2ನೇ ಟೆಸ್ಟ್: ಬೃಹತ್ ಮೊತ್ತ ಕಲೆಹಾಕಿದ ಟೀಂ ಇಂಡಿಯಾ
ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 304 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ...

ಕಿಂಗ್‌ಸ್ಟನ್(ಜಮೈಕಾ): ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 304 ರನ್ ಗಳ ಬೃಹತ್ ಮೊತ್ತ ಕಲೆಹಾಕಿದೆ.
ಎರಡನೇ ದಿನದಾಟದ ಅಂತ್ಯಕ್ಕೆ ಭಾರತ 5 ವಿಕೆಟ್ ಕಳೆದುಕೊಂಡು 358 ರನ್ ಗಳಿಸಿತ್ತು. ಮೂರನೇ ದಿನದಾಟದಲ್ಲಿ ಟೀಂ ಇಂಡಿಯಾ 9 ವಿಕೆಟ್ ಗೆ 500 ರನ್ ಪೇರಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ಇದರೊಂದಿಗೆ ಭಾರತ 304 ರನ್ ಗಳ ಮುನ್ನಡೆ ಸಾಧಿಸಿದೆ.
ಕನ್ನಡಿಗ ಕೆಎಲ್ ರಾಹುಲ್ ಬರ್ಜರಿ 158 ರನ್ ಹಾಗೂ ಅಜಿಂಕ್ಯ ರಹಾನೆ 108 ರನ್ ಗಳ ಕೊಡುಗೆ ತಂಡ ಬೃಹತ್ ಮೊತ್ತ ಕಲೆ ಹಾಕಲು ಸಾಧ್ಯವಾಯಿತು.
ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ ನಲ್ಲಿ 196 ರನ್ ಗಳಿಗೆ ಆಲೌಟ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


