ಸಾರ್ವಜನಿಕ ಹಿತಾಸಕ್ತಿ ಅಲ್ಲ, ವೈಯುಕ್ತಿಕ ಹಿತಾಸಕ್ತಿ: ಪಿಐಎಲ್ ಗೆ "ಹೈ" ಕಿಡಿ
ಐಪಿಎಲ್ ಪಂದ್ಯಾವಳಿಗಾಗಿ ಕರ್ನಾಟಕ ಕ್ರಿಕೆಟ್ ಸಂಸ್ಥೆ ನೀರು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ಇತ್ಯರ್ಥಪಡಿಸಲಾಗಿದೆ.

ಬೆಂಗಳೂರು: ಐಪಿಎಲ್ ಪಂದ್ಯಾವಳಿಗಾಗಿ ಕರ್ನಾಟಕ ಕ್ರಿಕೆಟ್ ಸಂಸ್ಥೆ ನೀರು ದುರ್ಬಳಕೆ ಮಾಡುತ್ತಿದೆ ಎಂದು ಆರೋಪಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ಇತ್ಯರ್ಥಪಡಿಸಲಾಗಿದೆ.
ಅರ್ಚಕ ಶ್ರೀನಿವಾಸ ಶರ್ಮಾ ಎಂಬುವವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಹೈಕೋರ್ಟ್ ನ್ಯಾಯಮೂರ್ತಿ ಮಳೀಮಠ್ ಅವರು, ಇದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಅಲ್ಲ. ವೈಯುಕ್ತಿಕ ಹಿತಾಸಕ್ತಿ ಅರ್ಜಿ ಎಂದು ಕಿಡಿಕಾರಿದರು. "ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾತ್ರವಲ್ಲದೇ ಗಾಲ್ಫ್ ಕೋರ್ಟ್ ಮತ್ತು ಈಜುಕೊಳದಲ್ಲಿಯೂ ನೀರು ಬಳಕೆ ಮಾಡಲಾಗುತ್ತದೆ. ನಿಮ್ಮ ಕಾಳಜಿ ನೀರಿನ ದುರ್ಬಳಕೆಯದ್ದೇ ಆಗಿದ್ದರೆ ಅವುಗಳ ಹೆಸರೇಕೆ ಅರ್ಜಿಯಲ್ಲಿಲ್ಲ. ನಿಮ್ಮ ಪ್ರಕಾರ ಸ್ನಾನ ಮಾಡುವುದು ಕೂಡ ನೀರಿನ ದುರ್ಬಳಕೆಯೇ? ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದರು.
ಇದಕ್ಕೂ ಮೊದಲ ಪಿಐಎಲ್ ಸಂಬಂಧ ಹೈಕೋರ್ಟ್ ಗೆ ಮಾಹಿತಿ ನೀಡಿದ ಕೆಎಸ್ ಸಿಎ ಅಧಿಕಾರಿಗಳು ಅರ್ಜಿದಾರರು ಸಲ್ಲಿಸಿರುವ ಅರ್ಜಿಯಲ್ಲಿನ ಆರೋಪಗಳಲ್ಲಿ ಯಾವುದೇ ಹುರುಳಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ರೀತಿಯ ನೀರಿನ ದುರ್ಬಳಕೆಯಾಗುತ್ತಿಲ್ಲ. ಸಂಸ್ಕರಿತ ನೀರನ್ನು ಮೈದಾನದ ನಿರ್ವಹಣೆಗೆ ಬಳಕೆ ಮಾಡಲಾಗುತ್ತಿದ್ದು, ಕುಡಿಯುವ ನೀರನ್ನು ಅಲ್ಲ ಎಂದು ಹೇಳಿದರು.
ಅಂತೆಯೇ ಮೈದಾನದ ನಿರ್ವಹಣೆಗಾಗಿ 18 ಸಾವಿರ ಲೀಟರ್ ನೀರು ಸಾಕು. ಟೂರ್ನಿಗಾಗಿ ಐದು ಲಕ್ಷ ಲೀಟರ್ ನೀರನ್ನು ಸಂಸ್ಕರಣೆ ಮಾಡಲು ಖಾಸಗಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ. ಇನ್ನು ಕ್ರೀಡಾಂಗಣದ ನಿರ್ವಹಣೆಗಾಗಿಯೇ ಪ್ರತ್ಯೇಕ ನೀರು ಸಂಸ್ಕರಣ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗಿದೆ. ಆ ಘಟಕ ಇನ್ನೊಂದು ವಾರದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಕೆಎಸ್ ಸಿಎ ಅಧಿಕಾರಿಗಳು ಮಾಹಿತಿ ನೀಡಿದರು.
ಕೆಎಸ್ ಸಿಎ ನೀಡಿದ ಉತ್ತರಕ್ಕೆ ಸಂತೃಪ್ತರಾದ ನ್ಯಾಯಮೂರ್ತಿ ಮಳೀಮಠ್ ಅವರು, ಶ್ರೀನಿವಾಸ ಶರ್ಮಾ ಅವರು ಸಲ್ಲಿಸಿದ್ದ ಅರ್ಜಿಯನ್ನು ಹಿತಾಸಕ್ತಿ ಮೊಕದ್ದಮೆ ಎಂದು ಪರಿಗಣಿಸಿ ಇತ್ಯರ್ಥಗೊಳಿಸಿದರು. ಅಂತೆಯೇ ನೀರಿನ ಬಳಕೆ ಸಂಬಂಧ ಸಭೆ ಕರೆದು ಕ್ರಮಕೈಗೊಳ್ಳುವಂತೆ ಮತ್ತು ಯಾವುದೇ ಕಾರಣಕ್ಕೂ ನೀರು ದುರ್ಬಳಕೆಯಾಗದಂತೆ ಕ್ರಮ ಕೈಗೊಳ್ಳಲು ಬೆಂಗಳೂರು ಜಲಮಂಡಳಿಗೆ ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


