ಐಪಿಎಲ್ 2016: ಡೆಲ್ಲಿ ವಿರುದ್ಧ 3 ವಿಕೆಟ್ ನಷ್ಟಕ್ಕೆ 88 ರನ್ ಕಲೆ ಹಾಕಿರುವ ಕೆಕೆಆರ್
ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ನೀಡಿದ 187 ರನ್ ಗುರಿಯನ್ನು ಬೆನ್ನಟ್ಟಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಎರಡು ವಿಕೆಟ್ ನಷ್ಟಕ್ಕೆ 7 ಓವರ್ ಗಳಲ್ಲಿ 52 ರನ್ ಕಲೆಹಾಕಿದೆ.

ನವದೆಹಲಿ: ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ನೀಡಿದ 187 ರನ್ ಗುರಿಯನ್ನು ಬೆನ್ನಟ್ಟಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಎರಡು ವಿಕೆಟ್ ನಷ್ಟಕ್ಕೆ 7 ಓವರ್ ಗಳಲ್ಲಿ 52 ರನ್ ಕಲೆಹಾಕಿದೆ.
ಕೆಕೆಆರ್ ತಂಡದ ಪರ ಆರಂಭಿಕ ಆಟಗಾರರಾಗಿ ಕ್ರಿಸ್ ಗಿಳಿದ ಗೌತಮ್ ಗಂಭೀರ್ ಹಾಗೂ ರಾಬಿನ್ ಉತ್ತಪ್ಪ, 2 ಓವರ್ ಗಳವರೆಗೂ ಉತ್ತಮ ಆಟ ಆಡಿದರು. ಆದರೆ ಎರಡನೇ ಓವರ್ ನ 6 ನೇ ಎಸೆತದಲ್ಲಿ ಜಹೀರ್ ಖಾನ್ ಗೌತಮ್ ಗಂಭೀರ್ ಅವರ ವಿಕೆಟ್ ಪಡೆಯುವ ಮೂಲಕ ಕೆಕೆಆರ್ ತಂಡಕ್ಕೆ ಆಘಾತ ನೀಡಿದರು.
ಮೊದಲ ವಿಕೆಟ್ ಪತನದಿಂದ ಕೆಕೆ ಆರ್ ತಂಡ ಚೇತರಿಸಿಕೊಳ್ಳುವ ಮುನ್ನವೇ ಜಹೀರ್ ಜಹಾನ್ 4 ನೇ ಓವರ್ ನಲ್ಲಿ ಪಿಯೂಷ್ ಚಾವ್ಲಾ ವಿಕೆಟ್ ಪಡೆಯುವ ಮೂಲಕ ಮತ್ತಷ್ಟು ಒತ್ತಡ ಹೆಚ್ಚಿಸಿದರು. ಕ್ರಿಸ್ ನಲ್ಲಿರುವ ಸೂರ್ಯ ಕುಮಾರ್ ಯಾದವ್ ಹಾಗೂ ರಾಬಿನ್ ಉತ್ತಪ್ಪ ಉತ್ತಮ ಆಟ ಆಡುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


