ವೈರಲ್ ಆಯ್ತು ಮೊಹಮದ್ ಕೈಫ್ ಸೂರ್ಯ ನಮಸ್ಕಾರ: ಟ್ವಿಟ್ಟರ್ ಟ್ರೋಲ್ ಗೆ ಗರಂ ಆದ ಕ್ರಿಕೆಟಿಗ
ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮದ್ ಶಮ್ ಪತ್ನಿ ಡ್ರೆಸ್ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದ ನಂತರ ಇದೀಗ ಮತ್ತೊಬ್ಬ ಕ್ರಿಕೆಟಿಗ ಮೊಹಮದ್ ಕೈಫ್ ...

ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಆಟಗಾರ ಮೊಹಮದ್ ಶಮ್ ಪತ್ನಿ ಡ್ರೆಸ್ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದ್ದ ನಂತರ ಇದೀಗ ಮತ್ತೊಬ್ಬ ಕ್ರಿಕೆಟಿಗ ಮೊಹಮದ್ ಕೈಫ್ ಸಮಸ್ಯೆಗೆ ಸಿಲುಕಿದ್ದಾರೆ.
ಸೂರ್ಯ ನಮಸ್ಕಾರದ ವಿವಿಧ ಭಂಗಿಗಳ ಫೋಟೋ ಅಪ್ ಲೋಡ್ ಮಾಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.
ಸೂರ್ಯ ನಮಸ್ಕಾರ ಮಾಡುವುದರಿಂದ ದೇಹಕ್ಕೆ ಪೂರ್ಣಪ್ರಮಾಣದ ವ್ಯಾಯಾಮ ಸಿಗುತ್ತದೆ. ಸೂರ್ಯ ನಮಸ್ಕಾರ ಮಾಡುವುದರಿಂದ ಯಾವುದೇ ಉಪಕರಣಗಳ ಸಹಾಯವಿಲ್ಲದೇ ದೇಹವನ್ನು ದಂಡಿಸಬಹುದು ಎಂದು ಕೈಫ್ ಟ್ವೀಟ್ ಮಾಡಿದ್ದಾರೆ.
ಇನ್ನೂ ಮೊಹಮದ್ ಕೈಫ್ ಟ್ವಿಟ್ಟರ್ ಪೋಸ್ಟ್ ಗೆ ಹಲವರು ರಿಟ್ವೀಟ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇಸ್ಲಾಂ ನಲ್ಲಿ ಸೂರ್ಯ ನಮಸ್ಕಾರವನ್ನು ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ಹೀಗಿದ್ದರು ಯಾಕೆ ಈ ವಿವಾದಾತ್ಮಕ ಪೋಸ್ಟ್ ಗಳನ್ನು ಹಾಕಿದ್ದೀರಾ ಎಂದು ಪ್ರಶ್ನಿಸಿದ್ದಾರೆ.
ತಮ್ಮ ಪೋಸ್ಟ್ ಗೆ ಅಸಮಾಧಾನ ವ್ಯಕ್ತ ಪಡಿಸಿರುವವರಿಗೆ ದಿಟ್ಟ ಉತ್ತರ ನೀಡಿರುವ ಮೊಹಮದ್ ಕೈಫ್, ಅಲ್ಲಾ ನನ್ನ ಹೃದಯಲ್ಲಿದ್ದಾನೆ. ಸೂರ್ಯ ನಮಸ್ಕಾರವನ್ನು ಎಲ್ಲಾ ಧರ್ಮದವರು ಮಾಡಿ ಅದರ ಲಾಭ ಪಡೆದುಕೊಳ್ಳಬಹುದು ಎಂದು ತಿರುಗೇಟು ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


