ಕ್ರಿಕೆಟ್

ರಾಜ್ಯ ಸಂಸ್ಥೆಗಳಿಗೆ ಹಣ ಹಂಚುವಲ್ಲಿ ತಾರತಮ್ಯ: ಬಿಸಿಸಿಐ ವಿರುದ್ಧ 'ಸುಪ್ರೀಂ' ಗರಂ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ರಾಜ್ಯ ಸಂಸ್ಥೆಗಳಿಗೆ ಹಣ ಹಂಚುವಿಕೆಯಲ್ಲಿ ತಾರತಮ್ಯ ಮಾಡುತ್ತಿದ್ದು, ಕ್ರಿಕೆಟ್ ಅಭಿವೃದ್ಧಿಗಾಗಿ ಯಾವ ಕೆಲಸವನ್ನೂ...

ರಾಜ್ಯ ಸಂಸ್ಥೆಗಳಿಗೆ ಹಣ ಹಂಚುವಲ್ಲಿ ತಾರತಮ್ಯ: ಬಿಸಿಸಿಐ ವಿರುದ್ಧ 'ಸುಪ್ರೀಂ' ಗರಂ
ಸುಪ್ರೀಂಕೋರ್ಟ್
Published On :
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ರಾಜ್ಯ ಸಂಸ್ಥೆಗಳಿಗೆ ಹಣ ಹಂಚುವಿಕೆಯಲ್ಲಿ ತಾರತಮ್ಯ ಮಾಡುತ್ತಿದ್ದು, ಕ್ರಿಕೆಟ್ ಅಭಿವೃದ್ಧಿಗಾಗಿ ಯಾವ ಕೆಲಸವನ್ನೂ ಮಾಡುತ್ತಿಲ್ಲವೆಂದು ಬಿಸಿಸಿಐ ವಿರುದ್ಧ ಸುಪ್ರೀಂಕೋರ್ಟ್ ಗರಂ ಆಗಿದೆ.  
ನ್ಯಾಯಮೂರ್ತಿ ಆರ್​ಎಂ ಲೋಧಾ ಸಮಿತಿ ವರದಿ ಜಾರಿ ಕುರಿತಂತೆ ಹಾಗೂ ರಾಜ್ಯ ಸಂಸ್ಥೆಗಳಿಗೆ ಹಣ ಹಂಚುವಿಕೆಯಲ್ಲಿ ತಾರತಮ್ಯ ಮಾಡುತ್ತಿರುವುದನ್ನು ಮುಖ್ಯ ನ್ಯಾಯಮೂರ್ತಿ ಟಿಎಸ್ ಠಾಕೂರ್ ನೇತೃತ್ವದ ನ್ಯಾಯಪೀಠ ಟೀಕಿಸಿದ್ದು, ಬಿಸಿಸಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ.
ಪರಸ್ಪರ ಪ್ರಯೋಜನಗಳನ್ನು ಪಡೆದುಕೊಳ್ಳುವ ಸಂಸ್ಥೆಯಾಗಿ ಬಿಸಿಸಿಐ ಮಾರ್ಪಟ್ಟಿದೆ. ಕೋಟ್ಯಂತರ ರೂಪಾಯಿಗಳನ್ನು ಹೇಗೆ ಖರ್ಚು ಮಾಡಲಾಗುತ್ತಿದೆ ಎಂಬ ವಿವರಗಳನ್ನು ಪಡೆದುಕೊಳ್ಳದೆ ತನ್ನ ಸದಸ್ಯರನ್ನು ಕಾರ್ಯತಃ ಭ್ರಷ್ಟರನ್ನಾಗಿ ಮಾಡುತ್ತಿದೆ ಎಂದು ಕಿಡಿಕಾರಿದೆ.
ಲೋಧಾ ವರದಿಯ ಕೆಲ ಶಿಫಾರಸುಗಳನ್ನು ಈಗಾಗಲೆ ಜಾರಿಗೊಳಿಸಲಾಗಿದೆ. ಓಂಬುಡ್ಸ್​ಮನ್ ನೇಮಿಸಿಕೊಳ್ಳಲಾಗಿದೆ. ಸ್ವಹಿತಾಸಕ್ತಿ ಸಂಘರ್ಷ ತಡೆಯುವ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಮುಖ್ಯ ವಿತ್ತ ಅಧಿಕಾರಿ ಅಭ್ಯರ್ಥಿಗಾಗಿ ಜಾಹೀರಾತು ಪ್ರಕಟಿಸಲಾಗಿದೆ ಎಂದು ಬಿಸಿಸಿಐ ಪರ ವಕೀಲ ಕೆಕೆ ವೇಣುಗೋಪಾಲ್ ಹೇಳಿಕೆ ಬೆನ್ನಲ್ಲೇ ನ್ಯಾಯಾಲಯ ಬಿಸಿಸಿಐ ಅನ್ನು ತರಾಟೆಗೆ ತೆಗೆದುಕೊಂಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.