ಅಜರುದ್ದೀನ್ ದಾಖಲೆ ಸರಿಗಟ್ಟಿದ ಕ್ಯಾಪ್ಟನ್ ವಿರಾಟ್ ಕೊಹ್ಲಿ!
ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಮಹಮದ್ ಅಜರುದ್ದೀನ್ ಅವರ ದಾಖಲೆಯೊಂದನ್ನು ಚೆನ್ನೈನಲ್ಲಿ ಸರಿಗಟ್ಟಿದ್ದಾರೆ.

ಚೆನ್ನೈ: ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮಾಜಿ ನಾಯಕ ಮಹಮದ್ ಅಜರುದ್ದೀನ್ ಅವರ ದಾಖಲೆಯೊಂದನ್ನು ಚೆನ್ನೈನಲ್ಲಿ ಸರಿಗಟ್ಟಿದ್ದಾರೆ.
ಟೀಂ ಇಂಡಿಯಾದ ನಾಯಕರಾಗಿ ಅತೀ ಹೆಚ್ಚು ಪಂದ್ಯವನ್ನು ಗೆಲ್ಲಿಸಿಕೊಟ್ಟ ದಾಖಲೆ ಪೈಕಿ ಮಹಮದ್ ಅಜರುದ್ದೀನ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಕೊಹ್ಲಿ ಸರಿಗಟ್ಟಿದ್ದು, ಇಂಗ್ಲೆಂಡ್ ವಿರುದ್ಧ ಚೆನ್ನೈ ಟೆಸ್ಟ್ ಪಂದ್ಯವನ್ನು ಇನ್ನಿಂಗ್ಸ್ ಮತ್ತು 75 ರನ್ ಗಳ ಅಂತದರಲ್ಲಿ ಜಯಿಸುವ ಮೂಲಕ ವಿರಾಟ್ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಚೆನ್ನೈ ಪಂದ್ಯದ ಗೆಲುವಿನ ಮೂಲಕ ಕೊಹ್ಲಿ ತಮ್ಮ ನೇತೃತ್ವದಲ್ಲಿನ ತಂಡದ ಗೆಲುವಿನ ಸಂಖ್ಯೆಯನ್ನು 14ಕ್ಕೆ ಏರಿಸಿಕೊಂಡರು. ಅಜರುದ್ದೀನ್ ಕೂಡ ತಮ್ಮ ನಾಯಕತ್ವದಲ್ಲಿ 14 ಟೆಸ್ಟ್ ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಆ ಮೂಲಕ ಕೊಹ್ಲಿ, ಅಜರುದ್ದೀನ್ ಅವರ ದಾಖಲೆ ಸರಿಗಟ್ಟಿದ್ದು, ಟೀಂ ಇಂಡಿಯಾ ನಾಯಕರಾಗಿ ಅತೀ ಹೆಚ್ಚು ಪಂದ್ಯವನ್ನು ಗೆಲ್ಲಿಸಿಕೊಟ್ಟ ನಾಯಕರ ಪಟ್ಟಿಯಲ್ಲಿ ಅಜರುದ್ದೀನ್ ಹಾಗೂ ಕೊಹ್ಲಿ ಜಂಟಿ ಮೂರನೇ ಸ್ಥಾನದಲ್ಲಿದ್ದಾರೆ.
ಪಟ್ಟಿಯಲ್ಲಿ ಎಂಎಸ್ ಧೋನಿ ಅಗ್ರ ಸ್ಥಾನದಲ್ಲಿದ್ದು, ಧೋನಿ ಒಟ್ಟು 27 ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ಅಂತೆಯೇ ಎರಡನೇ ಸ್ಥಾನದಲ್ಲಿ ಮಾಜಿ ನಾಯಕ ಸೌರವ್ ಗಂಗೂಲಿ ಇದ್ದು, ಅವರು ಒಟ್ಟು 21 ಪಂದ್ಯಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


