ಚಾಂಪಿಯನ್ ಪಟ್ಟ ಗೆದ್ದ ಕೆರಿಬಿಯನ್ನರಿಗೆ ಅಭಿನಂದನೆಗಳ ಮಹಾಪೂರ
ಕೊನೆಯ ಓವರ್ ನಲ್ಲಿ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ ಫೈನಲ್ ಗೆದ್ದು ಚಾಂಪಿಯನ್ ಪಟ್ಟ ಪಡೆದುಕೊಂಡು ವೆಸ್ಟ್ ಇಂಡೀಸ್ ತಂಡಕ್ಕೆ ವಿಶ್ವಾದ್ಯಂತ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದ್ದು..

ಕೋಲ್ಕತಾ: ಕೊನೆಯ ಓವರ್ ನಲ್ಲಿ ನಾಲ್ಕು ಸಿಕ್ಸರ್ ಸಿಡಿಸುವ ಮೂಲಕ ಫೈನಲ್ ಗೆದ್ದು ಚಾಂಪಿಯನ್ ಪಟ್ಟ ಪಡೆದುಕೊಂಡು ವೆಸ್ಟ್ ಇಂಡೀಸ್ ತಂಡಕ್ಕೆ ವಿಶ್ವಾದ್ಯಂತ ಅಭಿನಂದನೆಗಳ ಮಹಾಪೂರ ಹರಿದುಬರುತ್ತಿದ್ದು, ಕ್ರಿಕೆಟ್ ಜಗತ್ತಿನ ಖ್ಯಾತನಾಮರು ಶುಭಾಶಯ ತಿಳಿಸಿದ್ದಾರೆ.
ಈ ಟೂರ್ನಿಯಲ್ಲಿ ಎರಡು ಪ್ರಶಸ್ತಿ ಗೆದ್ದ ಏಕೈಕ ತಂಡ ಎನ್ನುವ ಐತಿಹಾಸಿಕ ಸಾಧನೆ ಮಾಡಿರುವ ವಿಂಡೀಸ್ ತಂಡಕ್ಕೆ ಪ್ರಶಂಸೆಗಳ ಮಹಾಪೂರವೇ ಹರಿದು ಬರುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮಾಜಿ ಮತ್ತು ಹಾಲಿ ಕ್ರಿಕೆಟಿಗರು ಅಭಿನಂದಿಸಿದ್ದಾರೆ. ‘ಇದೇ ವರ್ಷದ ಜನವರಿಯಲ್ಲಿ 19 ವರ್ಷದ ಒಳಗಿವನರ ಟೂರ್ನಿಯಲ್ಲಿ ನಮ್ಮ ದೇಶವೇ ಪ್ರಶಸ್ತಿ ಗೆದ್ದಿತು. ಟ್ವೆಂಟಿ–20 ವಿಶ್ವ ಟೂರ್ನಿಯಲ್ಲಿ ಪುರುಷ ಮತ್ತು ಮಹಿಳಾ ತಂಡಗಳು ಪ್ರಶಸ್ತಿ ಗೆದ್ದ ವಿಷಯ ಪ್ರತಿಯೊಬ್ಬ ಕ್ರಿಕೆಟ್ ಪ್ರೇಮಿಗೂ ಹೆಮ್ಮೆ ಮೂಡಿಸುತ್ತದೆ. ಕೋಲ್ಕತ್ತದಲ್ಲಿ ಅಭಿಮಾನಿಗಳು ನೀಡಿದ ಬೆಂಬಲವನ್ನು ಎಂದಿಗೂ ಮರೆಯಲಾಗದು’ ಎಂದು ಕೆರಿಬಿಯನ್ ಕ್ರಿಕೆಟ್ ಲೀಗ್‌ನ ಸಿಇಒ ಡಾಮಿನ್ ಡೊನಾಹೊಯೆ ಶ್ಲಾಘಿಸಿದ್ದಾರೆ.
ಉಳಿದಂತೆ ಕ್ರಿಕೆಟ್ ಜಗತ್ತಿನ ಖ್ಯಾತನಾಮರು ನೀಡಿರುವ ವಿವಿಧ ಪ್ರತಿಕ್ರಿಯೆಗಳು ಈ ರೀತಿ ಇವೆ.
Congratulations @westindies Team. Unbelievable Victory. Well played @englandcricket Team
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


