ಕ್ರಿಕೆಟ್

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್, 36 ರನ್‍ಗಳ ಜಯ

ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 36 ರನ್ ಗಳಿಂದ ಜಯಗಳಿಸಿದೆ...

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಇನ್ನಿಂಗ್ಸ್, 36 ರನ್‍ಗಳ ಜಯ
ಟೀಂ ಇಂಡಿಯಾ
Published On :
ಮುಂಬೈ: ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಇನ್ನಿಂಗ್ಸ್ ಹಾಗೂ 36 ರನ್ ಗಳಿಂದ ಜಯಗಳಿಸಿದೆ. 
ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ತಂಡವನ್ನು ಭಾರತ 195 ರನ್ ಗಳಿಗೆ ಆಲೌಟ್ ಮಾಡಿ ಪಂದ್ಯವನ್ನು ಜಯಿಸಿದೆ. 
ಇಂಗ್ಲೆಂಡ್ 400 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಮೊದಲ ಇನ್ನಿಂಗ್ಸ್ ಪ್ರಾರಂಭಿಸಿದ ಟೀಂ ಇಂಡಿಯಾ 631 ರನ್ ಗಳಿಗೆ ಆಲೌಟ್ ಆಗಿದ್ದು 231 ರನ್ ಗಳ ಮುನ್ನಡೆ ಪಡೆದಿತ್ತು. ಬಳಿಕ ಎರಡನೇ ಇನ್ನಿಂಗ್ಸ್ ಪ್ರಾರಂಭಿಸಿದ್ದ ಇಂಗ್ಲೆಂಡ್ 195 ರನ್ ಗಳಿಗೆ ಆಲೌಟ್ ಆಗಿದೆ. 
ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ ಪರ ಕೂಕ್ 46, ಜೆನ್ನಿಂಗ್ಸ್ 112, ರೂಟ್ 21, ಮೊಹಿನ್ ಅಲಿ 50, ಬಟ್ಲರ್ 76 ಮತ್ತು ಬಾಲ್ 31 ರನ್ ಗಳಿಸಿಸಿದ್ದರು. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ್ದ ಟೀಂ ಇಂಡಿಯಾ ಪರ ಕೆಎಲ್ ರಾಹುಲ್ 24, ಮುರಳಿ ವಿಜಯ್ 136, ಚೇತೇಶ್ವರ ಪೂಜಾರ 47, ವಿರಾಟ್ ಕೊಹ್ಲಿ 235,  ಜಯಂತ್ ಯಾದವ್ 104 ರನ್ ಗಳಿಸಿದ್ದರು. 
ಇಂಗ್ಲೆಂಡ್ ಪರ ರಶೀದ್ 4, ಮೊಹಿನ್ ಅಲಿ ಮತ್ತು ರೂಟ್ ತಲಾ 2 ವಿಕೆಟ್ ಪಡೆದಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 3 ಪಂದ್ಯಗಳನ್ನು ಗೆದ್ದು ಸರಣಿಯನ್ನು ಕೈವಶ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.