3ನೇ ಬಾರಿಗೆ ಟೀಂ ಇಂಡಿಯಾ ಕಿರಿಯರ ತಂಡ ಏಷ್ಯಾಕಪ್ ಚಾಂಪಿಯನ್
ರಾಹುಲ್ ದ್ರಾವಿಡ್ ಮಾರ್ಗದರ್ಶನದ 19 ವಯೋಮಿತಿ ಭಾರತ ತಂಡ ಕಿರಿಯರ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಪ್ರಶಸ್ತಿ ಜಯಿಸಿದೆ...

ಕೊಲಂಬೊ: ರಾಹುಲ್ ದ್ರಾವಿಡ್ ಮಾರ್ಗದರ್ಶನದ 19 ವಯೋಮಿತಿ ಭಾರತ ತಂಡ ಕಿರಿಯರ ಏಷ್ಯಾಕಪ್ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಪ್ರಶಸ್ತಿ ಜಯಿಸಿದೆ.
ಕೊಲಂಬೊದಲ್ಲಿ ನಡೆದ 3ನೇ ಆವೃತ್ತಿಯ ಟೂರ್ನಿಯ ಫೈನಲ್ ಪಂದ್ಯದಲ್ಲಿ ಅತಿಥೇಯ ಶ್ರೀಲಂಕಾವನ್ನು ಭಾರತ 34 ರನ್ ಗಳಿಂದ ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಭಾರತ ಹಿಮಾಂಶು ರಾಣಾ 71, ಶುಭ್ ಮನ್ ಗಿಲ್ 70 ರನ್ ಗಳ ಕೊಡುಗೆಯಿಂದ ಭಾರತ 8 ವಿಕೆಟ್ ನಷ್ಟಕ್ಕೆ 273 ರನ್ ಗಳನ್ನು ಗಳಿಸಿದ್ದು, ಶ್ರೀಲಂಕಾಗೆ 274 ರನ್ ಗಳ ಸ್ಪರ್ಧಾತ್ಮಕ ಮೊತ್ತ ನೀಡಿತ್ತು. ಈ ಮೊತ್ತವನ್ನು ಬೆನ್ನಟ್ಟಿದ ಶ್ರೀಲಂಕಾ 48.4 ಓವರ್ ಗಳಲ್ಲಿ 239 ರನ್ ಗಳಿಗೆ ಸರ್ವಪತನ ಕಂಡಿತು. ನಾಯಕ ಅಭಿಷೇಕ್ ಶರ್ಮ(37ಕ್ಕೆ 4)ಮಾಂತ್ರಿಕ ಸ್ಪಿನ್ ದಾಳಿಗೆ ಶ್ರೀಲಂಕಾ ಆಟಗಾರರು ತರಗೆಲೆಯಂತೆ ಉದುರಿದರು.
ಟೀಂ ಇಂಡಿಯಾ ಸತತ ಮೂರನೇ ಬಾರಿ ಏಷ್ಯಾಕಪ್ ನಲ್ಲಿ ಪ್ರಶಸ್ತಿ ಜಯಿಸಿದೆ. 2012ರ ಮಲೇಷ್ಯಾದಲ್ಲಿ ನಡೆದ ಮೊದಲ ಆವೃತ್ತಿಯಲ್ಲಿ ಪಾಕ್ ಜತೆ ಭಾರತ ಪ್ರಶಸ್ತಿ ಹಂಚಿಕೊಂಡಿತ್ತು. 2013-14ರ ಯುಎಇನಲ್ಲಿ ನಡೆದ ಟೂರ್ನಿಯಲ್ಲಿ ಪಾಕಿಸ್ತಾನವನ್ನು ಮಣಿಸಿ ಚಾಂಪಿಯನ್ ಆಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


