ಕ್ರಿಕೆಟ್

ಉಗ್ರರ ಬಂಧನ ನಂತರ ಆಸ್ಟ್ರೇಲಿಯಾ-ಪಾಕ್ ಟೆಸ್ಟ್ ಪಂದ್ಯಕ್ಕೆ ಹೆಚ್ಚಿನ ಭದ್ರತೆ

ಆಸ್ಟ್ರೇಲಿಯಾದ ಮೆಲ್ಬೊರ್ನ್ ನಗರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ಸೋಮವಾರ...

ಉಗ್ರರ ಬಂಧನ ನಂತರ ಆಸ್ಟ್ರೇಲಿಯಾ-ಪಾಕ್ ಟೆಸ್ಟ್ ಪಂದ್ಯಕ್ಕೆ ಹೆಚ್ಚಿನ ಭದ್ರತೆ
ಕ್ರಿಕೆಟ್
Published On :
ಮೆಲ್ಬೊರ್ನ್: ಆಸ್ಟ್ರೇಲಿಯಾದ ಮೆಲ್ಬೊರ್ನ್ ನಗರದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸುತ್ತಿದ್ದ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ಸೋಮವಾರ ಮೆಲ್ಬೊರ್ನ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಆಸ್ಟ್ರೇಲಿಯಾ-ಪಾಕಿಸ್ತಾನ ನಡುವೆ ಪಂದ್ಯಕ್ಕೆ ಹೆಚ್ಚಿನ ಭದ್ರತೆಯನ್ನು ಒದಗಿಸಲಾಗಿದೆ. 
ಕ್ರಿಸ್ಮಸ್ ದಿನಾದಂದು ಫೆಡರೇಷನ್ ಸ್ಕ್ವೇರ್ ಮತ್ತು ಸೆಂಟ್ ಪೌಲ್ಸ್ ಕ್ಯಾಥೆಡ್ರಲ್ ಬಳಿಯ ಮೆಲ್ಬೋರ್ನ್ ಫ್ಲಿಂಡೆರ್ಸ್ ಸ್ಟ್ರೀಟ್ ರೈಲು ನಿಲ್ದಾಣವನ್ನು ಸ್ಫೋಟಿಸುವ ಸಂಚನ್ನು ಭಯೋತ್ಪಾದಕರು ಯೋಜಿಸಿದ್ದರು ಎಂದು ಪೊಲೀಸ್ ಆಯುಕ್ತ ಗ್ರಹಾಂ ಆ್ಯಸ್ಟೊನ್ ಅವರು ಹೇಳಿದ್ದಾರೆ. 
ಕಿಸ್ಮಸ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಹಲವು ದಿನಗಳ ಕಾಲ ಅನೇಕ ಕಾರ್ಯಕ್ರಮಗಳು ನಡೆಯಲಿದ್ದು ಈ ಎಲ್ಲಾ ಸಮಾರಂಭಗಳಿಗೆ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದರು. ಇನ್ನು ಇಲ್ಲಿನ ನಡೆಯುವ ಸಮಾರಂಭಗಳ ಮೇಲೆ ನಿರ್ದಿಷ್ಟ ದಾಳಿಗಳಾಗುವ ಯಾವುದೇ ಸಾಧ್ಯತೆಗಳನ್ನು ಗುಪ್ತಚರ ಇಲಾಖೆ ನೀಡಿಲ್ಲ. ಆದರೂ ನಮ್ಮ ಎಚ್ಚರಿಕೆಯಲ್ಲಿ ನಾವಿದ್ದೇವೆ ಎಂದರು. 
ಮೆಲ್ಬೋರ್ನ್ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ-ಪಾಕಿಸ್ತಾನ ಟೆಸ್ಟ್ ಪಂದ್ಯ ನಡೆಯಲಿದ್ದು ಇದಕ್ಕಾಗಿ ವಿಕ್ಟೋರಿಯಾ ಪೊಲೀಸರು ಹೆಚ್ಚಿನ ಭದ್ರತೆಯನ್ನು ಕೈಗೊಳ್ಳಲಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.