ಕ್ರಿಕೆಟ್

ಕೆಎಲ್ ರಾಹುಲ್ ಬಳಿಕ ಶತಕ ಸಿಡಿಸಿದ ಕನ್ನಡಿಗ ಕರುಣ್ ನಾಯರ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ...

ಕೆಎಲ್ ರಾಹುಲ್ ಬಳಿಕ ಶತಕ ಸಿಡಿಸಿದ ಕನ್ನಡಿಗ ಕರುಣ್ ನಾಯರ್
Karun Nair
Published On :
ಚೆನ್ನೈ: ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಶತಕ ಸಿಡಿಸಿ ಸಂಭ್ರಮಿಸಿದ್ದಾರೆ. 
ಚೆನ್ನೈನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಕರುಣ್ ನಾಯರ್ ಚೊಚ್ಚಲ ಶತಕ ಸಿಡಿಸಿದ್ದಾರೆ. 212 ಎಸೆತಗಳಲ್ಲಿ ಕರುಣ್ ನಾಯರ್ 117 ರನ್ ಗಳಿಸಿ ಆಡುತ್ತಿದ್ದಾರೆ. 
ಮೂರನೇ ದಿನದಾಟದಂದು ಕೆಎಲ್ ರಾಹುಲ್ ಅವರು ಭರ್ಜರಿ ಶತಕ ಸಿಡಿಸಿದ್ದರು. 311 ಎಸೆತಗಳಲ್ಲಿ 199 ರನ್ ಗಳನ್ನು ಬಾರಿಸಿದ್ದ ರಾಹುಲ್ 1 ರನ್ ನಿಂದ ದ್ವಿಶತಕ ವಂಚಿತರಾಗಿದ್ದರು. 
ಪ್ರಥಮ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 477 ರನ್ ಗೆ ಆಲೌಟ್ ಆಗಿದ್ದು ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್ ನಲ್ಲಿ 5 ವಿಕೆಟ್ ನಷ್ಟಕ್ಕೆ 453 ರನ್ ಗಳಿಸಿ ಆಡುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.