ಕೇನ್ ವಿಲಿಯಮ್ಸನ್ ನ್ಯೂಜಿಲೆಂಡ್ ತಂಡದ ನೂತನ ನಾಯಕ
ಅಂತಾರಾಷ್ಟ್ರೀಯ ಕ್ರಿಕೆಟಿಗೆ ಬ್ರೆಂಡನ್ ಮೆಕ್ಕಲಮ್ ವಿದಾಯ ಘೋಷಿಸಿದ ಬಳಿಕ ತೆರವುಗೊಂಡಿದ್ದ ನ್ಯೂಜಿಲೆಂಡ್ ತಂಡದ ನಾಯಕ ಸ್ಥಾನಕ್ಕೆ ಸ್ಫೋಟಕ ಬ್ಯಾಟ್ಸ್ ಮನ್ ಕೇನ್...

ವೆಲ್ಲಿಂಗ್ಟನ್: ಅಂತಾರಾಷ್ಟ್ರೀಯ ಕ್ರಿಕೆಟಿಗೆ ಬ್ರೆಂಡನ್ ಮೆಕ್ಕಲಮ್ ವಿದಾಯ ಘೋಷಿಸಿದ ಬಳಿಕ ತೆರವುಗೊಂಡಿದ್ದ ನ್ಯೂಜಿಲೆಂಡ್ ತಂಡದ ನಾಯಕ ಸ್ಥಾನಕ್ಕೆ ಸ್ಫೋಟಕ ಬ್ಯಾಟ್ಸ್ ಮನ್ ಕೇನ್ ವಿಲಿಯಮ್ಸನ್ ಆಯ್ಕೆಯಾಗಿದ್ದಾರೆ.
ಟೆಸ್ಟ್, ಏಕದಿನ ಹಾಗೂ ಟಿ20 ಎಲ್ಲಾ ಮಾದರಿ ಕ್ರಿಕೆಟ್ ಗೂ ಕೇನ್ ವಿಲಿಯಮ್ಸನ್ ನಾಯಕನಾಗಿ ಆಯ್ಕೆಗೊಂಡಿದ್ದಾರೆ. ವಿಲಿಯಮ್ಸನ್ ಭಾರತದಲ್ಲಿ ನಡೆದ ಟಿ20 ವಿಶ್ವಕಪ್ನಲ್ಲಿ ತಂಡವನ್ನು ಮುನ್ನಡೆಸಿ, ಅಜೇಯವಾಗಿ ಸೆಮಿಪೈನಲ್ವರೆಗೆ ಕೊಂಡೊಯ್ದಿದ್ದರು.
ನ್ಯೂಜಿಲೆಂಡ್ ಕ್ರಿಕೆಟ್ ತಂಡಕ್ಕೆ ತಮ್ಮನ್ನು ಆಯ್ಕೆ ಮಾಡಿರುವುದಕ್ಕೆ ನ್ಯೂಜಿಲೆಂಡ್ ಕ್ರಿಕೆಟ್ ಮಂಡಳಿಗೆ ಆಭಾರಿಯಾಗಿದ್ದೇನೆ ಎಂದು ವಿಲಿಯಮ್ಸನ್ ಹೇಳಿದ್ದಾರೆ. ಸದ್ಯ ಐಪಿಎಲ್ ನಲ್ಲಿ ವಿಲಿಯಮ್ಸನ್ ಪಾಲ್ಗೊಂಡಿದ್ದು ಸನ್ ರೈಸರ್ಸ್ ಹೈದರಾಬಾದ್ ಪರ ಆಡುತ್ತಿದ್ದಾರೆ.
ವಿಲಿಯಮ್ಸನ್ 2010ರಲ್ಲಿ ಭಾರತದ ವಿರುದ್ಧದ ಪಂದ್ಯವನ್ನು ಆಡುವ ಮೂಲಕ ಅಂತಾರಾಷ್ಟ್ರಿಯ ಕ್ರಿಕೆಟ್ಗೆ ಪದಾರ್ಪಣೆ ಮಾಡಿದ್ದರು.
ಕೇನ್ ವಿಲಿಯಮ್ಸನ್ 48 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಇನ್ನು 49.23 ಸರಸರಿಯಲ್ಲಿ ಬ್ಯಾಟ್ ಬೀಸಿದ್ದು, 13 ಶತಕ ಸಿಡಿಸಿದ್ದಾರೆ. 93 ಏಕದಿನ ಪಂದ್ಯದಲ್ಲಿ 47 ಸರಾಸರಿಯಲ್ಲಿ ಬ್ಯಾಟಿಂಗ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


