ದೆಹಲಿ- ಆರ್ ಸಿಬಿ ವಿರುದ್ಧದ ಐಪಿಎಲ್ ಪಂದ್ಯ: 12 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 113 ರನ್ ಕಲೆ ಹಾಕಿದ ದೆಹಲಿ
ಬೆಂಗಳೂರು ಮತ್ತು ದೆಹಲಿ ಡೇರ್ ಡೆವಿಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 192 ರನ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡ 12 ಓವರ್ ಗಳಲ್ಲಿ 100 ರನ್ ಗಳನ್ನು ಕಲೆ ಹಾಕಿದೆ. ಆರಂಭಿಕ ಓವರ್ ನಲ್ಲೇ ಪ್ರಥಮ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುತ್ತು.

Published On :
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಡೇರ್ ಡೆವಿಲ್ಸ್ ನಡುವಿನ ಪಂದ್ಯದಲ್ಲಿ ಆರ್ ಸಿಬಿ ನೀಡಿದ್ದ 192 ರನ್ ಗುರಿಯನ್ನು ಬೆನ್ನಟ್ಟಿದ ಡೆಲ್ಲಿ ಡೇರ್ ಡೆವಿಲ್ಸ್ ತಂಡ 11 ಓವರ್ ಗಳಲ್ಲಿ 100 ರನ್ ಗಳನ್ನು ಕಲೆ ಹಾಕಿದೆ. ಆರಂಭಿಕ ಓವರ್ ನಲ್ಲೇ ಪ್ರಥಮ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುತ್ತು.
ಸಿಕ್ಸರ್ ಬೀಸಲು ಯತ್ನಿಸಿದ ಶ್ರೇಯಸ್ ಅಯ್ಯರ್ ಡೇವಿಡ್ ವೈಸೆಗೆ ಕ್ಯಾಚ್ ನೀಡಿ ಪೆವಿಲಿಯನ್ ನತ್ತ ನಡೆದರು. ನಂತರ 5 ಓವರ್ ಗಳ ವರೆಗೆ ಸಂಜು ಸ್ಯಾಮ್ಸನ್- ಕ್ವಿಂಟನ್ ಡಿ ಕಾಕ್ ಜೊತೆಯಾಟ ಆಡಿದರಾದರೂ 5 ನೇ ಓವರ್ ನ 4 ನೇ ಎಸೆತದಲ್ಲಿ ದೊಡ್ಡ ಹೊಡೆತಕ್ಕೆ ಯತ್ನಿಸಿ ಸ್ಯಾಮ್ಸನ್ ಆರ್ ಸಿಬಿ ತಂಡದ ಚಾಹಲ್ ಗೆ ಕ್ಯಾಚಿತ್ತು ಹೊರನಡೆದರು ಪ್ರಸ್ತುತ ಕ್ರೀಸ್ ನಲ್ಲಿರುವ ಕ್ವಿಂಟನ್ ಡಿ ಕಾಕ್- ಕರುಣ್ ನಾಯರ್ 11 ಓವರ್ ಗಳಿಗೆ 100 ರನ್ ಪೇರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


