ಅಲ್ಪಮೊತ್ತಕ್ಕೆ ಕರ್ನಾಟಕ ಆಲೌಟ್: ರಣಜಿ ಟೂರ್ನಿಯಿಂದ ಹೊರಬೀಳುವ ಸಾಧ್ಯತೆ
ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಕರ್ನಾಟಕ ಮೊದಲ ಇನ್ನಿಂಗ್ಸ್ನಲ್ಲಿ 88 ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ...

Published On :
ವಿಶಾಖಪಟ್ಟಣಂ: ರಣಜಿ ಟ್ರೋಫಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ತಮಿಳುನಾಡು ವಿರುದ್ಧ ಕರ್ನಾಟಕ ಮೊದಲ ಇನ್ನಿಂಗ್ಸ್ನಲ್ಲಿ 88 ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ.
2016-17ನೇ ಸಾಲಿನ ನಾಕೌಟ್ ಸ್ಪರ್ಧೆಯಲ್ಲಿ ಕರ್ನಾಟಕ ಅತ್ಯಂತ ಶೋಚನೀಯವಾಗಿ ಆರಂಭಿಸಿದ್ದು ಅಲ್ಪಮೊತ್ತಕ್ಕೆ ತಂಡವನ್ನು ಆಲೌಟ್ ಮಾಡಿರುವ ತಮಿಳುನಾಡು ಮೊದಲ ಇನ್ನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 111 ರನ್ ಗಳಿಸಿ ಮುನ್ನಡೆ ಸಾಧಿಸಿದೆ.
ಕರ್ನಾಟಕ ತಮಿಳುನಾಡು ತಂಡವನ್ನು ಸಾಧ್ಯವಾದಷ್ಟು ಕಡಿಮೆ ಮೊತ್ತಕ್ಕೆ ಆಲೌಟ್ ಮಾಡಬೇಕಿದೆ. ಇಲ್ಲವಾದರೆ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕರ್ನಾಟಕ ಟೂರ್ನಿನಿಂದ ಹೊರಬೀಳುವ ಸಾಧ್ಯತೆ ಇದೆ.
ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಕೊನೆಯ ಹಾಗೂ ಅಂತಿಮ ಟೆಸ್ಟ್ ನಲ್ಲಿ ಟೀಂ ಇಂಡಿಯಾ ಪರ ಆಡಿದ್ದ ಕೆಎಲ್ ರಾಹುಲ್ 199, ಕರುಣ್ ನಾಯರ್ ಅಜೇಯ 303 ರನ್ ಗಳಿಸಿದ್ದು ಕರ್ನಾಟಕ ಪರ ಹೀರೋಗಳಾಗುವಲ್ಲಿ ವಿಫಲರಾಗಿದ್ದಾರೆ. ರಾಹುಲ್ 4 ರನ್ ಹಾಗೂ ಕರುಣ್ 14 ರನ್ ಗಳಿಗೆ ಔಟಾಗಿ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


