3ನೇ ಟೆಸ್ಟ್: ವಿಂಡೀಸ್ ವಿರುದ್ಧದ ಮೊದಲ ಇನ್ನಿಂಗ್ಸ್ ಭಾರತ 353ಕ್ಕೆ ಆಲೌಟ್
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 353 ರನ್ ಗೆ ಆಲೌಟ್ ಆಗಿದೆ...

ಸೇಂಟ್ ಲೂಸಿಯಾ: ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ 353 ರನ್ ಗೆ ಆಲೌಟ್ ಆಗಿದೆ.
ಡರೇನ್ ಸಮಿ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ವೆಸ್ಟ್ ಇಂಡೀಸ್ ಫಿಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಹೀಗಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಅನುಭವಿಸಿತು. ಈ ಮಧ್ಯೆ ಟೀಂ ಇಂಡಿಯಾಗೆ ಆಸರೆಯಾಗಿದ್ದು ಕನ್ನಡಿಗ ಕೆಎಲ್ ರಾಹುಲ್ ಹಾಗೂ ಆಲ್ ರೌಂಡರ್ ಆರ್ ಅಶ್ವಿನ್. ಈ ಇಬ್ಬರ ಅರ್ಧಶತಕ ಟೀಂ ಇಂಡಿಯಾ ಅಲ್ಪ ಮೊತ್ತಕ್ಕೆ ಕುಸಿಯುವುದನ್ನು ತಪ್ಪಿಸಿತು.
ಆರಂಭಿಕರಾಗಿ ಬಂಧ ಕೆಎಲ್ ರಾಹುಲ್ 50 ರನ್ ಗಳಿಸಿ ಔಟಾದರೆ, ಶಿಖರ್ ಧವನ್ 1 ರನ್ ಗೆ ಪೆವಿಲಿಯನ್ ಸೇರಿದರು. ನಂತರ ಬಂದ ನಾಯಕ ವಿರಾಟ್ ಕೊಹ್ಲಿ ಸಹ ಕಮಾಲ್ ಮಾಡುವಲ್ಲಿ ವಿಫಲರಾದರು. 3 ರನ್ ಗಳಿಸಿ ಕೊಹ್ಲಿ ಔಟಾದರು. ಬಳಿಕ ಬಂದ ಅಂಜಿಕ್ಯ ರಹಾನೆ ತಂಡಕ್ಕೆ ಚೇತರಿಕೆ ನೀಡಿದರು. 35 ರನ್ ಗಳಿಸಿದ್ದ ರಹಾನೆ ನಿರ್ಗಮನದ ಬಳಿಕ ಬಂದ ರೋಹಿಶ್ ಶರ್ಮಾರ ಸ್ಫೋಟಕ ಆಟ ಪ್ರೇಕ್ಷಕರಿಗೆ ಕಾಣಲಿಲ್ಲ. ರೋಹಿತ್ ಸಹ ಬಂದ ದಾರಿಗೆ ಸುಂಕವಿಲ್ಲ ಎಂಬಂತೆ 9 ರನ್ ಗಳಿಸಿ ಔಟಾದರು.
ಬಳಿಕ ಅಶ್ವಿನ್ ಹಾಗೂ ವೃದ್ಧಿಮಾನ್ ಸಾಹಾ ಜತೆಯಾಟ ತಂಡ ಗೌರವ ಮೊತ್ತ ಕಲೆ ಹಾಕಲು ಕಾರಣವಾಯಿತು. ಅಶ್ವಿನ್ 118 ರನ್ ಹಾಗೂ ಸಾಹಾ 104 ರನ್ ಗೆ ಔಟಾದರು.
ವೆಸ್ಟ್ ಇಂಡೀಸ್ ಪರ ಜೋಸೆಫ್, ಚೇಸ್ ತಲಾ 2 ವಿಕೆಟ್ ಪಡೆದರೆ, ಗೇಬ್ರಿಯಲ್ 1 ವಿಕೆಟ್ ಪಡೆದಿದ್ದಾರೆ.
ಟೀಂ ಇಂಡಿಯಾ ಸರ್ವಪತನ ನಂತರ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ವೆಸ್ಟ್ ಇಂಡೀಸ್ 1 ವಿಕೆಟ್ ನಷ್ಟಕ್ಕೆ 107 ರನ್ ಗಳಿಸಿದೆ.
84 ವರ್ಷಗಳ ದಾಖಲೆ ಮುರಿದ ಅಶ್ವಿನ್- ಸಾಹಾ ಜೋಡಿ
ಅಶ್ವಿನ್- ಸಾಹಾ ಜೋಡಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿಯೇ ಹೊಸ ದಾಖಲೆ ನಿರ್ಮಿಸಿದ್ದಾರೆ. ಟೆಸ್ಟ್ ಪಂದ್ಯದ ಒಂದೇ ಇನ್ನಿಂಗ್ಸ್ ನಲ್ಲಿ 6 ಮತ್ತು 7ನೇ ಕ್ರಮಾಂಕದ ಆಟಗಾರರು ಶತಕ ಸಿಡಿಸಿ ಸಾಧನೆ ಮಾಡಿದ್ದಾರೆ. ಈ ಇಬ್ಬರು ಆಟಗಾರರು 6ನೇ ವಿಕೆಟ್ ಜತೆಯಾಟದಲ್ಲಿ ಬರೋಬ್ಬರಿ 213 ರನ್ ಕಲೆ ಹಾಕಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


