ಕ್ರಿಕೆಟ್

ಕನ್ನಡಿಗ ಕೆಎಲ್ ರಾಹುಲ್ ಶತಕವನ್ನು ತನ್ನದೇ ಶತಕದಂತೆ ಸಂಭ್ರಮಿಸಿದ ವಿರಾಟ್ ಕೊಹ್ಲಿ

ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಶತಕ ಸಿಡಿಸಿದ್ದು ಈ ವೇಳೆ ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ತನ್ನದೇ ಶತಕದಂತೆ...

ಕನ್ನಡಿಗ ಕೆಎಲ್ ರಾಹುಲ್ ಶತಕವನ್ನು ತನ್ನದೇ ಶತಕದಂತೆ ಸಂಭ್ರಮಿಸಿದ ವಿರಾಟ್ ಕೊಹ್ಲಿ
ವಿರಾಟ್ ಕೊಹ್ಲಿ, ಕೆಎಲ್ ರಾಹುಲ್
Published On :
ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಶತಕ ಸಿಡಿಸಿದ್ದು ಈ ವೇಳೆ ಟೀಂ ಇಂಡಿಯಾದ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ತನ್ನದೇ ಶತಕದಂತೆ ಸಂಭ್ರಮಿಸಿದ್ದಾರೆ. 
ಚೆನ್ನೈನಲ್ಲಿ ನಡೆಯುತ್ತಿರುವ ಕೊನೆಯ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿಯಾಗಿ ಬ್ಯಾಟಿಂಗ್ ಮಾಡಿದ್ದಾರೆ. ರಾಹುಲ್ 98 ರನ್ ಗಳಿಸಿದ್ದಾಗ ಸ್ಟೋಕ್ಸ್ ಎಸೆತದಲ್ಲಿ ಎಗ್ ಸೈಡ್ ಗೆ ಚೆಂಡನ್ನು ಹೊಡೆದು ರನ್ ಗಳಿಸಿದ್ದಾಗ ವಿರಾಟ್ ಕೊಹ್ಲಿ ಅವರು ತಾವೇ ಸೆಂಚೂರಿ ಸಿಡಿಸಿದಂತೆ ಸಂಭ್ರಮಿಸಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 
ಐದನೇ ಟೆಸ್ಟ್ ನಲ್ಲಿ ಇಂಗ್ಲೆಂಡ್ ಪ್ರಥಮ ಇನ್ನಿಂಗ್ಸ್ ನಲ್ಲಿ 477 ರನ್ ಗಳಿಸಿ ಆಲೌಟ್ ಆಗಿದೆ. ನಂತರ ಇನ್ನಿಂಗ್ಸ್ ಪ್ರಾರಂಭಿಸಿದ್ದ ಟೀಂ ಇಂಡಿಯಾ 391 ರನ್ ಗೆ ನಾಲ್ಕು ವಿಕೆಟ್ ಕಳೆದುಕೊಂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.