ಲಿ ಕರ್ನಾಟಕದ ಇತಿಹಾಸದಲ್ಲಿಯೇ ಅತ್ಯಂತ ದೀರ್ಘಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ದಾಖಲೆ ನಿರ್ಮಿಸಿರುವ ಟಗರು, ಈಗ ರೀಲ್ ಲೈಫ್‌ನಲ್ಲೂ ಮುಖ್ಯಮಂತ್ರಿಯ ಪಾತ್ರದಲ್ಲೇ ಕಾಣಿಸಿಕೊಳ್ಳುತ್ತಿರುವುದು ಅವರ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಮೂಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ವರ್ಲ್ಡ್ ರೆಕಾರ್ಡ್ ಮಾಡಲು ಟಗರು ರೆಡಿ

ನಟ ಹಾಗೂ ನಿರ್ಮಾಪಕ ರಾಜೇಶ್ ಗೌಡ ಅವರ ಆರ್.ಎ. ಫಿಲ್ಮ್ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ಮೂಡಿಬರಲಿರುವ ಹೊಸ ಸಿನಿಮಾಗೆ 'ಮುಖ್ಯಮಂತ್ರಿ' ಎಂಬ ಟೈಟಲ್ ಇಡುವ ಸಾಧ್ಯತೆಯಿದ್ದು, ಈಗಾಗಲೇ ನಿರ್ದೇಶಕರು ಹೇಳಿದ ಕಥೆಯನ್ನು ಕೇಳಿ ಮೆಚ್ಚಿಕೊಂಡಿರುವ ಸಿದ್ದರಾಮಯ್ಯ ಅವರು, ಸಿನಿಮಾದಲ್ಲಿ ಪ್ರಮುಖವಾಗಿ ಬರುವ ಮುಖ್ಯಮಂತ್ರಿಯ ಪಾತ್ರದಲ್ಲಿಯೇ ನಟಿಸಲು ಒಪ್ಪಿಗೆ ಸೂಚಿಸಿದ್ದಾರೆ. ಅದರಲ್ಲೂ, ಈ ಸಿನಿಮಾದ ಚಿತ್ರಕಥೆ ಬರೆಯುವುದರಿಂದ ಹಿಡಿದು, ಚಿತ್ರೀಕರಣ, ಪೋಸ್ಟ್ ಪ್ರೊಡಕ್ಷನ್, ಸೆನ್ಸಾರ್ ಪ್ರಕ್ರಿಯೆ ಹಾಗೂ ಚಿತ್ರಮಂದಿರದಲ್ಲಿ ಪ್ರದರ್ಶನ ಮಾಡುವವರೆಗಿನ ಎಲ್ಲಾ ಹಂತಗಳನ್ನು ಕೇವಲ 48 ಗಂಟೆಗಳಲ್ಲಿ ಮುಗಿಸಿ ವಿಶ್ವ ದಾಖಲೆ ಬರೆಯುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಚಿತ್ರತಂಡ ಹೊಂದಿದೆ.

ನಟನೆಯೊಂದಿಗೆ ಮೊದಲ ಪ್ರಯತ್ನವೇ?

ಇದು ಕನ್ನಡ ಚಿತ್ರರಂಗಕ್ಕೆ ಸಿದ್ದರಾಮಯ್ಯ ಅವರ ಮೊದಲ ಎಂಟ್ರಿಯಾದರೂ, ಅವರಿಗೆ ನಟನೆ ಹೊಸದೇನಲ್ಲ. ಯಾಕಂದ್ರೆ, ತಮ್ಮ ವಿದ್ಯಾರ್ಥಿ ಜೀವನದಲ್ಲಿ ಅವರು ನಾಟಕಗಳಲ್ಲಿ ಅಭಿನಯಿಸಿದ್ದರು. ಅಲ್ಲದೆ, 2017 ರಲ್ಲಿ ಕವಿತಾ ಲಂಕೇಶ್ ನಿರ್ದೇಶನದ ಸಮ್ಮರ್ ಹಾಲಿಡೇಸ್ ಎಂಬ ಮಕ್ಕಳ ಚಿತ್ರದಲ್ಲೂ ಸಣ್ಣದೊಂದು ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಇದರ ಜೊತೆಗೆ, ಸಿದ್ದರಾಮಯ್ಯ ಅವರ ಜೀವನಗಾಥೆಯನ್ನಾಧರಿಸಿದ ಲೀಡರ್ ರಾಮಯ್ಯ ಎಂಬ ಬಯೋಪಿಕ್ ಚಿತ್ರದ ಕೆಲಸಗಳೂ ಪ್ರತ್ಯೇಕವಾಗಿ ನಡೆಯುತ್ತಿದ್ದು, ಅದರಲ್ಲಿ ತಮಿಳು ಚಿತ್ರರಂಗದ ಖ್ಯಾತ ನಟ ವಿಜಯ ಸೇತುಪತಿ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತಿದೆ. ಏತನ್ಮಧ್ಯೆ, ಈ ಹಿಂದೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಕೂಡ ಸಿನಿಮಾವೊಂದರಲ್ಲಿ ಮುಖ್ಯಮಂತ್ರಿಯಾಗಿ ನಟಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.