ಕ್ರಿಕೆಟ್

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಎಲ್ಲರೂ ತನ್ನತ್ತ ತಿರುಗುವಂತೆ ಮಾಡಿದ ಪಾಕ್‌ನ ಧೋನಿ ಅಭಿಮಾನಿ

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ವೇಳೆ ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಯೊಬ್ಬ ತಾನು ಧರಿಸಿದ್ದ ಜರ್ಸಿಯ ಮೂಲಕ...

ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ಎಲ್ಲರೂ ತನ್ನತ್ತ ತಿರುಗುವಂತೆ ಮಾಡಿದ ಪಾಕ್‌ನ ಧೋನಿ ಅಭಿಮಾನಿ
ಎಂಎಸ್ ಧೋನಿ ಅಭಿಮಾನಿ
Published On :
ಮೆಲ್ಬೋರ್ನ್: ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದ ವೇಳೆ ಪಾಕಿಸ್ತಾನದ ಕ್ರಿಕೆಟ್ ಅಭಿಮಾನಿಯೊಬ್ಬ ತಾನು ಧರಿಸಿದ್ದ ಜರ್ಸಿಯ ಮೂಲಕ ಎಲ್ಲರ ಗಮನ ಸೆಳೆದರು. 
ಪಾಕಿಸ್ತಾನ ತಂಡವನ್ನು ಬೆಂಬಲಿಸಲು ಬಂದಿದ್ದ ಪಾಕ್ ಅಭಿಮಾನಿ ತಾನು ತೊಟ್ಟಿದ್ದ ಜರ್ಸಿಯ ಹಿಂಭಾಗದಲ್ಲಿ ಟೀಂ ಇಂಡಿಯಾ ಸೀಮಿತ ಓವರ್ ಗಳ ನಾಯಕ ಎಂಎಸ್ ಧೋನಿಯ ಹೆಸರು ಮತ್ತು ಧೋನಿಯ ಜರ್ಸಿಯ ನಂಬರ್ 7ನ್ನು ಅಚ್ಚು ಹಾಕಿಸಿಕೊಂಡಿದ್ದರು. 
ಧೋನಿ ಹೆಸರಿನ ಜರ್ಸಿ ಧರಿಸಿದ್ದ ಪಾಕ್ ಅಭಿಮಾನಿ ಚಿತ್ರ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಉಭಯ ದೇಶಗಳ ಕ್ರಿಕೆಟ್ ಅಭಿಮಾನಿಗಳ ಮನ ಗೆದ್ದಿದೆ. 
ಇತ್ತೀಚೆಗಷ್ಟೇ ಭಾರತೀಯ ಕ್ರಿಕೆಟ್ ಅಭಿಮಾನಿ ರಿಪಾನ್ ಚೌಧರಿ ಕ್ರಿಕೆಟ್ ಪಂದ್ಯವೊಂದರಲ್ಲಿ ಪಾಕಿಸ್ತಾನದ ಆಲ್ರೌಂಡರ್ ಶಾಹಿದ್ ಅಫ್ರಿದಿ ಹೆಸರಿದ್ದ ಜರ್ಸಿಯನ್ನು ಧರಿಸಿದ್ದ ಎಂಬ ಕಾರಣಕ್ಕೆ ಅಸ್ಸಾಂ ಪೊಲೀಸರು ಆತನನ್ನು ಬಂಧಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಅಫ್ರಿದಿ ಇಂತಹ ಘಟನೆ ನಡೆದಿರುವುದು ಅವಮಾನಕಾರಿ, ಕ್ರಿಕೆಟ್ ನೊಂದಿಗೆ ರಾಜಕೀಯ ಬೆರೆಸುವುದು ಸರಿಯಲ್ಲ ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.