ಪಾಕ್ ಕ್ರಿಕೆಟ್ ತಂಡದ ಪ್ರಧಾನ ಆಯ್ಕೆಗಾರರಾಗಿ ಹಕ್ ನೇಮಕ
ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇನ್ಜಮಾಮ್ ಉಲ್ ಹಕ್ ಪಾಕಿಸ್ತಾನ ಕ್ರಿಕೆಟ್ ತಂಡದ ಪ್ರಧಾನ ಆಯ್ಕೆಗಾರರಾಗಿ ಹಕ್ ನೇಮಕ...

Published On :
ಇಸ್ಲಾಮಾಬಾದ್: ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಇನ್ಜಮಾಮ್ ಉಲ್ ಹಕ್ ಪಾಕಿಸ್ತಾನ ಕ್ರಿಕೆಟ್ ತಂಡದ ಪ್ರಧಾನ ಆಯ್ಕೆಗಾರರಾಗಿ ಹಕ್ ನೇಮಕವಾಗಿದ್ದಾರೆ. ಈ ಹಿನ್ನಲೆಯಲ್ಲಿ ಹಕ್ ಅಫ್ಘಾನಿಸ್ತಾನದಗ ಕ್ರಿಕೆಟ್ ಕೋಚ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಅಫ್ಘಾನಿಸ್ತಾನ್ ಕ್ರಿಕೆಟ್ ಮಂಡಳಿಯೊಂದಿಗೆ ಒಪ್ಪಂದ ಮಾಡಿಕೊಂಡಿದ್ದ ಹಕ್ ಆ ವರ್ಷಾಂತ್ಯವರೆಗೆ ಅಫ್ಘಾನ್ ಕೋಚ್ ಆಗಿ ಕಾರ್ಯ ನಿರ್ವಹಿಸಬೇಕಿತ್ತು.
ಪಾಕಿಸ್ತಾನದ ಖ್ಯಾತ ಬ್ಯಾಟ್ಸ್‌ಮೆನ್ ಆಗಿದ್ದ ಹಕ್ 378 ಏಕ ದಿನ ಪಂದ್ಯಗಳನ್ನಾಡಿದ್ದಾರೆ. 2012ರಲ್ಲಿ ಕೆಲ ಕಾಲ ಪಾಕಿಸ್ತಾನ ಟೀಂನ ಬ್ಯಾಟಿಂಗ್ ಸಲಹೆಗಾರರಾಗಿಯೂ ಇವರು ಕಾರ್ಯ ನಿರ್ವಹಿಸಿದ್ದರು.
ವಾರಗಳ ಹಿಂದೆಯಷ್ಟೇ ಮುಕ್ತಾಯಗೊಂಡ ಟಿ20 ವಿಶ್ವಕಪ್ ಪಂದ್ಯಗಳಲ್ಲಿ ಅಫ್ಘಾನ್ ಟೀಂನ್ನು ಟಾಪ್ 10 ಸ್ಥಾನಕ್ಕೇರಿಸಿದ ಸಾಧನೆ ಹಕ್ ಅವರದ್ದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Cricketಕ್ರಿಕೆಟ್Pakistanಪಾಕಿಸ್ತಾನAfghanistanಅಫ್ಘಾನಿಸ್ತಾನInzamam-ul-Haqchief selectorಇನ್ಜಮಾಮ್ ಉಲ್ ಹಕ್ಪ್ರಧಾನ ಆಯ್ಕೆಗಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


