ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ಸರಣಿ ಶ್ರೇಷ್ಠ
ಸರಣಿಯುದ್ದಕ್ಕೂ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನದ ಮೂಲಕ ಭಾರತ ತಂಡವನ್ನು ಸೆಮಿಫೈನಲ್ ವರೆಗೂ ಮುನ್ನಡೆಸಿದ್ದ ವಿರಾಟ್..

ಕೋಲ್ಕತಾ: ಸರಣಿಯುದ್ದಕ್ಕೂ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನದ ಮೂಲಕ ಭಾರತ ತಂಡವನ್ನು ಸೆಮಿಫೈನಲ್ ವರೆಗೂ ಮುನ್ನಡೆಸಿದ್ದ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ ನ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಟೂರ್ನಿಯಲ್ಲಿ ಒಟ್ಟು 5 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ದಾಖಲೆಯ 136.50 ಸರಾಸರಿಯಲ್ಲಿ ಒಟ್ಟು 273 ರನ್ ಸಿಡಿಸಿದ್ದಾರೆ. ಅಲ್ಲದೆ ಬೌಲಿಂಗ್ ವಿಕೆಟ್ ಕೂಡ ಕಬಳಿಸಿರುವ ಕೊಹ್ಲಿ ಮೂರು ಪಂದ್ಯಗಳಲ್ಲಿ 50ಕ್ಕೂ ಹೆಚ್ಚು ರನ್ ದಾಖಲಿಸಿದ್ದಾರೆ. ಈ ಪೈಕಿ 29 ಬೌಂಡರಿಗಳಿದ್ದು, ಐದು ಭರ್ಜರಿ ಸಿಕ್ಸರ್ ಗಳು ಸೇರಿವೆ. ಟೂರ್ನಿಯ ಅತ್ಯಧಿಕ ರನ್ ಗಳಿಕೆಯ ಆಟಗಾರರ ಪಟ್ಟಿಯಲ್ಲಿ ಕೊಹ್ಲಿ 2ನೇ ಸ್ಥಾನದಲ್ಲಿದ್ದು, ಮೊದಲ ಸ್ಥಾನದಲ್ಲಿ 295 ರನ್ ಗಳಿಸಿರುವ ತಮೀಮ್ ಇಕ್ಬಾಲ್ ಇದ್ದಾರೆ.
ಆದರೆ ತಮೀಮ್ ಈ ರನ್ ಗಳನ್ನು ಸಿಡಿಸಿರುವ ಅರ್ಹತಾ ಸುತ್ತಿನ ಪಂದ್ಯಗಳಲ್ಲಾದ್ದರಿಂದ ಭಾರತದ ವಿರಾಟ್ ಕೊಹ್ಲಿ ಅವರಿಗೆ ಸರಣಿ ಶ್ರೇಷ್ಠ ಪ್ರಶಸ್ತಿ ಘೋಷಣೆ ಮಾಡಲಾಯಿತು. ನಿನ್ನೆ ಕೋಲ್ಕತಾ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಫೈನಲ್ ಪಂದ್ಯದ ಬಳಿಕ ಪ್ರಶಸ್ತಿ ವಿತರಣೆ ವೇಳೆ ಕೊಹ್ಲಿ ಸರಣಿ ಶ್ರೇಷ್ಠ ಎಂದು ಘೋಷಿಸಲಾಯಿತು. ಆದರೆ ಕೊಹ್ಲಿ ದೆಹಲಿಯಲ್ಲಿದ್ದು, ಅವರ ಬದಲಿಗೆ ಪಶ್ಚಿಮ ಬಂಗಾಳ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ ಮತ್ತು ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರು ಪ್ರಶಸ್ತಿ ಸ್ವೀಕರಿಸಿದರು.
2014ರಲ್ಲಿ ಬಾಂಗ್ಲಾದೇಶದಲ್ಲಿ ನಡೆದ ಸರಣಿಯಲ್ಲಿಯೂ 319 ರನ್ ಗಳಿಸಿ ತಂಡವನ್ನು ಫೈನಲ್ ಪ್ರವೇಶಿಸುವಂತೆ ಮಾಡಿದ್ದ ಕೊಹ್ಲಿ ಆ ಸರಣಿಯಲ್ಲಿಯೂ ಸರಣಿಶ್ರೇಷ್ಠರಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


